
ಅಥಣಿ(ಮೇ.06): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು(ಶನಿವಾರ) ಮಧ್ಯಾಹ್ನ 12 ಗಂಟೆಗೆ ಅಥಣಿ ಪಟ್ಟಣಕ್ಕೆ ಆಗಮಿಸಲಿದ್ದಾರೆ. ಪಟ್ಟಣದ ಭೋಜರಾಜ ಕ್ರೀಡಾಟಗಣದಲ್ಲಿ ಜರುಗುವ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಮತಯಾಚನೆ ಸಭೆಯಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಥಣಿ ಕ್ಷೇತ್ರದ ಚುನಾವಣಾ ಪ್ರಭಾರಿ ವಿಜಯಕುಮಾರ ಕಡಗಿನೂರ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ರೋಡ್ ಶೋ ಕಾರ್ಯಕ್ರಮ ಇರುವುದಿಲ್ಲ. ನೇರವಾಗಿ ಭೋಜರಾಜ ಕ್ರೀಡಾಂಗಣಕ್ಕೆ ಆಗಮಿಸಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಜೊತೆಗೆ ಭಾರತೀಯ ಜನತಾ ಪಕ್ಷದ ಅನೇಕ ಹಿರಿಯ ಮುಖಂಡರು ಆಗಮಿಸಲಿದ್ದಾರೆ.
ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ನಿಶ್ಚಿತ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್
ಮತಕ್ಷೇತ್ರದ ಬಿಜೆಪಿ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಬೆಳಗಾವಿ ಉಸ್ತುವಾರಿ ಚಂದ್ರಶೇಖರ ಕವಟಗಿ, ಮುಖಂಡರಾದ ಉಮೇಶ ರಾವ ಬಂಟೋದಕರ, ಪ್ರಭಾಕರ ಚವ್ಹಾಣ, ಡಾ.ರವಿ ಸಂಕ, ಪುಟ್ಟು ಹಿರೇಮಠ, ರವಿ ಪೂಜಾರಿ, ಮುರುಗೇಶ ಕುಮಟಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.