ಬನ್ನಿ ನೋಡಿಯೇ ಬಿಡೋಣ: ಸಿದ್ದರಾಮಯ್ಯಗೆ ಶ್ರೀರಾಮುಲು ಪಂಥಾಹ್ವಾನ

Published : Nov 19, 2019, 06:31 PM IST
ಬನ್ನಿ ನೋಡಿಯೇ ಬಿಡೋಣ: ಸಿದ್ದರಾಮಯ್ಯಗೆ ಶ್ರೀರಾಮುಲು ಪಂಥಾಹ್ವಾನ

ಸಾರಾಂಶ

ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಸಮಯದಲ್ಲೂ ಮತ್ತದೇ ಮಾತಿನ ಸಮರ ಮುಂದುವರಿಸಿದ್ದು, ಸಿದ್ದುಗೆ ರಾಮುಲು ಪಂಥಾಹ್ವಾನ ಕೊಟ್ಟಿದ್ದಾರೆ. ಏನದು..?

ಬೆಂಗಳೂರು, [ನ.19]: ಮಿನಿ ಸಮರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ನಡುವೆ ಆರೋಪ-ಪ್ರತ್ಯಾರೋಪ ಮುಂದುವರಿದಿದೆ.

ಟ್ವೀಟ್ ಮೂಲಕ ಒಬ್ಬರಿಗೊಬ್ಬರು ಬೈದಾಡಿಕೊಂಡಿದ್ದು, ಸಿದ್ದರಾಮಯ್ಯ ಅವರಿಗೆ ಶ್ರೀರಾಮುಲು ಪಂಥಾಹ್ವಾನ ಕೊಟ್ಟಿದ್ದಾರೆ.

ಬಳ್ಳಾರಿ ಅಖಾಡದಲ್ಲಿ ನೀನಾ..? ನಾನಾ..? ಸಿದ್ದು ಸಿಡಿಗುಂಡು ರಣ ರಣ ರಾಮುಲು

ಮೊದಲಿಗೆ ಟ್ವೀಟ್  ಮೂಲಕ ಶ್ರೀರಾಮುಲುಗೆ ಗುದ್ದು ಕೊಟ್ಟ ಸಿದ್ದು, ಸಚಿವ ಶ್ರೀರಾಮುಲು ನನ್ನ ವಿರುದ್ಧ ಚುನಾವಣೆಯಲ್ಲಿ ಸೋತಿದ್ದರು, ಪಾಪ ಇನ್ನೂ ಆ ಹತಾಶೆಯಿಂದ ಹೊರಬಂದಂತೆ ಕಾಣುತ್ತಿಲ್ಲ. ಅದಕ್ಕೆ‌ ಬಾಯಿಗೆ ಬಂದಂತೆ ಮಾತನಾಡುತ್ತಾರೆ.  ಅವರಿಗೆ ಮಾನ ಮರ್ಯಾದೆ ಇದ್ದರೆ ಹಿಂದೆಯೇ ರಾಜೀನಾಮೆ ಕೊಡಬೇಕಿತ್ತು. ಅವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆಂದು ಪ್ರಚಾರ ಮಾಡಿದ್ದರು. ಕೊನೆಗೆ ಉಪಮುಖ್ಯಮಂತ್ರಿ ಮಾಡಿದರಾ? ಎಂದು ಕಾಲೆಳೆದರು.

ಸಿದ್ದರಾಮಯ್ಯ ಅಭಿಮಾನಿಗಳನ್ನ ಬಡಿದೆಬ್ಬಿಸಿದ ಶ್ರೀರಾಮುಲು..!

ಇದಕ್ಕೆ ಶ್ರೀರಾಮುಲು ಸಹ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು,  ಮಾನ್ಯ ಸಿದ್ದರಾಮಯ್ಯನವರೇ, ನಿಮಗೊಂದು ಸವಾಲು. ಬಾದಾಮಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ನೀವು ಗೆದ್ದಿರಬಹುದು. 

ಮೀಸಲಾತಿ ಇಲ್ಲದ ಕ್ಷೇತ್ರವಾದರೂ ಸರಿಯೇ ನನ್ನ ವಿರುದ್ಧ ಗೆದ್ದು ತೋರಿಸಿ. ಶಾಸಕ‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬನ್ನಿ. ನಾನೂ ರಾಜೀನಾಮೆ ಕೊಟ್ಟು ಬರುತ್ತೇನೆ. ಜನ ಯಾರನ್ನು ಗೆಲ್ಲಿಸುತ್ತಾರೋ ನೋಡಿಯೇ ಬಿಡೋಣ ಎಂದು ಸವಾಲು ಹಾಕಿದ್ದಾರೆ.

ಶ್ರೀರಾಮುಲು ಕೋಟೆಗೆ ಸಿದ್ದರಾಮಯ್ಯ ಎಂಟ್ರಿ; ಅಲುಗಾಡುತ್ತಾ ಕಮಲ ಪಾಳಯ?

2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಶ್ರೀರಾಮುಲು ಅವರನ್ನು ಸೋಲಿಸಿದ್ದರು. ಇದೀಗ ರಾಜೀನಾಮೆ ಕೊಟ್ಟು ಬನ್ನಿ ಮತ್ತೆ ಎಲೆಕ್ಷನ್ ಗೆ ಹೋಗೋಣ ಎಂದು ರಾಮುಲು ಸವಾಲು ಎಸೆದಿದ್ದಾರೆ.

ಈ ಹಿಂದೆ ಬಳ್ಳಾರಿ ಲೋಸಕಭಾ ಉಪಚುನಾವಣೆ ವೇಳೆ ಶ್ರೀರಾಮುಲು ಹಾಗೂ ಸಿದ್ದರಾಮಯ್ಯ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಅದು ವಿಧಾನಸಭಾ ಉಪಚುನಾವಣೆಯಲ್ಲೂ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ