ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತಂತೆ ಮಹತ್ವದ ಚರ್ಚೆ ನಡೆಸಲಿದ್ದು, ಸಂಭಾವ್ಯ ಅಭ್ಯರ್ಥಿಗಳ ವಿಚಾರವೂ ಪ್ರಸ್ತಾಪಗೊಳ್ಳುವ ಸಾಧ್ಯತೆಯಿದೆ. ಇದೇ ವೇಳೆ, ನಗರದಲ್ಲಿ ಶಾ ಅವರ ಬೃಹತ್ ರೋಡ್ ಶೋ ಆಯೋಜಿಸಲು ಚಿಂತನೆ ನಡೆದಿದೆ.
ಮಂಗಳೂರು(ಫೆ.06): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಕರಾವಳಿ ಭಾಗದ ಬಿಜೆಪಿ ಶಾಸಕರು ಹಾಗೂ ಮುಖಂಡರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತಂತೆ ಮಹತ್ವದ ಚರ್ಚೆ ನಡೆಸಲಿದ್ದು, ಸಂಭಾವ್ಯ ಅಭ್ಯರ್ಥಿಗಳ ವಿಚಾರವೂ ಪ್ರಸ್ತಾಪಗೊಳ್ಳುವ ಸಾಧ್ಯತೆಯಿದೆ. ಇದೇ ವೇಳೆ, ನಗರದಲ್ಲಿ ಶಾ ಅವರ ಬೃಹತ್ ರೋಡ್ ಶೋ ಆಯೋಜಿಸಲು ಚಿಂತನೆ ನಡೆದಿದೆ.
ಅಂದು ಮಧ್ಯಾಹ್ನ ಪುತ್ತೂರಿಗೆ ಆಗಮಿಸುವ ಶಾ, ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಚಾಲನೆ ನೀಡಿ, ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ವೀಕ್ಷಣೆ ಮಾಡಲಿದ್ದಾರೆ. ಬಳಿಕ, ಮಂಗಳೂರು ಹೊರವಲಯದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪಕ್ಷ ಮುಖಂಡರ ಸಭೆ ನಡೆಸಲಿದ್ದಾರೆ. ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಕರಾವಳಿ ಭಾಗದ ಶಾಸಕರು, ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಇದು ಕೋರ್ ಕಮಿಟಿ ಸಭೆಯೇ ಅಥವಾ ವಿಶೇಷ ಸಭೆಯೇ ಎಂಬುದು ಒಂದೆರಡು ದಿನಗಳಲ್ಲಿ ಸ್ಪಷ್ಟಗೊಳ್ಳಲಿದೆ.
ಬೊಮ್ಮಾಯಿ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ, ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲ್ಲಲ್ಲ: ರಣದೀಪ್ ಸುರ್ಜೇವಾಲ
ಸಭೆಯ ಬಳಿಕ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋಗೆ ಶಾಸಕ ಡಾ.ಭರತ್ ಶೆಟ್ಟಿಚಿಂತನೆ ನಡೆಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಬಳಿಯಿಂದ ಮರವೂರುವರೆಗೆ ರೋಡ್‌ಶೋಗೆ ಚಿಂತಿಸಲಾಗಿದ್ದು, ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ.