ರಾಜ್ಯಕ್ಕೆ ಅಮಿತ್ ಶಾ ಬರೋದು ಫಿಕ್ಸ್: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇದರಿಂದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.


ಬೆಂಗಳೂರು, (ಜ.08): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇದೇ ತಿಂಗಳು ಜ.16 ಮತ್ತು 17ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

"

Latest Videos

ಬೆಂಗಳೂರು ಮತ್ತು ಭದ್ರಾವತಿಯಲ್ಲಿ ಗೃಹ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅಮಿತ್ ಶಾ,  ಬೆಳಗಾವಿಯಲ್ಲಿ ಪಕ್ಷ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಶಾ ರಾಜ್ಯ ಭೇಟಿಗೂ ಮುನ್ನವೇ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಇನ್ನು ಅಮಿತ್ ರಾಜ್ಯ ಪ್ರವಾಸ ಹಿನ್ನಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಭೆ ಮಾಡಿದ್ದು, ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಬೆಳಗಾವಿಯಲ್ಲಿ ಸಮಾವೇಶ
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜ.17ರಂದು ಮಧ್ಯಾಹ್ನ 2 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು
ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. 

ಬೆಳಗಾವಿಯಲ್ಲಿ ಮೊನ್ನೆ ಜರುಗಿದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಸದಸ್ಯರು ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಬೃಹತ್‌ ಭಾಜಪ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 

ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು. ಸುಮಾರು 2ರಿಂದ 3 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಈ ಸಭೆಯಲ್ಲಿ ಎಲ್ಲ ಭಾಜಪ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.

ಸಂಪುಟ ಕಸರತ್ತು ಬಗೆಹರಿಯುತ್ತಾ?
ಹೌದು...ಬಹುದಿನಗಳಿಂದ ಹಾಗೇ ಉಳಿದಿರುವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬರುತ್ತಿಲ್ಲ. ಈಗಾಗಲೇ ಈ ಬಗ್ಗೆ ಬಿಎಸ್ ಯಡಿಯೂರಪ್ಪನವರು ಜೆ.ಪಿ.ನಡ್ಡಾ ಹಾಗೂ ಅರುಣ್ ಸಿಂಗ್ ಅವರ ಜೊತೆ ಚರ್ಚೆ ನಡೆಸಿದರೂ ಇದುವರೆಗೂ ಯಾವುದೇ ಫೈನಲ್ ಆಗಿ. ಆದ್ರೆ, ಇದೀಗ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಗೆ ಮುಕ್ತಿ ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

click me!