ಖಜಾನೆ ಖಾಲಿ ಆಗಿಲ್ಲ, ರಾಜ್ಯ ದಿವಾಳಿಯು ಸಹ ಆಗಿಲ್ಲ: ಯತೀಂದ್ರ ಸಿದ್ದರಾಮಯ್ಯ

By Kannadaprabha News  |  First Published Mar 8, 2024, 12:14 PM IST

ಪ್ರತಿಪಕ್ಷಗಳ ಟೀಕೆಯ ನಡುವೆಯು ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರು ಸಹ ಪಕ್ಷಗಳ ಆರೋಪದಂತೆ ಖಜಾನೆ ಖಾಲಿಯಾಗಿಲ್ಲ, ರಾಜ್ಯ ದಿವಾಳಿಯು ಆಗಿಲ್ಲ ಎಂದು ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಹೇಳಿದರು. 
 


ಟಿ. ನರಸೀಪುರ (ಮಾ.08): ಪ್ರತಿಪಕ್ಷಗಳ ಟೀಕೆಯ ನಡುವೆಯು ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರು ಸಹ ಪಕ್ಷಗಳ ಆರೋಪದಂತೆ ಖಜಾನೆ ಖಾಲಿಯಾಗಿಲ್ಲ, ರಾಜ್ಯ ದಿವಾಳಿಯು ಆಗಿಲ್ಲ ಎಂದು ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಮನ್ನೇಹುಂಡಿ ಗ್ರಾಮದಲ್ಲಿ ಆರಂಭವಾಗಿರುವ ನೂತನ ಚಿಕಿತ್ಸಾಲಯವನ್ನು ಗೋವುಗಳಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ್ದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. 58 ಸಾವಿರ ಕೋಟಿ ವೆಚ್ಚದ ಗ್ಯಾರಂಟಿ ಯೋಜನೆಗಳನ್ನು‌ಜಾರಿ ಗೊಳಿಸಿದರೆ ಸರ್ಕಾರದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರತಿಪಕ್ಷದವರ ಆರೋಪ ಮತ್ತು ಟೀಕೆಯನ್ನು ಮೀರಿ ಎಲ್ಲ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು. ರಾಜ್ಯಕ್ಕೆ ಹೊಸದಾಗಿ 20 ಪಶುಚಿಕಿತ್ಸಾಲಯ ಮಂಜೂರಾಗಿದೆ. ಅದರಲ್ಲಿ ವರುಣ ಕ್ಷೇತ್ರ ವ್ಯಾಪ್ತಿಯ ಕೆಂಪಿ ಸಿದ್ದನಹುಂಡಿ, ಉತ್ತನಹಳ್ಳಿ ಹಾಗೂ ಮನ್ನೇಹುಂಡಿ ಗ್ರಾಮಕ್ಕೆ ಸಚಿವ ಕೆ. ವೆಂಕಟೇಶ್ ಅವರು ಮಂಜೂರು ಮಾಡಿಕೊಟ್ಟಿದ್ದಾರೆ ಎಂದರು.

Latest Videos

undefined

ತುರ್ತು ಸೇವೆಗಳಿಗಾಗಿ ಕ್ಲಿನಿಕ್ ಸ್ಥಾಪನೆ: ಸಚಿವ ಪರಮೇಶ್ವರ್

ಪುರಸಭೆ ಮಾಜಿ ಅಧ್ಯಕ್ಷ ಎನ್. ಸೋಮು, ಸದಸ್ಯರಾದ ನಾಗರಾಜು, ಎಲ್. ಮಂಜುನಾಥ್, ಪ್ರಕಾಶ್, ತಾಪಂ ಮಾಜಿ ಉಪಾಧ್ಯಕ್ಷ ಬಿ. ಮರಯ್ಯ, ಕಿರಗಸೂರು ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ವರುಣ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ತಾಪಂ ಮಾಜಿ ಸದಸ್ಯ ಎಂ. ರಮೇಶ್, ಮಹೇಶ್, ಬಾಬು, ಎಪಿಎಂಸಿ ಮಾಜಿ ಅಧ್ಯಕ್ಷ ಎನ್. ಅನಿಲ್ ಕುಮಾರ್, ಡೇರಿ ಉಪಾಧ್ಯಕ್ಷ ಏಳುಮಲೆ ಮಂಜು, ಗ್ರಾಪಂ ಸದಸ್ಯ ಕಾಮಿನಿ ರಾಜಶೇಖರ್, ಗ್ರಾಪಂ ಮಾಜಿ ಅಧ್ಯಕ್ಷ ಅಶ್ವಿನ್ ಇದ್ದರು.

ಸಿಎಂ ಬದಲಾವಣೆ ಸುದ್ದಿ ಕೇವಲ ವದಂತಿ: ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಸುದ್ದಿಗಳೆಲ್ಲ ಕೇವಲ ಊಹಾಪೋಹ. ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ನಂಬಿಕೆ ಇದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಕೆಲ ಶಾಸಕರು ಹೇಳುತ್ತಾರೆ. ಆದರೆ ಇಂತಹ ಗೊಂದಲಗಳು ಸಹಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ಧರಾಮಯ್ಯ ಹೇಳಿದರು. ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಲಕ್ಷ್ಮಮ್ಮ ಹನುಮಶೆಟ್ಟಿ ಜ್ಞಾಪಕಾರ್ಥ ಮುಖ್ಯಮಂತ್ರಿ ಸಿದ್ಧರಾಮಯ್ಯ ವೈದ್ಯಕೀಯ ಸಲಹೆಗಾರ ಡಾ. ಎಚ್.ರವಿಕುಮಾರ್ ಶೀಗೆತಾಳಮ್ಮ ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಸಭಾಮಂಟಪ, ವಸತಿ ಗೃಹಗಳು ಮತ್ತು ಪಾಕಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ, ಸುದ್ದಿಗಾರರ ಜತೆ ಮಾತನಾಡಿದರು.

ಸಿಎಂ ಆಗುವ ಅರ್ಹತೆ ಪರಮೇಶ್ವರ್‌ಗೆ ಇದೆ: ಸಚಿವ ಕೆ.ಎನ್‌.ರಾಜಣ್ಣ

ಲೋಕಸಭಾ ಚುನಾವಣೆ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಪಕ್ಷದ ವರಿಷ್ಠರು ಇನ್ನೂ ತೀರ್ಮಾನ ಮಾಡಿಲ್ಲ. ನಾನು ಆಕಾಂಕ್ಷಿ ಕೂಡ ಅಲ್ಲಾ, ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೋಣ. ಅವರ ತೀರ್ಮಾನಕ್ಕೆ ಬದ್ಧರಾಗಿರಬೇಕಾಗುತ್ತದೆ. ವರುಣ ಕ್ಷೇತ್ರದ ಜನರು ಕ್ಷೇತ್ರ ಬಿಟ್ಟು ಹೋಗಬೇಡಿ ಎಂದು ಹೇಳುತ್ತಿದ್ದಾರೆ. ವರುಣ ಕ್ಷೇತ್ರ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಡುವುದಿಲ್ಲ’ ಎಂದು ಹೇಳಿದರು. ಜಾತಿಗಣತಿ ವರದಿ ಕುರಿತಂತೆ ಮಾತನಾಡಿ, ‘ಹಿಂದಿನ ಸಿದ್ದರಾಮಯ್ಯ ಸರ್ಕಾರ ಜಾತಿಗಣತಿ ಮಾಡಿಸಿತ್ತು. ಅಂದು ಸರ್ಕಾರ ಅಧಿಕಾರ ಕಳೆದುಕೊಂಡ ಕಾರಣದಿಂದ ಸ್ವೀಕಾರ ಆಗಿರಲಿಲ್ಲ, ಈಗ ಸ್ವೀಕರಿಸಲಾಗಿದೆ. ಜಾತಿ ಗಣತಿಯನ್ನು ಬಿಡುಗಡೆ ಮಾಡುತ್ತೇವೆ, ಇದು ನಮ್ಮ ಸರ್ಕಾರದ ನಿಲುವು. ಜಾತಿಗಣತಿ ಮಾಡುವುದರಿಂದ ಹಲವಾರು ಅನುಕೂಲಗಳಿವೆ ಎಂದು ಸರ್ಕಾರ ಸಮೀಕ್ಷೆ ಮಾಡಿಸಿದೆ’ ಎಂದರು.

click me!