ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಇಬ್ಬರ ಹೆಸರು ಅಂತಿವಾಗಿ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ, (ಡಿ.18): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಇನ್ನೂ ದಿನಕಾಂಕ ನಿಗದಿಯಾಗಿಲ್ಲ. ಆಗಲೇ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ.
ಅಲ್ಲದೇ ಬೆಳಗಾವಿ ಉಪಚುನಾವಣೆಗೆ ಕಣಕ್ಕಿಳಿಯುವ ಇಬ್ಬರು ಅಭ್ಯರ್ಥಿಗಳ ಹೆಸರುಗಳನ್ನ ಕಾಂಗ್ರೆಸ್ ಅಂತಿಮ ಮಾಡಿದ್ದು, ಇದರಲ್ಲಿ ಒಬ್ಬರಿಗೆ ಟಿಕೆಟ್ ನೀಡಲಿದೆ.
undefined
ಇನ್ನು ಈ ಬಗ್ಗೆ ಶುಕ್ರವಾರ ನಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಸಹೋದರಿ ಪುತ್ರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಎರಡು ಹೆಸರುಗಳನ್ನು ಅಂತಿಮಗೊಳಿಸಿದ್ದೇವೆ ಎಂದು ಹೇಳಿದರು.
ಬೆಳಗಾವಿ ಬೈ ಎಲೆಕ್ಷನ್: ಕೊನೆಗೂ ಪ್ರಬಲವಾಗಿ ಕೇಳಿಬಂತು ಒಬ್ಬರ ಹೆಸರು ..!
ಎಲ್ಲ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಗತ್ಯಬಿದ್ದರೆ ಮತ್ತೊಮ್ಮೆ ಸಭೆ ನಡೆಸುತ್ತೇವೆ. ಅನೇಕ ಆಕಾಂಕ್ಷಿಗಳು ಇದ್ದಾರೆ ಎಂದರು. ಆದ್ರೆ, ಅಂತಿಮಗೊಳಿಸುವ ಹೆಸರು ಹೇಳಲಿಲ್ಲ.
ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಸತೀಶ್ ಈ ಭಾಗದ ಪ್ರಮುಖ ನಾಯಕ, ನೋಡೋಣ ಎಂದು ಉತ್ತರಿಸಿದರು.
ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್, ಎಂಬಿ ಪಾಟೀಲ್ ನೇತೃತ್ವದ ಸಮಿತಿಯನ್ನು ರಚಿಸಿದೆ. ಈ ಸಮಿತಿಯೂ ಕೂಡ ಜಿಲ್ಲೆಯ ನಾಯಕರುಗಳ ಜೊತೆ ಸಭೆ ಮಾಡಿದ್ದು, ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ಬಲವಾಗಿ ಕೇಳಿಬಂದಿದೆ.