ಯಡಿಯೂರಪ್ಪ ಬೆನ್ನಲ್ಲೇ ಮತ್ತೋರ್ವ ಹಿರಿಯ ನಾಯಕ ಚುನಾವಣೆ ನಿವೃತ್ತಿ ಘೋಷಣೆ

By Suvarna News  |  First Published Jul 24, 2022, 11:47 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಧಾರೆ ಎರೆದುಕೊಟ್ಟಿದ್ದಾರೆ. ಈ ಮೂಲಕ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಇದೀಗ ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಚುನಾವಣೆ ನಿವೃತ್ತಿ ಘೋಷಿಸಿದ್ದಾರೆ.


ತುಮಕೂರು, (ಜುಲೈ24): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕ, ಹಾಲಿ ಸಂಸದ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಹೌದು... ಮುಂದಿನ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜ್ ಸ್ಪಷ್ಟಪಡಿಸಿದ್ದಾರೆ. ಆದ್ರೆ, ದೇವೇಗೌಡ ಅವರು ಸ್ಪರ್ಧೇ ಮಾಡಿದ್ರೆ ಮಾತ್ರ ಮತ್ತೆ ಅವರ ವಿರುದ್ಧ ಕಣಕ್ಕಿಳಿಯುತ್ತೇನೆ ಎಂದರು.

Tap to resize

Latest Videos

ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ: ಬಿಎಸ್‌ವೈ

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲಿಯೂ ಟಿಕೆಟ್ ನೀಡಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದರು.

ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಒಂದು ವೇಳೆ ಅವರು ಸ್ಪರ್ಧಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದರು. ಆದ್ರೆ, ಅವರನ್ನ ಬಿಜೆಪಿಯ ಜಿ.ಎಸ್.ಬಸವರಾಜ್ ಮಣಿಸಿ ಲೋಕಸಭೆಗೆ ಪ್ರವೇಶಿಸಿದ್ದರು.

ತುಮಕೂರಿನಲ್ಲಿ ಸೋತ ಬಳಿಕ ದೇವೇಗೌಡ ಅವರು ಮುಂದಿನ ಬಾರಿ ಅಲ್ಲೇ ಸ್ಪರ್ಧೆ ಮಾಡುತ್ತೇನೆ ಎನ್ನುವ ಮಾತುಗಳನ್ನ ಆಡಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತ ಬಸವರಾಜ್ ಸಹ ದೇವೇಗೌಡ್ರು ಸ್ಪರ್ಧೆ ಮಾಡಿದ್ರೆ, ನಾನು ಸಹ ಅಖಾಡಕ್ಕಿಳಿಯುತ್ತೇನೆ ಎಂದಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲವಾದರೂ ಪಕ್ಷೇತರವಾಗಿ  ನಿಲ್ಲುವುದಾಗಿ ಹೇಳಿದ್ದಾರೆ.

ಈ ಬಾರಿ ಟಿಕೆಟ್ ಕಟ್
ಹೌದು...ಜಿ.ಎಸ. ಬಸವರಾಜ್ ಅವರಿಗೆ ವಯಸ್ಸಾಗಿದ್ದರಿಂದ ಬಿಜೆಪಿ ಹೈಕಮಾಂಡ್ ಈ ಬಾರಿ ಟಿಕೆಟ್ ನೀಡುವುದು ಅನುಮಾನವಾಗಿದೆ. ಕಳೆದ ಬಾರಿ ಲೋಕಸಭೆಗೆ ನಿಲ್ಲಲು ಟಿಕೆಟ್ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕಿತ್ತು. ಆದ್ರೆ, ಯಡಿಯೂರಪ್ಪನವರ ಒತ್ತಡ ಹಾಗೂ ಪ್ರಬಲ ಲಿಂಗಾಯತ ಸಮುದಾಯದ ಮತಗಳ ದೃಷ್ಟಿಯಿಂದ ಕೊನೆಗಳಿಗೆಯಲ್ಲಿ ಬಸವರಾಜ್ ಅವರಿಗೆ ಟಿಕೆಟ್ ನೀಡಲಾಗಿತ್ತು. 

ಆದ್ರೆ, ಈ ಬಾರಿ ನೂರಕ್ಕೆ ನೂರರಷ್ಟು ಅವರಿಗೆ ಟಿಕೆಟ್ ಸಿಗುವುದು ಅನುಮಾನವಿದೆ/ ಇದರಿಂದ ತಾವೇ ಚುನಾವಣೆ ನಿವೃತ್ತಿ ಘೋಷಿಸಿಸಿದ್ದಾರೆ/

click me!