
ವಿಜಯಪುರ(ಮೇ.27): ಹೊಸ ನೋಟುಗಳನ್ನೇ ಈಗ ವಾಪಾಸು ಪಡೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ. ಪ್ರಧಾನಿ ಮೋದಿ ಮನಬಂದಂತೆ ವರ್ತಿಸುತ್ತಿದ್ದಾರೆ. ರೈತರ ಆದಾಯ ದ್ವಿಗುಣ ಮಾಡುವ ಮಾತು ಬಿಜೆಪಿ ನಾಯಕರಿಗೆ ಈಗ ನೆನಪಿಲ್ಲವೇ? ಎಂದು ಕಾಂಗ್ರೆಸ್ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು, ನಿಯಮಾವಳಿ ರೂಪಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಆದರೆ ಜೆಡಿಎಸ್, ಬಿಜೆಪಿ ಪಕ್ಷಗಳು ತರಾತುರಿಯಲ್ಲಿ ಗ್ಯಾರಂಟಿ ಈಡೇರಿಸುತ್ತಿಲ್ಲ ಎಂದು ವಿನಾಕಾರಣ ಒತ್ತಡ ತರುವ ಕೆಲಸ ಮಾಡುತ್ತಿವೆ ಎಂದು ದೂರಿದರು.
ವಿಜಯಪುರ: ಟ್ರಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಸರ್ಕಾರ ಈಗತಾನೇ ರಚನೆಯಾಗಿದ್ದು, ಖಾತೆ ಹಂಚಿಕೆ ಸಹ ಆಗಿಲ್ಲ. ಸಾರ್ವಜನಿಕರಿಗೂ ಸಹ ಈ ವಿಷಯ ಬಗ್ಗೆ ಅರಿವಿದೆ. ಆದರೆ ವಿನಾಕಾರಣ ರಾಜಕೀಯ ಪಕ್ಷಗಳು ಗ್ಯಾರಂಟಿ ವಿಷಯವಾಗಿ ರಾಜಕಾರಣ ಮಾಡುತ್ತಿವೆ, ಈ ಹಿಂದೆ ಚುನಾವಣೆ ಸಂಧರ್ಭದಲ್ಲಿ ಈ ಗ್ಯಾರಂಟಿಗಳನ್ನು ಘೋಷಿಸಿದವರೆ ಆ ಗ್ಯಾರಂಟಿ ಅನುಷ್ಠಾನಕ್ಕೆ ಅಜೆಂರ್‍ಟ್ ಮಾಡುತ್ತಿದ್ದಾರೆ. ಚುನಾವಣೆಯ ಭಯಂಕರ ಸೋಲಿನ ಹತಾಶೆಯಿಂದಾಗಿ ವಿರೋಧ ಪಕ್ಷಗಳು ಈ ರೀತಿ ಗೊಂದಲ ಸೃಷ್ಟಿಸುತ್ತಿವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ 100 ದಿನಗಳಲ್ಲಿ ವಿದೇಶಗಳಿಂದ ಕಪ್ಪುಹಣ ತರುವ ಭರವಸೆ ನೀಡಿದ್ದರು, ಆದರೆ, ದಶಕ ಕಳೆದರೂ ಈ ಮಾತು ಅವರಿಗೆ ನೆನಪಿಲ್ಲ, ಈ ಬಗ್ಗೆ ಬಿಜೆಪಿ ನಾಯಕರು ಏಕೆ ಮೌನವಾಗಿದ್ದಾರೆ ಸುಳ್ಳು ಹೇಳುವಲ್ಲಿ ನರೇಂದ್ರ ಮೋದಿ ಅವರಿಗೆ ಡಾಕ್ಟರೇಟ್ ಕೊಡಬೇಕು ಎಂದು ವ್ಯಂಗ್ಯವಾಡಿದರು.
ಸೀರೆಯಿಂದ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಬಾಲಕಿ ಆತ್ಮ ಹತ್ಯೆ!
ಕೊರೊನಾ ಸಂದರ್ಭದಲ್ಲಿ ಜಾರಿಗೊಳಿಸಿದ್ದ .20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಎಲ್ಲಿ ಖರ್ಚಾಗಿದೆ. ಯಾವ ರೀತಿ ಅದನ್ನು ವಿನಿಯೋಗಿಸಲಾಗಿದೆ ಎಂಬ ಯಾವ ಮಾಹಿತಿಯನ್ನೂ ಕೂಡ ಕೇಂದ್ರ ಸರ್ಕಾರ ನೀಡಿಲ್ಲ. ಈ ಬಗ್ಗೆಯೂ ಯಾರೂ ಚಕಾರ ಎತ್ತುತ್ತಿಲ್ಲ. ಅಣ್ಣಾ ಹಜಾರೆ, ಬಾಬಾ ರಾಮದೇವ್ ಸಹ ಈ ವಿಷÜಯದಲ್ಲಿ ಮೌನ ವಹಿಸಿದ್ದಾರೆ. ಕಪ್ಪುಹಣದ ಬಗ್ಗೆ ದೊಡ್ಡ ಧ್ವನಿ ಎತ್ತಿದ್ದ ಬಾಬಾ ರಾಮದೇವ ಈಗ ಮೌನಿ ಬಾಬಾ ಆಗಿದ್ದಾರೆ. ಅಣ್ಣಾ ಹಜಾರೆ ಮನೆಯಲ್ಲಿ ಮಲಗಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯ ನದಿಗಳ ಜೋಡಣೆ ಮಹಾತ್ವಾಕಾಂಕ್ಷೆಯ ಯೋಜನೆ ಘೋಷಣೆಯಲ್ಲಿ ಮಾತ್ರ ಉಳಿಯಿತು. ಆರಂಭವಾಗಲೇ ಇಲ್ಲ. ಈಗೀಗ ನದಿ ಜೋಡಣೆ ಶಬ್ದವನ್ನೇ ಬಿಜೆಪಿ ಕೇಂದ್ರ ನಾಯಕರು ಪ್ರಯೋಗಿಸುತ್ತಿಲ್ಲ ಎಂದು ವ್ಯಂಗ್ಯವಾಡಿದರು. ಅದೇ ತೆರನಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಪ್ರತಿಯೊಬ್ಬರಿಗೂ ಸೂರು ಒದಗಿಸಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಆದರೆ, ಈ ಬಗ್ಗೆ ಜೆಡಿಎಸ್, ಬಿಜೆಪಿಯವರು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೋಡೆ, ಮುಂತಾದವರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.