ನಿಮ್ಮ ಯೋಗ್ಯತೆ, ಹಣೆಬರಹ ನನಗೆ ಬಹಳ ಚೆನ್ನಾಗಿ ಗೊತ್ತಿದೆ. ನಿಮ್ಮ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ಏನೆಲ್ಲ ಸಂಚು ಮಾಡಿದ್ದೀರಿ, ರೇವಣ್ಣ ಕುಟುಂಬ ಮುಗಿಸಲು ಏನೇನು ಕುತಂತ್ರ ಮಾಡಿದ್ದೀರಿ ಎನ್ನುವುದು ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ
ನವದೆಹಲಿ(ಆ.10): ಮೈಸೂರು ಕಾಂಗ್ರೆಸ್ ಸಮಾವೇಶದಲ್ಲಿ ತಮ್ಮನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಕಿಡಿಕಾರಿದ್ದಾರೆ. 'ನನ್ನನ್ನು ಕೆಣಕಬೇಡ ಶಿವಕುಮಾರ್, ಹುಷಾರು...' ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಜತೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ ಎಂದು ತಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ಗೆ ವ್ಯಕ್ತಿತ್ವ ಎನ್ನುವುದು ಇದೆ ಯಾರು?ಅವರದ್ದು ಒಂದುನಾಲಿಗೆನಾ.. ಅವರುಮನುಷ್ಯನಾ? ಮೊದಲು ನೆಟ್ಟಗೆ ಬದುಕು, ನನ್ನನ್ನು ಕೆಣಕಬೇಡ ಶಿವಕುಮಾರ್, ಹುಷಾರ್... ಎಂದು ಎಚ್ಚರಿಸಿದರು.
undefined
ಮಿ. ಕ್ಲೀನ್ ಸ್ವಾಮಿಯ 50 ಹಗರಣ ಬಿಚ್ಚಿಡುವೆ: ಡಿ.ಕೆ.ಶಿವಕುಮಾರ್
ನಿಮ್ಮ ಯೋಗ್ಯತೆ, ಹಣೆಬರಹ ನನಗೆ ಬಹಳ ಚೆನ್ನಾಗಿ ಗೊತ್ತಿದೆ. ನಿಮ್ಮ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ಏನೆಲ್ಲ ಸಂಚು ಮಾಡಿದ್ದೀರಿ, ರೇವಣ್ಣ ಕುಟುಂಬ ಮುಗಿಸಲು ಏನೇನು ಕುತಂತ್ರ ಮಾಡಿದ್ದೀರಿ ಎನ್ನುವುದು ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ನಮ್ಮ ಶಾಸಕರು ಕಡಿಮೆ ಇದ್ದರೂ ದಾಖಲೆ ಸಮೇತ ಹೋರಾಟ ಮಾಡಿದ್ದೆವು. ದಾಖಲೆ ಸಮೇತ ಮಾತನಾಡಿದೆವು, ಅದರಲ್ಲೇನು ನಾಚಿಕೆ ಇಲ್ಲ ಎಂದು ಹೇಳಿದರು.
ಸರ್ಕಾರ ಕೆಡವಲು ಪ್ರಯತ್ನ ನಡೆಯುತ್ತದೆಯಂತೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಚು ನಡೆಯುತ್ತಿದೆ ಎಂದು ಯಾರು ಹೇಳಿದರು? ಅವರಿಗೇನು ಕನಸು ಬಿದ್ದಿತ್ತಾ? ಅಥವಾ ಅಜ್ಜಯ್ಯ ಹೇಳಿದರಾ? ಯಾರು ಹೇಳಿದ್ರಂತೆ ಅವರಿಗೆ? ಎಂದು ಕೇಳಿದರು.