ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಮುಖದ ಮೇಲಿನ ಕೊಳಕನ್ನು ನನ್ನ ಮೇಲೆ ಸಿಡಿಸಬೇಡಿ: ಹೆಚ್.ಡಿ. ಕುಮಾರಸ್ವಾಮಿ

By Sathish Kumar KH  |  First Published Jul 30, 2024, 2:48 PM IST

ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ಮುಡಾ ಹಗರಣದ ವಿಚಾರದಲ್ಲಿ ನಿಮ್ಮ ಮುಖ ಮೇಲೆ ಅಂಟಿರುವ ಕೊಳಕನ್ನು ನಮ್ಮ ಮೇಲೆ ಸಿಡಿಸಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಬೆಂಗಳೂರು (ಜು.30): ಮುಡಾ ನಿವೇಶನ ಹಂಚಿಕೆ ಹಗರಣದ ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ. ಸುಳ್ಳು ಸಂಶೋಧಕ ಸಿದ್ದರಾಮಯ್ಯನವರೇ, ನಿಮ್ಮ ಮುಖದ ಮೇಲಿನ ಕೊಳಕನ್ನು ನನ್ನ ಮೇಲೆ ಸಿಡಿಸಬೇಡಿ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದೆರಡು ದಿನಗಳ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಸಿಎಂ ಸಿದ್ದರಮಯ್ಯ ಅವರು, ಹೆಚ್.ಡಿ. ದೇವೇಗೌಡ ಅವರು ಹಾಗೂ ಕುಮಾರಸ್ವಾಮಿ ಅವರು ಮುಡಾದಿಂದ ನಿವೇಶನಪಡೆದಿದ್ದಾರೆ. ಕುಮಾರಸ್ವಾಮಿಗೆ ಹಕ್ಕುಪತ್ರವನ್ನೂ ನೀಡಲಾಗಿದ್ದು, ಈಗ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ಮಂಗಳವಾರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪೋಸ್ಟ್ ಹಂಚಿಕೊಂಡು ತಿರುಗೇಟು ನೀಡಿದ್ದಾರೆ.

Tap to resize

Latest Videos

undefined

ಮಂಡ್ಯದ ಗಂಡು ಅಂಬರೀಶ್‌ರಂತೆ ನಟ ದರ್ಶನ್‌ಗೂ ಒಂದು ಆಟಿಟ್ಯೂಡ್ ಇದೆ; ಕುಮಾರ್ ಬಂಗಾರಪ್ಪ

'ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ.

ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ 'ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?' 'ಸುಳ್ಳು ಸಂಶೋಧಕ ಸಿದ್ದರಾಮಯ್ಯ'ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ.

ಮೂಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ' ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ 'ಶರಪಂಜರ' ಸೃಷ್ಟಿಸುತ್ತಿದ್ದಾರೆ!

ಬೆಂಗಳೂರು: ಯಮಲೂರಿನ ದಿವ್ಯಶ್ರೀ ಟೆಕ್‌ಪಾರ್ಕ್ ಮನೆಯಲ್ಲಿ ವಜ್ರದ ಸರ, ಚಿನ್ನಾಭರಣ ಕಳ್ಳತನ ಮಾಡಿದ ಮಹಿಳೆ!

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ  ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ (Siddalogy) ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ #Siddalogy ನನಗೆ ಚೆನ್ನಾಗಿಯೇ ಗೊತ್ತಿದೆ.

click me!