Hindu Word War: ಕಾಂಗ್ರೆಸ್ ಪಕ್ಷದ ಹಿಂದುಗಳೇ ಜಾಗೃತರಾಗಿ: ಶಾಸಕ ರಘುಪತಿ ಭಟ್

By Govindaraj S  |  First Published Nov 9, 2022, 2:03 PM IST

ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.


ಉಡುಪಿ (ನ.09): ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ನಡೆದ ಸಭೆಯಲ್ಲಿ, ಸತೀಶ್ ಜಾರಕಿಹೊಳಿ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಒಂದೋ ಸತೀಶ್ ಜಾರಕಿಹೊಳಿ ಕ್ಷಮೆ ಕೇಳಬೇಕು, ಇಲ್ಲವೇ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಉಡುಪಿ ಶಾಸಕ ರಘುಪತಿ ಭಟ್, ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರ ಹಾಕಿದರು. 

ಸತೀಶ್, ಈ ಮಾತನ್ನು ವಾಪಾಸ್ ತೆಗೆದುಕೊಳ್ಳಲಿ ಸತೀಶ್ ಜಾರಕಿಹೊಳಿ ತನ್ನ ಹೇಳಿಕೆಯನ್ನು ಮತ್ತೆ ಮತ್ತೆ ಪ್ರತಿಪಾದಿಸುತ್ತಿದ್ದಾರೆ ಇದು ಸರಿಯಲ್ಲ ಎಂದರು. ಸತೀಶ್ ಹೇಳಿಕೆ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳಬೇಕು. ಕಾಂಗ್ರೆಸ್ ಈಗಲಾದರೂ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು. ಸತೀಶ್ ಜಾರಕಿಹೋಳಿಯನ್ನು ಕಾರ್ಯಾದ್ಯಕ್ಷ ಸ್ಥಾನದಿಂದ ಉಚ್ಚಾಟಿಸಿ ಎಂದು ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ಹಿಂದುಗಳು ಜಾಗೃತರಾಗಬೇಕು.ಧರ್ಮದ ವಿಚಾರದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳು ಸರಿಯಲ್ಲ. 

Tap to resize

Latest Videos

undefined

ಸತೀಶ್‌ ಜಾರಕಿಹೊಳಿಯಿಂದ ಕಾಂಗ್ರೆಸ್‌ ಅಂತರ: ಶಿಸ್ತು ಕ್ರಮದ ಬಗ್ಗೆಯೂ ಒಲವು

ಕಾಂಗ್ರೆಸ್ ಪಕ್ಷ ಈ ಮಾತನ್ನ ಒಪ್ಪದಿದ್ದರೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಕಾಂಗ್ರೆಸ್ ನ ಹಿಂದುಗಳು ಜಾರಕಿಹೊಳಿ ಹೇಳಿಕೆಯನ್ನು ಸಹಿಸಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನ ಮಾನಸಿಕತೆ ಏನು ಎಂಬುದು ಸ್ಪಷ್ಟವಾಗಬೇಕು. ಕಾಂಗ್ರೆಸ್‌ನ ಕಾರ್ಯಕರ್ತರು ಜಾರಕಿಹೋಳಿಯ ಹೇಳಿಕೆಯನ್ನು ವಾಪಸ್ ಪಡೆಯಲು ಒತ್ತಡ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ಜಾರಕಿಹೊಳಿ ಹೇಳಿಕೆಗೆ ಈಶ್ವರಪ್ಪ ಆಕ್ರೋಶ: ಹಿಂದು ಎನ್ನುವ ಪದಕ್ಕೆ, ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಮಾತು ಆಡಿದರೇ ತಿಂದ ಅನ್ನ ಕರಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕೆ.ಎಸ್.ಈಶ್ವರಪ್ಪ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆಯನ್ನು ಸುರ್ಜೇವಾಲಾ ಖಂಡನೆ ಮಾಡಿದ್ದಾರೆ. ಅವರು ಹೇಳಿದ ಮೇಲೂ ನನ್ನ ಮಾತಿಗೆ ಬದ್ದ ಎನ್ನುವ ಮೂಲಕ ಜಾರಕಿಹೊಳಿ ಸೊಕ್ಕಿನ ಮಾತಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಶಕ್ತಿ ಇದ್ದರೆ ಕ್ರಮ ಕೈಗೊಳ್ಳಲಿ. ಪಕ್ಷದಿಂದ ಅಮಾನತುಗೊಳಿಸಲಿ ಎಂದು ಒತ್ತಾಯಿಸಿದರು. 

ಬಿಜೆಪಿ ಕೈಗೆ ಮತ್ತೆ ಹಿಂದು ಅಸ್ತ್ರ: ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ತಲೆಬೇನೆ

ಸೋನಿಯಾಗಾಂಧಿ ಹಾಗೂ ಮುಸಲ್ಮಾನರನ್ನು ಮೆಚ್ಚಿಸಲು ಈ ರೀತಿ ಮಾತನಾಡುತ್ತಿದ್ದಾರೆ. ವಾಲ್ಮೀಕಿ ರಕ್ತ ಹಂಚಿಕೊಂಡು ಜಾರಕಿಹೊಳಿ ಹುಟ್ಟಿದ್ದಾರೆ. ಮೊದಲು ಹಿಂದುಗಳ ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ ಮುಂದಿನ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರೆ ಎಂದರು. ಜನ ಸಂಕಲ್ಪ ಯಾತ್ರೆ ಕುರಿತು ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ಲೆಕ್ಕ ಕೊಡಿ ಮೊದಲು. ಸಿದ್ದರಾಮಯ್ಯ ಈ ಮೊದಲು ಸೋನಿಯಾಗಾಂಧಿ ಮೆಚ್ಚಿಸಬೇಕಿತ್ತು. ಈಗ ಖರ್ಗೆ ಅವರನ್ನು ಮೆಚ್ಚಿಸಲು ಹೊರಟ್ಟಿದ್ದಾರೆ. ಖರ್ಗೆ ಮೆಚ್ಚಿಸಿ ಎಲ್ಲಾದರೂ ಟಿಕೇಟ್ ಪಡೆಯಬೇಕು ಅಂತಾ ಒದ್ದಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

click me!