ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಸಾಮಾಜಿಕ ಹೋರಾಟಗಾರ್ತಿ..!

By Suvarna News  |  First Published Sep 20, 2020, 4:31 PM IST

ಶನಿವಾರ ಅಷ್ಟೇ ಜೆಡಿಎಸ್ ನಾಯಕ ರಮೇಶ್ ಬಾಬು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಇದೀಗ ಪ್ರಭಾವಿ ಮಹಿಳೆಯೊಬ್ಬರು ಡಿಕೆಶಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದ್ದಾರೆ. 


ಬೆಂಗಳೂರು, (ಸೆ.20): ಲೈಂಗಿಕ ಅಲ್ಪಸಂಖ್ಯಾತ ಹಾಗೂ ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಇಂದು (ಭಾನುವಾರ) ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಡಾ.  ಅಕೈ ಪದ್ಮಶಾಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

Latest Videos

undefined

60 ನಾಯಕರು ಕಾಂಗ್ರೆಸ್ ಸೇರಲು ಅರ್ಜಿ: ಪಕ್ಷಾಂತರ ಪರ್ವಕ್ಕೆ ಮುನ್ನುಡಿ ಬರೆದ ಜೆಡಿಎಸ್ ನಾಯಕ

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಸೌಮ್ಯಾ ರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಲ್ ಶಂಕರ್, ಉಪಮುಖ್ಯಸ್ಥರಾದ ವಿ.ಆರ್. ಸುದರ್ಶನ್,  ಮಾಜಿ ಸಚಿವೆಯರಾದ ಉಮಾಶ್ರೀ, ಜಯಮಾಲ ಮತ್ತಿತರರು ಇದ್ದರು.

ಅಕೈ ಪದ್ಮಶಾಲಿ ಲೈಂಗಿಕ ಅಲ್ಪಸಂಖ್ಯಾತ ಅಥವಾ ಮಂಗಳಮುಖಿಯರ ಪರವಾಗಿ ಹಲವು ವರ್ಷಗಳಿಂದ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇವರು ರಾಜ್ಯೋತ್ಸವ ಪ್ರಶಸ್ತಿ ವಿಜೇತೆಯೂ ಹೌದು.

ಮಾನವ ಹಕ್ಕುಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧವಾಗಿ ಹಲವು ವರ್ಷಗಳಿಂದ ಧ್ವನಿ ಎತ್ತುತ್ತಿದ್ದಾರೆ. ಮಂಗಳಮುಖಿಯರಿಗೆ ಸಮಾಜದಲ್ಲಿ ಗೌರವದ ಸ್ಥಾನಮಾನ ಸಿಗಬೇಕು ಎಂಬುವುದು ಇವರ ಬೇಡಿಕೆಯಾಗಿದೆ.

ಇದನ್ನೂ ನೋಡಿ | ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಮುಖಂಡ ರಮೇಶ್ ಬಾಬು

"

 

click me!