
ಬೆಂಗಳೂರು(ಅ.01): ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಎಲ್ಲದರಲ್ಲೂ ರಾಜಕಾರಣ ಮಾಡುವುದನ್ನು ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವಂತಹ ಕೆಲಸ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಕುಮಾರಸ್ವಾಮಿ ಅವರು ರಾಜ ಕಾರಣ, ಬೇರೆ ಮಾತುಗಳನ್ನಾ ಡುವುದನ್ನು ಬಿಟ್ಟು ರಾಜ್ಯದಲ್ಲಿ 50 ರಿಂದ 1 ಲಕ್ಷ ಉದ್ಯೋಗ ಸೃಷ್ಟಿಯತ್ತ ಗಮನಹರಿಸಲಿದೆ. ಪ್ರಧಾನಿ ಮೋದಿ ಅವರು ಎಚ್‌ಡಿಕೆಗೆ ಉಕ್ಕು, ಕೈಗಾರಿಕೆ ಖಾತೆ ನೀಡಿದ್ದಾರೆ. ಅವರಿಗೆ ಸಿಕ್ಕಿರುವ ಅವಕಾಶವನ್ನು ಬಳ ಸಿಕೊಳ್ಳಲಿ. ಜನರು ನೆನಪು ಮಾಡಿಕೊಳ್ಳುವಂತಹ ಕೆಲಸ ಮಾಡಲಿ ಎಂದರು.
ಕುಮಾರಸ್ವಾಮಿ ವಿರುದ್ಧ 'ಹಂದಿ' ಪದ ಬಳಕೆ; ಎಡಿಜಿಪಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾರ್ನ್!
ಯತ್ನಾಳ್ ₹1000 ಕೋಟಿ ಹೇಳಿಕೆಯ ಐಟಿ ತನಿಖೆ ನಡೆಸಲು ಡಿಕೆಶಿ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ಬೀಳಿಸಲು 1000 ಕೋಟಿ ರು. ಮೀಸಲಿಡಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಬಗ್ಗೆ ಆದಾಯ ತೆರಿಗೆ ಇಲಾಖೆ ಸೇರಿದಂತೆ ಇನ್ನಿತರ ತನಿಖಾ ಸಂಸ್ಥೆಗಳು ತನಿಖೆ ನಡೆಸಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಯತ್ನಾಳ್ ಹೇಳಿಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರವನ್ನು ಬೀಳಿಸ ಬೇಕು ಎಂಬ ಕೆಲಸಗಳಾಗುತ್ತಿದೆ. ಯತ್ನಾಳ್ ಹೇಳಿಕೆ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.