* ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ಮಾಜಿ ಸಚಿವ ಒಂದೇ ಗಂಟೆಯಲ್ಲಿ ಬಿಜೆಪಿ ಸೇರ್ಪಡೆ
* ಸಿಎಂ ಬೊಮ್ಮಾಯಿ, ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ
* ರಾಜೀನಾಮೆ ಕಳುಹಿಸಿಕೊಟ್ಟ ಮಾಜಿ ಸಚಿವಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್
ಬೆಂಗಳೂರು/ಉಡುಪಿ, (ಮೇ.07): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ಗಂಟೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಹೌದು.... ಪ್ರಮೋದ್ ಮಧ್ವರಾಜ್ ಅವರು ಇಂದು(ಶನಿವಾರ) ಸಂಜೆ ಅಷ್ಟೇ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕಮಾರ್ ಅವರಿಗೆ ರವಾನಿಸಿದ್ರು.. ಇದಾದ ಒಂದೇ ಗಂಟೆಯಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿ ಅಚ್ಚರಿ ಮೂಡಿಸಿದರು.
undefined
ಬೆಂಗಳೂರಿನ ಮಲ್ಲೇಶರಂ ಕೇಂದ್ರ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕ ಸಮ್ಮುಖದಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದರು.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಚಿವ ರಾಜೀನಾಮೆ, ಬಿಜೆಪಿಯತ್ತ ಚಿತ್ತ
ಹಾರೈಸಿದ ಡಿಕೆ ಶಿವಕುಮಾರ್
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ ವಿಚಾರವಾಗಿ ಬೆಳಗಾವಿಯಲ್ಲಿ ಮಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರು-ಏಳು ತಿಂಗಳ ಹಿಂದೆ ಅವರು ಈ ವಿಚಾರ ತಿಳಿಸಿದ್ದರು. ಅವರ ನೋವು ಅವರ ದುಗುಡ ತಿಳಿಸಿದ್ದರು. ಅವರು ಬೇರೆ ಜಿಲ್ಲೆ ನಾಯಕರ ಬಗ್ಗೆ ಮಾತನಾಡಿರೋದು, ನಾಯಕರ ಜೊತೆ ಮಾತನಾಡಿರೋದು. ಮುಖ್ಯಮಂತ್ರಿಗಳ ಹತ್ತಿರ ಮಾತನಾಡಿರೋದು ಎಲ್ಲಾ ಗೊತ್ತಿತ್ತು ಎಂದು ಹೇಳಿದರು.
ಅವರಿಗೇನೋ ಕೌನ್ಸಿಲ್ ಸೀಟ್ ಕೊಡ್ತೀವಿ ಅಂತಾ ಆಶ್ವಾಸನೆ ನೀಡಿದ್ದಾರಂತೆ. ನಿನ್ನೆಯೂ ನನ್ನ ಹತ್ತಿರ ಬರ್ತೀನಿ ಎಂದಿದ್ದರು. ಇವತ್ತು ರಾಜೀನಾಮೆ ಕಳಿಸಿಕೊಟ್ಟಿದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದ ಡಿಕೆಶಿ ಹಾರೈಸಿದರು.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ನಂತರ 2018ರ ಚುನಾವಣೆಯಲ್ಲಿ ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದ್ರೆ, 2019ರ ಲೋಕಸಭೆ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಆದ್ರೆ, ಬಿಜೆಪಿಯ ಶೋಭಾ ಕರಂದ್ಲಾಜೆ ಎದುರು ಪರಭಾವಗೊಂಡಿದ್ದರು.
ಪ್ರಮೋದ್ ಮಧ್ವರಾಜ್ ಪತ್ರದಲ್ಲಿರುವ ವಿವರ ಹೀಗಿದೆ
ಇತ್ತೀಚೆಗೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ನಿಮಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಹಿಂದೆ ನನ್ನ ಸಮಯ ಮತ್ತು ದುಡಿದ ಹಣವನ್ನು ಪಕ್ಷಕ್ಕಾಗಿ ವ್ಯಯಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ನನ್ನ ವಿನಮ್ರ ಕೊಡುಗೆಗಳನ್ನು ನೀವು ಮತ್ತು ಪಕ್ಷವು ಅರಿತುಕೊಂಡಿದೆ.
ಅದೇ ರೀತಿ ಕಾಂಗ್ರೆಸ್ ಪಕ್ಷವು ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ವಿವಿಧ ಹುದ್ದೆಗಳನ್ನು ನೀಡುವ ಮೂಲಕ ಪ್ರತಿಫಲವನ್ನು ನೀಡಿದೆ. ಚುನಾಯಿತ ಪ್ರತಿನಿಧಿಯಾಗಿ ನಾನು ನನ್ನ ಕ್ಷೇತ್ರ, ಜಿಲ್ಲೆ ಮತ್ತು ರಾಜ್ಯಕ್ಕಾಗಿ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸಮರ್ಪಣಾಭಾವ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ.
ದಕ್ಷ್ ಸಂಸ್ಥೆ ಸಮೀಕ್ಷೆಯನ್ನು ನಡೆಸಿತು ಮತ್ತು ನಾನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಮತ್ತು ನಂಬರ್ 1 ಶಾಸಕನಾಗಿ ಸ್ಥಾನ ಪಡೆದಿದ್ದೇನೆ.
ಕಳೆದ ಮೂರು ವರ್ಷಗಳಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಉಸಿರುಗಟ್ಟುವಿಕೆಗೆ ಕಾರಣವಾದ ಪರಿಸ್ಥಿತಿಯು ನನಗೆ ಕೆಟ್ಟ ಅನುಭವವಾಗಿದೆ ಎಂದು ತಿಳಿಸಲು ವಿಷಾದಿಸುತ್ತೇನೆ.
ಈ ಸಂಗತಿಗಳನ್ನು ನಿಮ್ಮ ಗಮನಕ್ಕೆ ತರಲಾಗಿದೆ ಮತ್ತು ಇತರ ಪಕ್ಷದ ಮುಖಂಡರಿಗೆ ತಿಳಿಸಲಾಗಿದೆ. ನನ್ನಿಂದ. ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಪ್ರಚಲಿತ ಪರಿಸ್ಥಿತಿಯ ಬಗ್ಗೆ ನನ್ನ ಅಸಮಾಧಾನವನ್ನು ನಿವಾರಿಸಲು ಪಕ್ಷದಿಂದ ಯಾವುದೇ ಪ್ರಯೋಜನಕಾರಿ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ.
ಮೇಲೆ ವಿವರಿಸಿದ ಸಂದರ್ಭಗಳಿಂದಾಗಿ ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದು ಮತ್ತು ಇತ್ತೀಚೆಗೆ ನನಗೆ ನಿಯೋಜಿಸಲಾದ ಹೊಸ ಹುದ್ದೆಗೆ ನ್ಯಾಯ ಸಲ್ಲಿಸುವುದು ಅಸಾಧ್ಯವಾಗುವ ಹಂತವನ್ನು ತಲುಪಿದೆ.
ಕೆಪಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಸ್ವೀಕರಿಸದಿರಲು ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈ ಪತ್ರದ ಮೂಲಕ ನಮ್ಮ ಪಕ್ಷದ ಎಲ್ಲಾ ನಾಯಕರು ಮತ್ತು ಪಕ್ಷದ ಕಾರ್ಯಕರ್ತರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಆತುರಪಡುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.