ಒಳಮೀಸಲಿಗೆ ಸಿದ್ದು ಅಧಿವೇಶನ ಕರೆಯಲಿ: ಕೇಂದ್ರ ಸಚಿವ ನಾರಾಯಣಸ್ವಾಮಿ ಸವಾಲ್‌

Published : Jul 30, 2023, 04:23 AM IST
ಒಳಮೀಸಲಿಗೆ ಸಿದ್ದು ಅಧಿವೇಶನ ಕರೆಯಲಿ: ಕೇಂದ್ರ ಸಚಿವ ನಾರಾಯಣಸ್ವಾಮಿ ಸವಾಲ್‌

ಸಾರಾಂಶ

ಒಳ ಮೀಸಲಾತಿ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ಧತೆ ಇದ್ದಲ್ಲಿ ವಿಶೇಷ ಅಧಿವೇಶನ ಕರೆದು ತೀರ್ಮಾನ ಕೈಗೊಳ್ಳಲಿ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ. 

ಬೆಂಗಳೂರು (ಜು.30): ಒಳ ಮೀಸಲಾತಿ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ಧತೆ ಇದ್ದಲ್ಲಿ ವಿಶೇಷ ಅಧಿವೇಶನ ಕರೆದು ತೀರ್ಮಾನ ಕೈಗೊಳ್ಳಲಿ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ. ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಚುನಾವಣಾ ಪೂರ್ವದ ಸಭೆಗಳಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಆ ಬಗ್ಗೆ ಮಾತೇ ಆಡುತ್ತಿಲ್ಲ. ತಮಿಳುನಾಡು, ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿಯನ್ನು ನೀಡಲಾಗಿದೆ. ರಾಜ್ಯ ಸರ್ಕಾರವು ಸಹ ಒಳ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

‘ದಲಿತ ಸಮುದಾಯದ ಎಡ ಸಮುದಾಯಕ್ಕೆ ಶೇ.6, ಬಲ ಸಮುದಾಯಕ್ಕೆ ಶೇ.5.5, ಲಂಬಾಣಿ ಸಮುದಾಯಕ್ಕೆ ಶೇ.4, ಇತರರಿಗೆ ಶೇ.1ರಷ್ಟುಮೀಸಲಾತಿ ನೀಡುವ ಕುರಿತು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಇದರ ಸಾಧಕ-ಬಾಧಕಗಳ ಪರಿಶೀಲನೆ ನಡೆಸಿ ಖಂಡಿತವಾಗಿಯೂ ಸೂಕ್ತವಾದ ತೀರ್ಮಾನ ಕೈಗೊಳ್ಳುತ್ತೇವೆ. ಮೀಸಲಾತಿ ಪರಿಷ್ಕರಣೆಯಾಗಬೇಕು ಎಂದು ಸುಪ್ರೀಂಕೋರ್ಚ್‌ ಅಭಿಪ್ರಾಯಪಟ್ಟಿದೆ. ನಿಜವಾಗಿಯೂ ಶೋಷಿತರಿಗೆ ಮೀಸಲಾತಿ ಸಿಗುತ್ತಿಲ್ಲ. ಇದು ಸಿಗಬೇಕಾದರೆ ಪರಿಷ್ಕರಣೆಯ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ಹುಲಿಗಳ ಸಂಖ್ಯೆಯಲ್ಲಿ ರಾಜ್ಯದಲ್ಲೇ ಬಂಡೀಪುರ ನಂಬರ್ ಒನ್, ನಾಗರಹೊಳೆ ಸೆಕೆಂಡ್

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್‌ ಅವರಿಂದ ಜಾತಿ ಸಮೀಕ್ಷೆ ನಡೆಸಲಾಗಿದ್ದು, ಅದನ್ನು ಮೊದಲು ಪುರಸ್ಕರಿಸಬೇಕು. ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ಸಚಿವನಾಗಿ ಸಂಸತ್‌ನಲ್ಲಿ ಚರ್ಚೆಯ ವೇಳೆ ಏನು ಉತ್ತರ ನೀಡಬೇಕೋ, ಅದನ್ನು ನೀಡಿದ್ದೇನೆ. ಸದಾಶಿವ ಆಯೋಗದ ವರದಿ ಆಧಾರದ ಮೇಲೆ ಒಳ ಮೀಸಲಾತಿಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತದಲ್ಲಿ ಒಪ್ಪಿಕೊಂಡಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಒಳಮೀಸಲಾತಿಗೆ ಸರ್ಕಾರ ಬದ್ಧವಿದೆ ಎಂದು ಕೇಂದ್ರ ಗೃಹ ಸಚಿವರೇ ತಿಳಿಸಿದ್ದಾರೆ. ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ನೀಡಿದ್ದ ವರದಿ ಒಪ್ಪಿಕೊಂಡು, ಅದರ ಆಧಾರದ ಮೇಲೆ ಒಳಮೀಸಲಾತಿಗೆ ಕೇಂದ್ರ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ತರುವ ಚಿಂತನೆ: ಸಚಿವ ಪರಮೇಶ್ವರ್‌

ಕೇಂದ್ರದ ಗಮನಕ್ಕೆ ತರುತ್ತೇವೆ: ‘ಉಡುಪಿ ಕಾಲೇಜಿನ ಪ್ರಕರಣವನ್ನು ರಾಜಕೀಯವಾಗಿ, ಧರ್ಮದ ವಿಷಯದಲ್ಲಿ ನೋಡುವುದು ಸರಿಯಲ್ಲ. ಆದರೆ, ತನಿಖಾ ಸಂಸ್ಥೆಗಳಿಗೆ ಮುಕ್ತವಾಗಿ ಅವಕಾಶ ನೀಡಬೇಕು. ಇಂತಹ ಪ್ರಕರಣಗಳು ನಡೆಯದ ರೀತಿಯಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಅವಶ್ಯಕತೆ ಇದ್ದರೆ ಈ ಪ್ರಕರಣವನ್ನು ಕೇಂದ್ರದ ಗಮನಕ್ಕೆ ತರುತ್ತೇವೆ. ಶಾಸಕ ತನ್ವೀರ್‌ ಸೇಠ್‌ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಹೇಳುವುದು ಅವರಿಗೆ ಶೋಭೆ ತರುವುದಿಲ್ಲ. ಯಾವುದೇ ಪ್ರಕರಣವಾದರೂ ಗಂಭೀರವಾಗಿ ಪರಿಗಣಿಸಬೇಕು. ಒಂದು ಸಮುದಾಯಕ್ಕಾಗಿ ತುಘಲಕ್‌ ಆಡಳಿತ ನಡೆಸುವುದಿಲ್ಲ ಸರಿಯಲ್ಲ’ ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ, ಹಾಲಪ್ಪ ಆಚಾರ್‌, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರ ಬಸ್ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಡಿ.ಕೆ.ಶಿವಕುಮಾರ್‌ ಒಂದು ಬಾರಿ ಸಿಎಂ ಆಗೇ ಆಗುತ್ತಾರೆ: ಶಾಸಕ ಎಸ್‌.ಟಿ.ಸೋಮಶೇಖರ್‌