
ತುಮಕೂರು (ಏ.08): ಮೈತ್ರಿ ಅಭ್ಯರ್ಥಿ ಸೋಮಣ್ಣ ಮೇಲೆ ಮಾಧುಸ್ವಾಮಿಗೆ ಮುನಿಸು ಇನ್ನೂ ಕಡಿಮೆಯಾಗದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿಯಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಿಕ್ಕನಾಯಕನಹಳ‍್ಳಿ ತಾಲೂಕು ಜೆಸಿ.ಪುರದಲ್ಲಿರುವ ಮಾಧುಸ್ವಾಮಿ ಮನೆಗೆ ಮುದ್ದಹನುಮೇಗೌಡ ಹೂಗುಚ್ಛ ನೀಡಿ ಕುಶಲೋಪರಿ ಮಾತನಾಡಿದರು. ನಗುನಗುತ್ತಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಮಾಧುಸ್ವಾಮಿ ಬರ ಮಾಡಿಕೊಂಡ ಮಾಧುಸ್ವಾಮಿ, ಈ ವೇಳೆ ಹೂಗುಚ್ಚ ಎಲ್ಲಾ ಯಾಕೆ ತಂದಿದ್ದೀರಿ ಎಂದ ಹೇಳಿದ್ದಕ್ಕೆ ನೀವು ಜಿಲ್ಲೆಯ ಹಿರಿಯ ನಾಯಕರಿದ್ದೀರಿ, ನಿಮಗೆ ಗೌರವ ಸಲ್ಲಿಸುವ ಉದ್ದೇಶದಿಂದ ಬಂದಿದ್ದೇವೆ ಎಂದರು.
ಕೆಲಕಾಲ ಈ ಇಬ್ಬರು ನಾಯಕರು ರಹಸ್ಯ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ ಅವರು ಒಬ್ಬ ಅಭ್ಯರ್ಥಿಯಾಗಿ ನಮ್ಮ ಮನೆಗೆ ಬಂದಿದ್ದಾರೆ. ನಾವು ಅವರು ಬಹಳ ಹಳೆಯ ಸ್ನೇಹಿತರು. ಇಬ್ಬರು ಒಟ್ಟಿಗೆ ಶಾಸಕರಾಗಿದ್ದವರು ಎಂದ ಅವರು, ಸ್ನೇಹಿತರು ಅಂತ ಒಬ್ಬ ಅಭ್ಯರ್ಥಿ ಮನೆಗೆ ಬಂದಾಗ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು. ಅಭ್ಯರ್ಥಿಯಾದವರು ಬೆಂಬಲ ಕೇಳಿದ್ದಾರೆ. ನಾವು ಬೇರೆ ಪಕ್ಷದಲ್ಲಿ ಇರುವವರು ಬೆಂಬಲಿಸುವುದಕ್ಕೆ ಆಗುತ್ತದೆಯೇ ಎಂದು ಪ್ರಶ್ನಿಸಿದರು.
ಕೈಗೂಡದ ಮನವೊಲಿಕೆಯ ಪ್ರಯತ್ನ: ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿರುವ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸೋಮಣ್ಣ ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಮಾಧುಸ್ವಾಮಿ ಬೆಂಬಲ ನೀಡಲು ಒಲವು ತೋರಲಿಲ್ಲ ಎನ್ನಲಾಗಿದೆ.
ಲೋಕಸಭಾ ಚುನಾವಣೆ: ಬೆಂಗಳೂರು, ಮಂಗ್ಳೂರಲ್ಲಿ ಏ.14ಕ್ಕೆ ಪ್ರಧಾನಿ ಮೋದಿ ರೋಡ್ ಶೋ
ಚಿಕ್ಕನಾಯಕನಹಳ್ಳಿ ಜೆ.ಸಿ.ಪುರದಲ್ಲಿನ ಮಾಧುಸ್ವಾಮಿ ಮನೆಗೆ ಮಂಗಳವಾರ ಮಾಜಿ ಸಚಿವ ಬಿ.ಸಿ.ನಾಗೇಶ್ ಅವರ ಜತೆ ಭೇಟಿ ನೀಡಿದ ಸೋಮಣ್ಣ ಅವರು ಮಾಧುಸ್ವಾಮಿ ಮನವೊಲಿಕೆಗೆ ಯತ್ನಿಸಿದರು. ಆದರೆ ಮಾಧುಸ್ವಾಮಿ ತಾನು ಯಾವುದೇ ಕಾರಣಕ್ಕೂ ನಿಲುವು ಬದಲಿಸುವುದಿಲ್ಲ. ಜಿಲ್ಲೆಯಲ್ಲಿ ಯುವಕರಿಗೆ ಅವಕಾಶ ಸಿಗಬೇಕೆಂದು ಪಟ್ಟು ಹಿಡಿದರು. ಸಂಸದ ಜಿ.ಎಸ್.ಬಸವರಾಜು ಅವರನ್ನು ನೆಚ್ಚಿಕೊಂಡು ಚುನಾವಣೆ ಮಾಡುವಂತೆ ಸವಾಲೆಸೆದರು ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.