ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ.ಪಾಟೀಲ್ ಆರೋಪ

Kannadaprabha News   | Kannada Prabha
Published : Jul 12, 2025, 11:41 PM IST
BC Patil

ಸಾರಾಂಶ

ತಾಲೂಕಿನ ಸತ್ತಗಿಹಳ್ಳಿ, ಹಿರೆಮೊರ ಹಾಗೂ ಆಯ್ದ ಭಾಗಗಳಲ್ಲಿ ನೀರಾವರಿ ನಿಗಮದಿಂದ ₹5 ಕೋಟಿ ವೆಚ್ಚದ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಗಳ ಜಂಗಲ್ ಕಟಾವು ಹಾಗೂ ಲೈನಿಂಗ್ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ರಟ್ಟೀಹಳ್ಳಿ (ಜು.12): ತಾಲೂಕಿನ ಸತ್ತಗಿಹಳ್ಳಿ, ಹಿರೆಮೊರ ಹಾಗೂ ಆಯ್ದ ಭಾಗಗಳಲ್ಲಿ ನೀರಾವರಿ ನಿಗಮದಿಂದ ₹5 ಕೋಟಿ ವೆಚ್ಚದ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಗಳ ಜಂಗಲ್ ಕಟಾವು ಹಾಗೂ ಲೈನಿಂಗ್ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು. ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರ ಆರೋಪದ ಮೇರೆಗೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೇಲ್ನೋಟಕ್ಕೆ ಕಳಪೆಯಾಗಿರುವುದು ಸ್ಪಷ್ಟವಾಗಿದೆ.

ಜಂಗಲ್ ಕಟಾವು ಮಾಡಿ ತೆರವುಗೊಳಿಸದೆ ಕಾಲುವೆಗಳಲ್ಲೆ ಬಿಡಲಾಗಿದೆ ಹಾಗೂ ಕಾಲುವೆಗಳ ಲೈನಿಂಗ್ 4 ಇಂಚು ಕಾಂಕ್ರಿಟ್ ಹಾಕುವ ಬದಲು ಕೇವಲ 1.5 ಇಂಚಿನಷ್ಟು ಕಾಂಕ್ರಿಟ್ ಹಾಕುತ್ತಿದ್ದು, ಸರ್ಕಾರದ ಹಣವನ್ನು ಸಂಪೂರ್ಣ ಲೂಟಿ ಹೊಡೆಯಲಾಗುತ್ತಿದೆ. ಆದ್ದರಿಂದ ತಕ್ಷಣ ಕಾಮಗಾರಿ ಸ್ಥಗಿತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಕಳಪೆ ಕಾಮಗಾರಿಯ ಬಗ್ಗೆ ಶಿವಮೊಗ್ಗದ ಮುಖ್ಯ ಎಂಜಿನಿಯರ್ ಜತೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಜೂನ್- ಜುಲೈ ತಿಂಗಳು ತುಂಗಾ ಮೇಲ್ದಂಡೆ ಕಾಮಗಾರಿ ನಡೆಸುವ ಸಮಯವೇ ಅಲ್ಲ. ಜು. 20ರಂದು ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. 15- 20 ದಿನಗಳಲ್ಲಿ ₹5 ಕೋಟಿ ವೆಚ್ಚದ ಕಾಮಗಾರಿಯನ್ನು ತಮಗಿಷ್ಟ ಬಂದಂತೆ ಮುಗಿಸಿ ಸಾರ್ವಜನಿಕರ ಹಣ ಲೂಟಿ ಹೊಡೆಯಲು ಸಂಚು ರೂಪಿಸಿದ್ದು, ಅದಕ್ಕೆ ನಾನು ಆಸ್ಪದ ನೀಡುವುದಿಲ್ಲ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.

ಪಕ್ಷ ಸಂಘಟನೆ: ರಾಜ್ಯ ಚುನಾವಣೆ ಆಯೋಗವು ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ನಡೆಸಲು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಕ್ಕೆ ಸೂಚನೆ ನೀಡಿದ್ದು, ಟಿಕೆಟ್ ಆಕಾಂಕ್ಷಿಗಳು ಕಾರ್ಯಕರ್ತರು ತಮ್ಮ ವಾರ್ಡ್‌ಗಳ ಜನರ ವಿಶ್ವಾಸಕ್ಕೆ ಪಡೆದು ಪಕ್ಷ ಸಂಘಟಿಸಿ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದರು.

ಬಿಜೆಪಿ ತಾಲೂಕಾಧ್ಯಕ್ಷ ದೇವರಾಜ ನಾಗಣ್ಣನವರ, ಗಣೇಶ ವೇರ್ಣೇಕರ್, ಶಂಭಣ್ಣ ಗೂಳಪ್ಪನವರ, ಬಸವರಾಜ ಆಡಿನವರ, ಪರಮೇಶಪ್ಪ ಹಲಗೇರಿ, ರಾಘವೇಂದ್ರ ಹರವಿಶೆಟ್ಟರ್, ರವಿ ಹದಡೇರ, ಮಾಲತೇಶ ಬೆಳಕೆರಿ, ಸಿದ್ದು ಹಲಗೇರಿ, ಹನುಮಂತಪ್ಪ ಗಾಜೇರ್, ಸುಶೀಲ್ ನಾಡಿಗೇರ, ಪ್ರಶಾಂತ ದ್ಯಾವಕ್ಕಳವರ, ಶ್ರೀನಿವಾಸ ಬೈರೋಜಿಯವರ, ಮನೋಜ ಗೋಣೆಪ್ಪನವರ, ಸಿದ್ದು ಸಾವಕ್ಕನವರ, ಬಸವರಾಜ ಕಟ್ಟಿಮನಿ, ಅಬ್ರಾರ ಖಾಜಿ, ಸಿದ್ದಪ್ಪ ಹರಿಜನ ಮುಂತಾದವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ