
ಮೈಸೂರು (ಜ.25): ಕಾಂಗ್ರೆಸ್ ನವರಿಗೆ ನಾಡಿನ ಜನತೆ ಒಳ್ಳೆ ಕೆಲಸ ಮಾಡಿ ಅಂಥ ಅಧಿಕಾರ ಕೊಟ್ಟಿದ್ದಾರೆ. ಕಳೆದ 18 ತಿಂಗಳಿನಿಂದ ಅವರ ನಡವಳಿಕೆ ನೋಡಿದರೆ ರಾಜ್ಯದ ಜನತೆಯ ಸಮಸ್ಯೆಗೆ ಪರಿಹಾರ ತರವು ರೀತಿ ಕಾಣುತ್ತಿಲ್ಲ. ವಿರೋಧ ಪಕ್ಷಗಳನ್ನ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಕ್ಕೆ ಕರ್ನಾಟಕಕ್ಕೆ ಒಳ್ಳೆಯ ಹೆಸರಿದೆ. ಅದನ್ನು ಸರ್ವನಾಶ ಮಾಡಲು ಹೊರಟ್ಟಿದ್ದಾರೆ. ಇಡೀ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿ ರಾಜ್ಯವಾಗಿತ್ತು ಎಂದರು. ಸಿಎಂ ನಾವೆಲ್ಲ ಒಂದಾಗಿದ್ದೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರಿಗೋಸ್ಕರ ಒಂದಾಗಿದ್ದಾರೆ. ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರ ಒಂದಾಗುತ್ತಿದ್ದಾರೆ. ಜನರು ಕುರ್ಚಿ ಕೊಟ್ಟಿದ್ದಾರೆ. ಜನರಿಗೆ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು.
ನಮ್ಮ ಶಕ್ತಿ ಆಮೇಲೆ ತೋರಿಸ್ತೀವಿ: ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಂ ಬೇಕು ಎಂಬ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಅವರು ದೊಡ್ಡವರು ಇದ್ದಾರೆ ಪಾರ್ಟಿಯಲ್ಲಿ ಆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಶಕ್ತಿ ಆಮೇಲೆ ತೋರಿಸ್ತೀವಿ ಎಂದರು. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಂ ಬೇಕು ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹಿರಿಯರು ನಮ್ಮ ಪಕ್ಷದಲ್ಲಿದ್ದಾರೆ. ಬಗೆ ಆಮೇಲೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಶಕ್ತಿ ಆಮೇಲೆ ತೋರಿಸುತ್ತೇವೆ ಎಂದರು.
ಮೈಕ್ರೋಫೈನಾನ್ಸ್ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ: ಕೇಂದ್ರ ಸಚಿವ ಕುಮಾರಸ್ವಾಮಿ
ಶ್ರೀರಾಮುಲು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವುದಿಲ್ಲ: ಶ್ರೀರಾಮುಲು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಕಲಹ ಬಿಜೆಪಿಯ ಆಂತರಿಕ ಕಲಹ. ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಇಬ್ಬರು ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರು, ಅಣ್ಣ ತಮ್ಮಂದಿರಕ್ಕಿಂತ ಚೆನ್ನಾಗಿದ್ದವರು. ಇಬ್ಬರ ಜಗಳವನ್ನು ಬಿಜೆಪಿಯ ನಾಯಕರೇ ಕುಳಿತು ಪರಿಹರಿಸಬೇಕು. ಈ ಬಗ್ಗೆ ನಾನು ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ. ಶ್ರೀರಾಮುಲು ನನ್ನ ಅಭಿಪ್ರಾಯದಲ್ಲಿ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.