
ಬೆಂಗಳೂರು (ಜೂ.21): ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮನುಷ್ಯತ್ವದ ದಾರಿದ್ರ್ಯ ಇದೆ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಡಿಎಸ್-ಬಿಜೆಪಿ ಸರ್ಕಾರ 2028ಕ್ಕೆ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೊಡುವೆ ಎಂಬ ಶಿವಕುಮಾರ್ ಮಾತಿಗೆ ಶುಕ್ರವಾರ ತಿರುಗೇಟು ನೀಡಿದ ಅವರು, ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ ಎಂದರು. ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ. ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ದ್ವೇಷದ ರಾಜಕಾರಣಿ ಮಾಡುತ್ತಿದೆ. ಸರ್ಕಾರದ ಅಧಿಕಾರ ದುರುಪಯೋಗದ ಬಗ್ಗೆ ದಾಖಲೆಗಳಿರುವುದರಿಂದ ನನ್ನ ವಿರುದ್ಧ ಯುದ್ಧ ಶುರು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಡೀ ಸರ್ಕಾರ ಒಬ್ಬ ಕುಮಾರಸ್ವಾಮಿಯನ್ನು ಸೈಲೆಂಟ್ ಮಾಡಲು ಪ್ರಯತ್ನಿಸುತ್ತಿದೆ. ಸರ್ಕಾರದ ಅಕ್ರಮಗಳ ಬಗ್ಗೆ ನನ್ನ ಬಳಿ ಟನ್‌ಗಟ್ಟಲೆ ದಾಖಲೆಗಳಿವೆ. ಯಾವುದೇ ದಾಖಲೆಗಳನ್ನು ಕೊಟ್ಟರು ಇವತ್ತಿನ ತನಿಖಾ ಸಂಸ್ಥೆಗಳ ಮೇಲೆ ನನಗೆ ನಂಬಿಕೆ ಇಲ್ಲ.
ನಮ್ಮದು ಬಂದು ಸಂಸ್ಕೃತಿಯಲ್ಲ. ಸರ್ವ ಜನಾಂಗದ ಶಾಂತಿಯ ತೋಟದ ಸಂಸ್ಕೃತಿ ಎಂದು ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದರು. ಕರ್ನಾಟಕ ಸಿಡಿ ಮತ್ತು ಪೆನ್ ಡ್ರೈವ್ ತಯಾರು ಮಾಡುವ ರಾಜ್ಯವಾಗಿದೆ ಎಂದು ನೇರವಾಗಿ ಆರೋಪಿಸಿದ ಕುಮಾರಸ್ವಾಮಿ, ಹನಿ ಟ್ರ್ಯಾಪ್ ಮತ್ತು ಸುಪಾರಿ ಕುರಿತಂತೆ ಗೃಹ ಮಂತ್ರಿಗಳು ಯಾವ ರೀತಿಯ ತನಿಖೆ ಮಾಡಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ಇಲ್ಲವೇ?, ಯಾರ ಮನೆ ಮೇಲೆ ದಾಳಿ ಮಾಡಿಸಿದರು?. ಆ ಮನೆಯಲ್ಲಿ ಏನೇನು ಸಿಕ್ಕಿತು?. ಯಾಕೆ ಸುಪಾರಿ ಕೊಟ್ಟರು ಎಂದೆಲ್ಲಾ ಅಂಶಗಳ ಬಗ್ಗೆ ತನಿಖೆ ನಡೆಸಿ ಸತ್ಯವನ್ನು ಹೊರಗೆ ತರುತ್ತಾರಾ ?. ಆ ಧೈರ್ಯ ಈ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿದರು.
ನಾನು ಕೇವಲ ಪ್ರಚಾರಕ್ಕೆ ದಾಖಲೆ ಕೊಟ್ಟರೂ ನ್ಯಾಯ ದೊರಕುವುದಿಲ್ಲ ಎಂದು ನನಗೆ ಗೊತ್ತಿದೆ. ದಾಖಲೆಗಳು ನನ್ನ ಬಳಿ ಭದ್ರವಾಗಿವೆ. ಒಂದು ಬಾರಿ 5 ವರ್ಷದ ಸ್ವತಂತ್ರ ಸರ್ಕಾರ ಕೊಡಿ. ಎಲ್ಲರ ಆಡಳಿತವನ್ನು ನೋಡಿದ್ದೀರಿ. ನನಗೂ ಒಂದು ಅವಕಾಶ ಕೊಡಿ. ಎಲ್ಲಾ ಅಕ್ರಮಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತೇನೆ ಎಂದು ವಿಶ್ವಾಸದಿಂದ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.