
ಬೆಂಗಳೂರು, (ಅ.13): ಡಿಕೆ ಶಿವಕುಮಾರ್(DK Shivakumar) ವಿರುದ್ಧ ಕಾಂಗ್ರೆಸ್ (Congress) ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಪಿಸು ಮಾತು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಇನ್ನು ಈ ಬಗ್ಗೆ ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಪ್ರತಿಕ್ರಿಯಿಸಿದ್ದು, ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'
ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಸಲಹೆ ನೀಡಿದ್ದಾರೆ.
ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.