
ಬೆಂಗಳೂರು, (ಡಿ.19): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದ್ದು, ಇದಕ್ಕೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಬುದ್ಧಿ ಹೇಳಿದ್ದಾರೆ.
ಚಾಮುಂಡೇಶ್ವರಿ ಚುನಾವಣೆಯಲ್ಲಿ ನನ್ನ ಸೋಲಿಗೆ ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಅಂತೆಲ್ಲಾ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ರಾಜ್ಯದ ಮುಖ್ಯಮಂತ್ರಿಯಾದವರು, ಒಂದು ಪಕ್ಷದ ಹಿರಿಯರಾದವರು ತಮ್ಮ ಇತಿಮಿತಿಯಲ್ಲಿ ಮಾತನ್ನಾಡಬೇಕು. ಆದರೆ ಮಾಜಿ ಮುಖ್ಯಮಂತ್ರಿಗಳಿಬ್ಬರೂ ತಮ್ಮ ಮಿತಿಯನ್ನು ಮೀರಿ ಮಾತನಾಡಿದ್ದಾರೆ. ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದರು.
ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!
ಎಚ್.ಡಿ.ಕುಮಾರಸ್ವಾಮಿ ಅವರು ದೊಡ್ಡ ರಾಜಕೀಯ ಕುಟುಂಬದಿಂದ ಬಂದವರು. ಅವರ ಪಕ್ಷ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಏನೇನೊ ಹೇಳುತ್ತಾರೆ. ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭಯದಲ್ಲಿ ಏನೇನೋ ಮಾತನಾಡುತ್ತಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.