ಬಿಜೆಪಿ-ಜೆಡಿಎಸ್‌ ಮೈತ್ರಿ: ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಿಷ್ಟು

Published : Sep 23, 2023, 03:00 AM IST
ಬಿಜೆಪಿ-ಜೆಡಿಎಸ್‌ ಮೈತ್ರಿ: ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಿಷ್ಟು

ಸಾರಾಂಶ

ಜೆಡಿಎಸ್. ಪಕ್ಷವು ಎನ್.ಡಿ.ಎ ಜೊತೆಗೊಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಿನಾಯವಾಗಿ ಸೋಲಿಸಿ, ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲಿದ್ದೇವೆ. ಭವ್ಯ ಭಾರತದ ಗತವೈಭವ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಭಗವಂತ ಖೂಬಾ 

ಬೀದರ್(ಸೆ.23): ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮೆಚ್ಚಿ, ಎನ್.ಡಿ.ಎ ಮೈತ್ರಿಕೂಟದ ಜೊತೆಗೆ ರಾಜ್ಯದ ಜೆಡಿಎಸ್ ಬೆಂಬಲಿಸಿ, ದೇಶ ನಿರ್ಮಾಣ ಕಾರ್ಯಕ್ಕೆ ಸಾಥ್ ನೀಡಿ, ದೇಶ ವಿರೋಧಿ, ಧರ್ಮ ವಿರೋಧಿ, ಸಮಾಜ ವಿರೋಧಿ ನೀತಿಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ನಮ್ಮ ಜೊತೆ ಕೈಜೋಡಿಸಿರುವುದು ಸಂತಸದ ವಿಷಯವಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ಜೆಡಿಎಸ್. ಪಕ್ಷವು ಎನ್.ಡಿ.ಎ ಜೊತೆಗೊಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಿನಾಯವಾಗಿ ಸೋಲಿಸಿ, ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲಿದ್ದೇವೆ. ಭವ್ಯ ಭಾರತದ ಗತವೈಭವ ಮುಂದುವರಿಯಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಕಾರ್ಯಕರ್ತರು ಒಂದಾಗ್ತಾರಾ?, ವರಿಷ್ಠರ ನಡೆಯಿಂದ ಭಾರೀ ಗೊಂದಲ..!

ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಆಡಳಿತ ವಿರೋಧಿ, ರೈತ ವಿರೋಧಿ ನೀತಿಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವುಗಳು ಸೇರಿ ಕೆಲಸ ಮಾಡೊಣ, ಜನಜಾಗೃತಿ ಮಾಡೋಣವೆಂದು ಸಚಿವ ಖೂಬಾ ಜೆ.ಡಿ.ಎಸ್. ಮುಖಂಡರಿಗೆ ಕರೆ ಕೊಟ್ಟಿದ್ದಾರೆ.

ಬೀದರ ಲೋಕಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ನ ಸಚಿವರ ಭ್ರಷ್ಟಾಚಾರ, ದ್ವೇಷದ ರಾಜಕಾರಣ, ಬಡವರ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಒತ್ತು ಕೊಡದೆ ಅನುದಾನ ತರಲು ವಿಫಲರಾಗುತ್ತಿರುವ ಸಚಿವರುಗಳ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಿ, ಬಡವರಿಗೆ, ದಿನದಲಿತರಿಗೆ, ರೈತರಿಗೆ, ಮಹಿಳೆಯರಿಗೆ, ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸಿಕೊಡೊಣ ಹಾಗೂ ಜಿಲ್ಲೆಯ ಅಭಿವೃದ್ದಿಗಾಗಿ ಹೊರಾಡೋಣವೆಂದ ಅವರು, ಬಿಜೆಪಿ ಜೊತೆ ಸೇರಿ ಕೆಲಸ ಮಾಡಲು ಎಲ್ಲಾ ಜೆಡಿಎಸ್ ನಾಯಕರಿಗೆ, ಮುಖಂಡರಿಗೆ, ಕಾರ್ಯಕರ್ತರಿಗೆ ಸಚಿವ ಖೂಬಾ ಸ್ವಾಗತಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ