ಸಿಡಿ ಬ್ರದರ್ಸ್‌ಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡೋದೆ ಕೆಲಸ: ಕುಮಾರಸ್ವಾಮಿ ವಾಗ್ದಾಳಿ

By Kannadaprabha News  |  First Published Nov 7, 2024, 12:16 PM IST

ಸಿಡಿ ಆಡಿಯೋ, ವಿಡಿಯೋ ಬಿಡುವುದಲ್ಲಿ ಡಿಕೆ ಸಹೋದರರು ನಿಪುಣರು. ಅವರು ಇಂಥ ದಂಧೆಗಳನ್ನೇ ಮಾಡಿಕೊಂಡು ಬರುತ್ತಿದ್ದಾರೆ. ಇಷ್ಟಕ್ಕೂ ಆ ಆಡಿಯೋ ಹಳೆಯದು. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು. ಒಂದು ವಾರದಿಂದ ಅದನ್ನು ಕತ್ತರಿಸಿ ಹಂಚುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದ ಆಡಿಯೋ ಅದು: ಕೇಂದ್ರ ಸಚಿವ ಕುಮಾರಸ್ವಾಮಿ


ಚನ್ನಪಟ್ಟಣ(ನ.07): ಸಿಡಿ ಬ್ರದರ್ಸ್‌ಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ. ಹಾಸನದಲ್ಲಿ ಇಂಥದ್ದೇ ಷಡ್ಯಂತ್ರ ಮಾಡಿದರು. ಚನ್ನಪಟ್ಟಣದಲ್ಲಿಯೂ ಅದನ್ನೇ ಮಾಡುತ್ತಿದ್ದಾರೆ ಎಂದು ಡಿಕೆ ಸಹೋದರರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. 

ಚುನಾವಣಾ ಪ್ರಚಾರದ ನಡುವೆ ಚನ್ನಪಟ್ಟಣದ ಸೋಗಾಲಪಾಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿಧಾನಸೌಧದಲ್ಲಿ ಮಾತಾಡಿರುವ ಆಡಿಯೋವನ್ನು ಅವರು ಎಲ್ಲಾ ಸಭೆಗಳಲ್ಲಿ ಕೇಳಿಸುತ್ತಿದ್ದಾರೆ. ಅವರಿಗೆ ಎಷ್ಟು ಹತಾಶೆ, ಸೋಲಿನ ಭೀತಿ ಕಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಕೇವಲ ಒಂದು ತುಣುಕು ಕತ್ತರಿಸಿ ಬಿಡುವುದಲ್ಲ, ಪೂರ್ಣ ಆಡಿಯೋ ಬಿಡಲಿ, ಆಗ ಅವರ ಮರ್ಯಾದೆ ಏನು ಎನ್ನುವುದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು. 

Latest Videos

undefined

ಅಧಿಕಾರದ ತೆವಲಿಗಾಗಿ ಕುಮಾರಸ್ವಾಮಿಯಿಂದ ಕ್ಷೇತ್ರ ಬದಲಾವಣೆ: ಸಚಿವ ಚಲುವರಾಯಸ್ವಾಮಿ

ಸಿಡಿ ಆಡಿಯೋ, ವಿಡಿಯೋ ಬಿಡುವುದಲ್ಲಿ ಡಿಕೆ ಸಹೋದರರು ನಿಪುಣರು. ಅವರು ಇಂಥ ದಂಧೆಗಳನ್ನೇ ಮಾಡಿಕೊಂಡು ಬರುತ್ತಿದ್ದಾರೆ. ಇಷ್ಟಕ್ಕೂ ಆ ಆಡಿಯೋ ಹಳೆಯದು. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು. ಒಂದು ವಾರದಿಂದ ಅದನ್ನು ಕತ್ತರಿಸಿ ಹಂಚುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ. ಪಕ್ಕದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದ ಆಡಿಯೋ ಅದು. ಇಸ್ಪೀಟ್, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರು ಐದು ವರ್ಷ ಅವರು ಕೆಲಸ ಮಾಡಲಿ. ನಾನು ಎರಡು ದಿನದಲ್ಲಿ ಬದಲಾವಣೆ ಮಾಡುತ್ತೇನೆ ಎಂದು ನಾನು ಹೇಳಿದ್ದೆ. ಅದನ್ನೇ ಇವರು ಚನ್ನಪಟ್ಟಣಕ್ಕೆ ತಂದು ಕೇಳಿಸುತ್ತಿದ್ದಾರೆ. ಆ ಆಡಿಯೋವನ್ನು ಪೂರ್ತಿ ಹಾಕಿ ಕೇಳಿಸಿದರೆ ಇವರ ಬಂಡವಾಳ, ಯೋಗ್ಯತೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು. 

ಹಾಸನದಲ್ಲೂ ಇದಕ್ಕಿಂತ ಕೆಟ್ಟದಾಗಿ ಮಾಡಿದರು. ನನ್ನ ಮೇಲೆ ಹೇಳಲು ಇವರಿಗೆ ಏನೂ ಇಲ್ಲವಲ್ಲ, ಅದಕ್ಕಾಗಿ ಇಂಥ ಕೆಟ್ಟ ಚೇಷ್ಟೆ ಮಾಡುತ್ತಿದ್ದಾರೆ. ಯೋಗೇಶ್ವರ ಅವರ ಸಂಸ್ಕೃತಿ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಇವರೆಲ್ಲಾ ಸಿಡಿ ಪ್ರೈಯರ್ಸ್. ಆ ಸಂತತಿಯಲ್ಲಿ ಬಂದವರು. ಇದಕ್ಕೆಲ್ಲಾ ನಮ್ಮ ಜನ ಬೆಲೆ ಕೊಡುತ್ತಾರಾ? ನಾನು ಅಭಿವೃದ್ಧಿ ವಿಚಾರ ಇಟ್ಟುಕೊಂಡು ಹೊರಟಿದ್ದೇನೆ. ಅವರು ಏನೇ ಮಾತನಾಡಿದರೂ ಚನ್ನಪಟ್ಟಣದ ಜನ ನವೆಂಬರ್13ಕ್ಕೆ ಉತ್ತರ ಕೊಡುತ್ತಾರೆ ಎಂದು ಹೇಳಿದರು.

click me!