
ಬೆಂಗಳೂರು (ಜ.8): ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಭಾನುವಾರ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯಬಹುದು ಎಂಬ ವದಂತಿ ಮತ್ತಷ್ಟು ದಟ್ಟವಾಗಿದೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ಸಂಪುಟ ವಿಸ್ತರಣೆ ಸಾಧ್ಯತೆಯಿದೆ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಲು ನರೇಂದ್ರ ಸಿಂಗ್ ತೋಮರ್ ರಾಜೀನಾಮೆ ನೀಡಿದ ನಂತರ ತೆರವಾಗಿರುವ ಕೃಷಿ ಮತ್ತು ರೈತ ಕಲ್ಯಾಣ ಖಾತೆಯನ್ನು ಕುಮಾರಸ್ವಾಮಿ ಅವರಿಗೆ ನೀಡಬಹುದು ಎನ್ನಲಾಗುತ್ತಿದೆ. ಮುಂಡಾ ಈಗ ಹೆಚ್ಚುವರಿಯಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೋದಿ ಭೇಟಿ ನೀಡಿದ ಬೆನ್ನಲ್ಲೇ ಮಂಗಳೂರು-ಲಕ್ಷದ್ವೀಪ ಪ್ರವಾಸಿ ಹಡಗು ಸಂಚಾರಕ್ಕೆ ಸಂಸದ ನಳೀನ್ ಸೂಚನೆ!
ಕುಮಾರಸ್ವಾಮಿ ಕೇಂದ್ರ ಸಂಪುಟ ಸೇರ್ಪಡೆಯಿಂದ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಂಗಪಕ್ಷ ಜೆಡಿಎಸ್‌ನ ನೈತಿಕತೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದಲ್ಲಿ ಉಭಯ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. ''ನನಗೆ ಕೇಂದ್ರ ಸಚಿವನಾಗುವ ಚಿಂತೆ ಇಲ್ಲ. ಕಾಂಗ್ರೆಸ್ ನ್ನು ಸೋಲಿಸಿ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಕುಮಾರಸ್ವಾಮಿ ಮುಂಡಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿಯಿಂದ ನಾನು ಅಂತರ ಕಾಯ್ದುಕೊಂಡಿಲ್ಲ; ಅವರೇ ನನ್ನನ್ನು ಗುರುತಿಸದಿದ್ದರೆ ಏನ್ಮಾಡಲಿ?: ನಂಜುಂಡಿ ಬೇಸರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.