
ಹಾಸನ (ಜು.21): ಕೇಂದ್ರ ಸಚಿವನಾಗಿರೋ ಕುಮಾರಸ್ವಾಮಿ ಇಲ್ಲಿಗೆ ಏಕೆ ಬರ್ತಾನೆ? ಮಿಲಿಟರಿ ಕರ್ಕೊಂಡು ಬಂದವ್ರಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಳಿದ್ದಾರೆ. ರಾಜ್ಯದಲ್ಲಿ ದರೋಡೆ ಮಾಡುವುದನ್ನು ನಿಲ್ಲಿಸೋದಕ್ಕೆ ಮಿಲಿಟರಿ ಪಡೆಯನ್ನು ಕರೆದೊಂಡು ಬರುವ ಕಾಲ ಬರುತ್ತದೆ, ಆಗ ಮಿಲಟಟಿ ಕರೆದುಕೊಂಡು ಬರುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಾದ್ಯಂತ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೇಂದ್ರ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾನೆ? ಮಿಲಿಟರಿ ಕರ್ಕಂಡು ಬಂದವ್ರಾ ಅಂತಾರೆ. ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತದೆ. ಆವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾದೆ. ಅವರು ರಾಜ್ಯದಲ್ಲಿ ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಹೀಗಾಗಿ, ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ರಮೇಶ್ ದೂರು
ಪಾಪ ಕನಕಪುರದವರು, ಬ್ರಾಂಡ್ ಬೆಂಗಳೂರು ಮಾಡುವುದಾಗಿ ಹೇಳ್ತಾರೆ. ಜೊತೆಗೆ, ಕುಮಾರಸ್ವಾಮಿ 39 ಸೀಟ್ ಗೆದ್ದರೂ ಮುಖ್ಯಮಂತ್ರಿ ಮಾಡಿದ್ವಿ, ದೇವೇಗೌಡರು ಕೇವಲ 16 ಸೀಟ್ ಗೆದ್ದರೂ ಪ್ರಧಾನಮಂತ್ರಿ ಮಾಡಿದ್ವು ಅಂತ ಹೇಳಿದ್ದಾರೆ. ಆದರೆ, ಸರ್ಕಾರವನ್ನು ತೆಗೆದವರು ಯಾರು ಎಂದು ಹೇಳಬೇಕಲ್ವಾ? ನಿಮ್ಮ ಮನೆ ಬಾಗಿಲಿಗೆ ನಾನು, ದೇವೇಗೌಡರು ಬಂದಿದ್ವಾ? ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಕಮ್ಯೂನಿಸ್ಟ್ ಹಾಗೂ ಇತರರು. ಒಬ್ಬ ಕನ್ನಡಿಗನನ್ನು ತೆಗೆದವರು ಯಾರು? ನಾನು ಏನು ತಪ್ಪು ಮಾಡಿದೆ ಅಂತ ಸರ್ಕಾರ ತೆಗೆದರು? ದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ. ಅಹಿಂದ ಅಂತಾ ಎಷ್ಟು ವರ್ಷದಿಂದ ಹೆಸರು ಇಟ್ಟುಕೊಂಡಿದ್ದೀರಾ? ಅಹಿಂದ ಹೆಸರು ಇಟ್ಟುಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಮಾನ ಮಾಡುತ್ತಿದ್ದೀರಿ. ಅವರಿಗೆ ಮೀಸಲಿಟ್ಟಿದ್ದ ಹಣ ಉಪಯೋಗಿಸಿಕೊಂಡಿದ್ದೀರಿ. ದಾನ-ಧರ್ಮ ಮಾಡಿ ಬಂದವರಂತೆ ಇವರು. ಇವರು ಬಹಳ ನೀತಿವಂತರು ಎಂದು ಕಿಡಿಕಾರಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಗೆ ಡಿಕೆಶಿ ಶಂಖನಾದ: ಪಕ್ಷ ಸಂಘಟನೆ, ಚುನಾವಣೆ ತಯಾರಿಗೆ ಸೂಚನೆ
ಮಳೆಹಾನಿ ಪ್ರದೇಶದ ಬಗ್ಗೆ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ದೊಡ್ಡಮಟ್ಟದ ಮಳೆಯಿಂದ ಅಪಾರ ಅನಾಹುತಗಳಾಗಿವೆ. ಸಕಲೇಶಪುರದಲ್ಲಿ ಅನಾಹುತ ಜೊತೆಗೆ, ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತವಾಗಿದೆ. ಕಳಪೆ ಕಾಮಗಾರಿ ಜೊತೆ, ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಕಳೆದ ಲೋಕಸಭಾ ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.