ಪೊಲೀಸರನ್ನು ಬಳಸಿ ವಿರೋಧಿಗಳ ದಮನಕ್ಕೆ ಕಾಂಗ್ರೆಸ್‌ ಹುನ್ನಾರ: ಕುಮಾರಸ್ವಾಮಿ ಕಿಡಿ

By Kannadaprabha News  |  First Published Dec 24, 2024, 8:37 AM IST

ಕೆಲವು ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಅವರ ವಿರೋಧಿಗಳನ್ನು ದಮನ ಮಾಡಲು ಕಾಂಗ್ರೆಸ್‌ ಸರ್ಕಾರ ಹೊರಟಿದೆ. ಜನಪ್ರತಿನಿಧಿಯಾಗಿರುವ ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ?. ಬಂಧಿಸುವುದಿದ್ದರೆ ನೇರವಾಗಿ ಬೆಂಗಳೂರಿನ ಜನಪ್ರತಿನಿಧಿ ಕೋರ್ಟಿಗೆ ಕರೆದುಕೊಂಡು ಬರಬಹುದಿತ್ತು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ 


ಹೊಳೇನರಸೀಪುರ(ಡಿ.24):  ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ?. ಅವರನ್ನು ಸುತ್ತಿಸಲು ಡೈರೆಕ್ಷನ್ ಕೊಟ್ಟವರು ಯಾರು? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿರುವ ಮನೆದೇವರು ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕೆಲವು ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಅವರ ವಿರೋಧಿಗಳನ್ನು ದಮನ ಮಾಡಲು ಕಾಂಗ್ರೆಸ್‌ ಸರ್ಕಾರ ಹೊರಟಿದೆ. ಜನಪ್ರತಿನಿಧಿಯಾಗಿರುವ ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ?. ಬಂಧಿಸುವುದಿದ್ದರೆ ನೇರವಾಗಿ ಬೆಂಗಳೂರಿನ ಜನಪ್ರತಿನಿಧಿ ಕೋರ್ಟಿಗೆ ಕರೆದುಕೊಂಡು ಬರಬಹುದಿತ್ತು. ಬಿಜೆಪಿ ಸ್ನೇಹಿತರು ಸರಿಯಾದ ರೀತಿ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡಿದರೆ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗ್ತಾರೆ ಎಂದರು.

Tap to resize

Latest Videos

undefined

ಲಕ್ಷ್ಮೀ ವೈದ್ಯರಲ್ಲ, ಗಾಯ ಜಗತ್ತೇ ನೋಡಿದೆ: ಸಿ.ಟಿ. ರವಿ

ವಿರೋಧಿಗಳನ್ನು ಸದೆಬಡಿಯಲು ಈ ರೀತಿಯ ಕಾನೂನಿನ ಉಲ್ಲಂಘನೆ ಹಾಗೂ ದುರುಪಯೋಗ ಸರ್ಕಾರದಿಂದಲೇ ಆಗುತ್ತಿದೆ. ಈ ಹಿಂದೆ ಕರ್ನಾಟಕ ಪೊಲೀಸ್ ಇಲಾಖೆ, ದೇಶದಲ್ಲೇ ಉತ್ತಮ ಇಲಾಖೆ ಎಂಬ ಪ್ರಶಂಸೆಗೆ ಪಾತ್ರವಾಗಿತ್ತು. ಆ ಗೌರವವನ್ನು ಮಣ್ಣುಪಾಲು ಮಾಡುವ ನಿಟ್ಟಿನಲ್ಲಿ ಇಂದು ಕೆಲಸ ಮಾಡುತ್ತಿದ್ದಾರೆ. ಕೆಲ ಪೊಲೀಸ್‌ ಅಧಿಕಾರಿಗಳು ಕೆಲವರ ನಿರ್ದೇಶನದಂತೆ ನಡೆದುಕೊಳ್ಳುತ್ತಿರುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಹೇಳಿದರು.

ಮುಂದೆ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಬಂದೇ ಬರುತ್ತದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಹಾಸನ : ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. 

ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿಕೆ, 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರಕಾರ ರಚನೆಯಾದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳ ಜಾರಿ ಬಾಕಿ ಉಳಿದಿದೆ. ಅವೆಲ್ಲವನ್ನೂ ಅನುಷ್ಠಾನಕ್ಕೆ ತರಬೇಕಾದರೆ ಮತ್ತೊಮ್ಮೆ ಮೈತ್ರಿ ಸರಕಾರ ಬರಬೇಕಿದೆ. ಶೀಘ್ರದಲ್ಲಿಯೇ ಬಂದೇ ಬರುತ್ತದೆ ಎಂದು ಹೇಳಿದ್ದರು. 

ಮುಂದೆ ನಿಮ್ಮೆಲ್ಲರ ಆಶೀರ್ವಾದದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರುವ ಆಶಯವಿದೆ. ನನ್ನ ಕನಸಿನ ಕೆಲವು ಶಾಶ್ವತ ಯೋಜನೆಗಳು ಹಾಗೆಯೇ ಉಳಿದಿವೆ. ಅವುಗಳನ್ನೆಲ್ಲಾ ಸಾಕಾರಗೊಳಿಸಬೇಕಿದೆ. ರೈತರ ಬದುಕನ್ನು ಕಟ್ಟಿಕೊಡುತ್ತೇವೆ ಎಂದು ಕೇಂದ್ರ ಸಚಿವರು ತಿಳಿಸಿದ್ದರು. 

ಸಿ.ಟಿ.ರವಿ ಪ್ರಕರಣ ನೈತಿಕ ಸಮಿತಿಗೆ ವಹಿಸಿದ್ದರೆ ತಿಕ್ಕಾಟ ತಪ್ಪುತ್ತಿತ್ತೆ? ಕಾನೂನು ತಜ್ಞರು ಹೇಳಿದ್ದಿಷ್ಟು!

ಕಾಫಿ ಬೆಳೆಗಾರರಿಗೆ ಸಚಿವರ ಅಭಯ: 

ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. 

ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಸಕಲೇಶಪುರ ಜನರು ಆನೆ ಹಾವಳಿಗೆ ತುತ್ತಾಗಿ ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ನಾನೂ ಮನವಿ ಮಾಡಿದ್ದೇನೆ. ಕೇಂದ್ರದಲ್ಲಿ ಪರಿಸರ ಇಲಾಖೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತರುತ್ತೇನೆ ಎಂದು ಭರವಸೆ ನೀಡಿದ್ದರು. 

click me!