
ತುಮಕೂರು, (ಸೆ.15): ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಪಡೆಯುತ್ತಿದ್ದು, ಸಂಪರ್ಕಕ್ಕೆ ಬಂದವರಿಗೆ ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು
ಈ ಕುರಿತು ಟ್ವಿಟ್ ಮಾಡಿರುವ ಅವರು, ನೆನ್ನೆ ಜ್ವರ ಇದ್ದ ಹಿನ್ನೆಲೆಯಲ್ಲಿ ಕರೋನ ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಅಂತ ಬರೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಟ್ವೀಟ್ ಮಾಡಿ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಇಂದು ಗೌರಿಶಂಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಈ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ಮತ್ತೆ ತೊಡಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರು ಕಳೆದ 6 ತಿಂಗಳಿನಿಂದ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಸಹಾಯ ಮಾಡಿದ್ದಾರೆ. ನಾನೂ ಅವರೊಂದಿಗೆ ಹಲವು ಬಾರಿ ಕೈಜೋಡಿಸಿದ್ದೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.