ಬೊಮ್ಮಾಯಿಯವರೇ ರಾಜೀನಾಮೆ ಕೊಡಿ : ಸಿದ್ದರಾಮಯ್ಯ - ಸಿಎಂ ನಡುವೆ ಜೋರಾದ ಸಮರ

By Suvarna NewsFirst Published Oct 15, 2021, 9:29 AM IST
Highlights
  • ಕೋಮುವಾದ, ಮತೀಯ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವೀಟ್ ಸಮರ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಕೇಳಿದ ಸಿದ್ದರಾಮಯ್ಯ

ಬೆಂಗಳೂರು (ಅ.15): ಕೋಮುವಾದ, ಮತೀಯ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವೀಟ್ ಸಮರವೇ ನಡೆದಿದೆ. 

ಮತೀಯ ವಿಚಾರದ ಬಗ್ಗೆ ಮಾತನಾಡಿದ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಹೇಳಿದ್ದ ಸಿದ್ದರಾಮಯ್ಯಗೆ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಪ್ರತಿಕ್ರಿಯಿಸಿದ್ದರು. 

ಇದಕ್ಕೆ ಟ್ವೀಟ್ ಮೂಲಕವೇ ಉತ್ತರ ನೀಡಿದ್ದ ಸಿದ್ದರಾಮಯ್ಯ ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು. ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ ನೀವು ಏನಾದರೂ ಕಲಿತಿದ್ದರೆ,  ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?

 

ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ.

ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು.

ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು.
ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ
2/9 pic.twitter.com/IYI0fXmodB

— Siddaramaiah (@siddaramaiah)

ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ .

ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ
ನ್ಯಾಯ ಕೊಡಿಸಿ .
8/9 pic.twitter.com/pH5ILL2Br5

— Siddaramaiah (@siddaramaiah)

. ಅವರೇ, ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ , ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ.
9/9 pic.twitter.com/vVSHXWohB5

— Siddaramaiah (@siddaramaiah)

ಮುಖ್ಯಮಂತ್ರಿ ಅವರೇ,
ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು.

ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ
ನೀವು ಏನಾದರೂ ಕಲಿತಿದ್ದರೆ,
ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?
1/9 pic.twitter.com/5vk4JKSBC1

— Siddaramaiah (@siddaramaiah)

ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ.

ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ.

2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ. ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ?

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ.ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ.

ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್. ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ ನ್ಯಾಯ ಕೊಡಿಸಿ.

ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. 

ಬೊಮ್ಮಾಯಿ ಪ್ರತಿ ಸಮರ

ಇದಕ್ಕೆ ಸಿಎಂ ಬೊಮ್ಮಾಯಿ ಅವರು ಪ್ರತಿ ಟ್ವೀಟ್ ಮಾಡಿ ನಿಮ್ಮ ಆಡಳಿತ ಜಂಗಲದ ರಾಜ್ ಆಗಿತ್ತು. ಅದರೆ ಆಗ ನೀವು ಕುರುಡ ಮೂಕ ಆಗಿದ್ದಿರಿ. ನನ್ನ ಅಡಳಿತದಲ್ಲಿ ಇದಕ್ಕೆಲ್ಲಾ ಕ್ರಮಗಳಾಗುತ್ತಿದ್ದು ಅದರೆ ನಿಮ್ಮ ಆಡಲಿತದಲ್ಲಿ ಹಿಂದುಗಳನ್ನು ಕೊಲ್ಲಲಾಯಿತು. ಅನೇಕ ಗಲಭೆಗಳು ನಡೆದವು. 

ನಮ್ಮ ಸಮಾದಲ್ಲಿ ಪ್ರತಿಯೊಂದು ಕ್ರಿಯೆಗೂ ತಕ್ಕ ಪ್ರತಿಕ್ರಿಯೆ ಇರುತ್ತದೆ   ನಿಮ್ಮ ಆಳ್ವಿಕೆಯಲ್ಲಿ ಎಲ್ಲ ಕಡೆ ಹಿಂದೂಗಳನ್ನು ಕೊಲ್ಲಲಾಯಿತು. ನಿಮ್ಮ ಕೈಗಳಲ್ಲಿ ರಕ್ತ ಇಟ್ಟುಕೊಂಡು ಹೇಗೆ ನಿದ್ರಿಸುತ್ತೀರಿ ಎಂದು ಕೇಳಿದ್ದಾರೆ. 

 ನೈತಿಕ ಪೊಲೀಸ್ ಗಿರಿ ವಿಚಾರ :  ಸಿದ್ದರಾಮಯ್ಯ ಮಾಡಿದ ಟ್ವೀಟ್ ದಾಳಿಗೆ ಸಿಎಂ ಪ್ರತಿ ದಾಳಿ ನಡೆಸಿದ್ದು, ಆರೆಸೆಸ್ ಧೋರಣೆಗಳನ್ನು ಟ್ವೀಟ್ ಮೂಲಕ‌ ಖಂಡಿಸಿದ್ದಾರೆ. ತಮ್ಮ ತಂದೆ ಎಸ್ ಆರ್ ಬೊಮ್ಮಾಯಿಯವರು ನನಗೆ ಸಾರ್ವಜನಿಕ ಬದುಕಿನ ಗುಣಗಳನ್ನು ಹೇಳಿಕೊಟ್ಟಿದ್ದಾರೆ. ನಿಮಗೂ ನಮ್ಮ ತಂದೆಯವರು ಅದೇ ರೀತಿಯ ಮಾರ್ಗದರ್ಶನ ಮಾಡಿದ್ದಾರೆ. ನಮ್ಮ ತಂದೆಯವರು ರಾಷ್ಟ್ರೀಯವಾದಿಯಾಗಿದ್ದರು. ಆರೆಸ್ಸೆಸ್ ನದ್ದೂ ರಾಷ್ಟ್ರೀಯವಾದವೇ ಆಗಿದೆ. ನೀವು ಕಾಂಗ್ರೆಸ್ ವಿರುದ್ಧ ವಿಷ ಕಾರುತ್ತಿದ್ದಿರಿ. ಈಗ ಕಾಂಗ್ರೆಸ್‌ನ್ನು ಹೊಗಳುವುದರಲ್ಲಿ ತಾವು ಒಬ್ಬರಾಗಿದ್ದೀರಾ ಎಂದು ಸಿದ್ದರಾಮಯ್ಯ ಗೆ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

click me!