
ಕೊರಟಗೆರೆ (ಏ.16): ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದಕ್ಕೆ 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ. ಒಂದೇ ಬೂತ್‌ನಲ್ಲಿ 2 ಸಾವಿರ ಮತಗಳ ಲೀಡ್ ಕೊಡಿಸಿದ್ದು ಇದೇ ಸೋಮಣ್ಣ ಎಂದು ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ಇಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನೀವು ಮಾತನಾಡುವಾಗ ಅವರ ಅರ್ಹತೆ ಬಗ್ಗೆ ತಿಳಿಯಬೇಕಿದೆ. ನಿಮಗೆ ಅವಕಾಶ ಸಿಕ್ಕಿತು, ನೀವು ಮುಖ್ಯಮಂತ್ರಿ ಆಗಿದ್ದೀರಿ. ಅರ್ಹತೆ ಇದ್ದವರಿಗೆ ಸರಿಯಾದ ಅವಕಾಶ ಸಿಗುವುದಿಲ್ಲ. ನೀವು ಮೇಲೆ ಕುಳಿತಿರುವಿರೆಂದು ಇನ್ನೊಬ್ಬರನ್ನು ಟೀಕೆ ಮಾಡಬೇಡಿ ಎಂದು ಕಿಡಿಕಾರಿದರು.
ಕಾವೇರಿಗಾಗಿ ಮೋದಿಯನ್ನೇ ನಂಬಿದ್ದೇನೆ: ದೇವೇಗೌಡ
ನಾವು ಬಡವರ ಮಕ್ಕಳು, ನಿಮ್ಮ ಹಾಗೆ ಶ್ರೀಮಂತರ ಮಕ್ಕಳಲ್ಲ. ನಾವು ಇನ್ನೊಬ್ಬರ ಬಗ್ಗೆ ರಾಜಕೀಯ ಪ್ರೇರಿತವಾಗಿ ಮಾತನಾಡಲ್ಲ. ಸೋಮಣ್ಣನ ಹಿಂದೆ ನರೇಂದ್ರ ಮೋದಿ, ಅಮಿತ್ ಶಾ ಅಂತಹ ನಾಯಕರು ಇದ್ದಾರೆ. ನನಗೆ ಸಂಸ್ಕಾರ ಹೇಳಿಕೊಟ್ಟ ದೇವೇಗೌಡರು ಜೊತೆಗಿದ್ದಾರೆ ಎಂದರು. ಇದೇ ವೇಳೆ ನಾನು ಯಾರ ಬಗ್ಗೆ ಟೀಕೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್‌ಗೆ ಟಾಂಗ್ ನೀಡಿದರು.
ದೇವೇಗೌಡರ ಸಭೆಗೆ ನುಗ್ಗಿ ಎಚ್ಡಿಕೆ ವಿರುದ್ಧ ಘೋಷಣೆ ಕೂಗಿದ ಕೈ ಕಾರ್ಯಕರ್ತೆಯರು!
ಹಾಲಿ ಸಂಸದ ಬಸವರಾಜು ಗೈರು
ಮೈತ್ರಿಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಾವೇಶದಲ್ಲೂ ಗೈರಾಗಿದ್ದ ತುಮಕೂರು ಹಾಲಿ ಸಂಸದ ಜಿ.ಎಸ್. ಬಸವರಾಜು ಕೊರಟಗೆರೆಯಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿಯವರ ಸಮಾವೇಶದಲ್ಲೂ ಮತ್ತೆ ಗೈರಾದರು. ಅವರು ಭಾಗವಹಿಸದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.