
ಬೆಂಗಳೂರು, (ಸೆ.20): ಸಿದ್ದರಾಮಯ್ಯರನ್ನು ಶೀಘ್ರವೇ ಬಿಜೆಪಿಗೆ ಕರೆ ತರುವೆ. ಅದರಲ್ಲಿ ನಾನು ಯಶಸ್ವಿ ಆಗುವೆ ಎಂದು ಸುರಪುರ ಶಾಸಕ ರಾಜೂಗೌಡ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದೆ.
ವಿಧಾನಸೌಧದಲ್ಲಿ ಇಂದು (ಸೆ.20) ಮಾತನಾಡಿದ ರಾಜೂಗೌಡ, ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆತರಲು ಪ್ರಯತ್ನಿಸುತ್ತಿದ್ದೇನೆ. ಅವರನ್ನು ನಮ್ಮ ಪಕ್ಷಕ್ಕೆ ಕರದುಕೊಂಡು ಬರುವಲ್ಲಿ ಯಶಸ್ವಿ ಆಗುತ್ತೇನೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಎಸ್‌ವೈ
ಕಾಂಗ್ರೆಸ್ನವರೇ ನಮ್ಮ ಪಕ್ಷಕ್ಕೆ ಬರುತ್ತೇವೆ ಎನ್ನುತ್ತಿದ್ದಾರೆ. ಇಲ್ಲಿ ಇದ್ದೋರಿಗೇ ಅವಕಾಶ ಸಿಗುತ್ತಿಲ್ಲ, ಅದಕ್ಕೆ ನಾವೇ ಬೇಡ ಅಂತಿದ್ದೇವೆ ಎಂದರು.
ಕಾಂಗ್ರೆಸ್ಗೆ ಬರುವಂತೆ ನನ್ನನ್ನು ಡಿಕೆಶಿ ಭೇಟಿ ಮಾಡಿಲ್ಲ. ನಾನು ಮೂಲ ಬಿಜೆಪಿಗ. ನಾನು ಕಾಂಗ್ರೆಸ್ಗೆ ಹೋಗಲ್ಲ. ಆದರೂ ಪದೇಪದೆ ನನ್ನ ಹೆಸರನ್ನು ಯಾಕೆ ತರುತ್ತಿದ್ದಾರೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೆ ಧ್ವನಿಗೂಡಿಸಿದ ಶಾಸಕ ಎಂ.ಪಿ. ಕುಮಾರಸ್ವಾಮಿ, ನಾನೂ ಕಾಂಗ್ರೆಸ್ಗೆ ಹೋಗಲ್ಲ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ನಮ್ಮ ಪಕ್ಷದಲ್ಲಿ ನಮ್ಮವರೇ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.