ಈ ಸರ್ಕಾರ ಸತ್ತು ಹೋಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

Published : Jan 04, 2025, 11:58 AM IST
ಈ ಸರ್ಕಾರ ಸತ್ತು ಹೋಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

ಸಾರಾಂಶ

ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕಿಕ್ಕೇರಿ(ಜ.04): ಅನುದಾನದ ಕೊರತೆಯಿಂದ ಜೆಡಿಎಸ್ ಶಾಸಕರ ಕ್ಷೇತ್ರಗಳ ಜೊತೆಗೆ ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳಲ್ಲೇ ಅಭಿವೃದ್ಧಿ ಕಾಣುತ್ತಿಲ್ಲ. ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. 

ಕೆ.ಆ‌ರ್.ಪೇಟೆ ತಾಲೂಕಿನ ವಡಕಹಳ್ಳಿಯಲ್ಲಿ ಚನ್ನರಾಯಪಟ್ಟಣ- ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಅನುದಾನ ಕೊರತೆ ಇಡೀ ರಾಜ್ಯದ ಸಮಸ್ಯೆಯಾಗಿದೆ. ಕಾಂಗ್ರೆಸ್ ಶಾಸಕರಿಗೇ ಅನುದಾನ ಕೊಡುತ್ತಿಲ್ಲ. ಇನ್ನು ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ಎಲ್ಲಿ ಅನುದಾನ ಕೊಡುತ್ತಾರೆ ಎಂದು ಪ್ರಶ್ನಿಸಿದರು. 

ಬಸ್ ದರ ಏರಿಕೆ: ಜನರ ಜೇಬಿಗೆ ಕೈ ಹಾಕಿ ಸರ್ಕಾರದಿಂದ ದರೋಡೆ, ಕುಮಾರಸ್ವಾಮಿ ಆಕ್ರೋಶ

ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು. 

ಸರ್ಕಾರ ಗ್ಯಾರಂಟಿ ಯೋಜನೆಯ 2 ಸಾವಿರ ರು.ಗಳಿಂದ ರಾಜ್ಯದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವೇ ಎಂದು ಪ್ರಶ್ನಿಸಿದ ಸಚಿವರು. ಎರಡು ಸಾವಿರ ಕೊಟ್ಟು ಬೆನ್ನು ತಟ್ಟಿಕೊಳ್ಳುತ್ತಾರೆ. ರಾಜ್ಯ ಸರ್ಕಾರ ಇದೆಯೇ ಎಂದು ಯೋಚಿಸುವ ಸ್ಥಿತಿಗೆ ಜನರು ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಪಂಚರತ್ನ ಯೋಜನೆ ಜನಕ್ಕೆ ಅರ್ಥ ಆಗಲಿಲ್ಲ: ಜೆಡಿಎಸ್ ಅಧಿಕಾರಕ್ಕೆ ಬಂದಿದ್ದರೆ ಪಂಚರತ್ನ ಯೋಜನೆ ತರುವ ಬಲು ಆಸೆ ಇತ್ತು. ಈ ಮೂಲಕ ಶಾಲೆ, ಆಸ್ಪತ್ರೆ, ರೈತರಿಗೆ ಸಾಲ, ಪ್ರತಿ ಮನೆ ಸದಸ್ಯರಿಗೆ ಉದ್ಯೋಗ, ತಾಯಂದಿರಿಗೆ 4 ಸಾವಿರ ರು. ಕೊಡುವ ಯೋಚನೆ ಮಾಡಲಾಗಿತ್ತು. ಆದರೀಗ ಗ್ಯಾರಂಟಿ ಯೋಜನೆಗಳಿಗೆ ಮರಳಾಗಿ ಜನತೆ ಪಶ್ಚಾತ್ತಾಪ ಪಡುವಂತಾಗಿದೆ. ಚುನಾವಣೆ ವೇಳೆ ಜೆಡಿಎಸ್ ನ ಪಂಚರತ್ನ ಯೋಜನೆ ಬಗ್ಗೆ ಜನರು ಅರ್ಥ ಮಾಡಿಕೊಳ್ಳಲಿಲ್ಲ. ನಮ್ಮ ಕಾರ್ಯ ಕ್ರಮಗಳ ಬಗ್ಗೆ ಜನರು ಚಿಂತನೆ ಮಾಡಲಿಲ್ಲ. ಇಂತಹ ಸರ್ಕಾರದ ಆಡಳಿತದ ಮಧ್ಯೆ ನಾವು ಬದುಕಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿ ಗ್ರಾಮದಲ್ಲೂ ಆರೋಗ್ಯ ತಪಾಸಣಾ ಶಿಬಿರ

ಕಿಕ್ಕೇರಿ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ತಾಲೂಕುಗಳ ಪ್ರತಿ ಗ್ರಾಮದಲ್ಲೂ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. 

ಕೆ.ಆರ್.ಪೇಟೆ ತಾಲೂಕಿನ ವಡಕಹಳ್ಳಿಯಲ್ಲಿ ಚನ್ನರಾಯಪಟ್ಟಣ ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಹಂತದಲ್ಲಿ ಆರೋಗ್ಯ ಮೇಳದ ಮೂಲಕ ಜನರಿಗೆ ಆರೋಗ್ಯ ಸೇವೆ ನೀಡುವ ಬದಲು ಪ್ರತಿ ಗ್ರಾಮದಲ್ಲಿ ಆರೋಗ್ಯ ಮೇಳದ ಮೂಲಕ ವಿಧಾನ ಸಭಾ ಕ್ಷೇತ್ರ, ಹೋಬಳಿ ಮಟ್ಟದಲ್ಲಿ ನಡೆದು ಪ್ರತಿ ಹಳ್ಳಿ ಜನತೆಗೆ ಎಕ್ಸ್‌ರೇ ಮತ್ತಿತರ ಸೌಲಭ್ಯ ಸ್ಥಳದಲ್ಲಿಯೇ ಸಿಗವಂತೆ ಮಾಡಲು ಚಿಂತಿಸಲಾಗಿದೆ ಎಂದರು. 

ನಿಮ್ಮ ಆರ್ಶೀವಾದದಿಂದ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸಚಿವನಾಗಿದ್ದೇನೆ. ನನ್ನ ಮೇಲೆ ದೊಡ್ಡ ಮಟ್ಟಿನ ನಿರೀಕ್ಷೆ ಇಟ್ಟುಕೊಂಡು ಆರ್ಶೀವಾದ ಮಾಡಿದ್ದೀರಿ. ನಾನು ಕೆಲಸದ ಒತ್ತಡಗಳ ನಡುವೆಯೂಜಿಲ್ಲೆಯ ಅಭಿವೃದ್ಧಿಗೆಮುಂದಾಗಿದ್ದೇನೆ ಎಂದರು. 

ಕಾಂಗ್ರೆಸ್ ಅಧಿವೇಶನದಲ್ಲಿ ನಕಲಿ ಗಾಂಧಿಗಳ ದರ್ಬಾರ್: ಕುಮಾರಸ್ವಾಮಿ ವ್ಯಂಗ್ಯ

ರಾಜ್ಯದಲ್ಲಿ ಬಾಣಂತಿಯರ ಸಾವು ನಿರಂತರವಾಗಿ ನಡೆಯುತ್ತಿದೆ. ಇದು ಆತಂಕದ ವಿಷಯ. ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರಿನ ಕೆ.ಆರ್.ನಗರ ಸೇರಿದಂತೆ ಎಂಟು ತಾಲೂಕಿನ ಪ್ರತಿ ಗ್ರಾಮದಲ್ಲೂ ಆರೋಗ್ಯ ತಪಾಸಣೆ ಮಾಡಿಸಲು ಚಿಂತನೆ ಮಾಡಲಾಗಿದೆ. ಈ ಬಗ್ಗೆ ಕೂಡ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ ಎಂದು ಹೇಳಿದರು. ಮಂಡ್ಯದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಕೆಲಸಕ್ಕಾಗಿ 4 ಸಾವಿರ ಅರ್ಜಿ ನೀಡಿದ್ದು 1500 ನಿರುದ್ಯೋಗಿಗಳಿಗೆ ಕೆಲಸ ನೀಡಲಾಗಿದೆ. ಐಟಿಐ ಯುವಕರಿಗೆ ಉದ್ಯೋಗಕ್ಕೆ ವಿಫುಲ ಅವಕಾಶವಿದೆ. ಹೊರಗಡೆ ಹೋಗಿ ಕೆಲಸ ಮಾಡಲು ಸಿದ್ದರಾದರೆ ಕೆಲಸ ಕೊಡಿಸಲು ಬದ್ಧನಿದ್ದೇನೆ ಎಂದರು. 

ಯುವ ಜನರಿಗೆ ಕೆಲಸ ರೂಪಿಸಲು ಇಂದು ಸಹ ಸಭೆ ಮಾಡಿದ್ದೇನೆ. ಕೆ.ಆರ್.ಪೇಟೆ ತಾಲೂಕಿನ ಅಭಿವೃದ್ಧಿ ಹಾಗೂ ಇತರೆ ಸಮಸ್ಯೆಗಳನ್ನು ಜನತೆ ಎದುರಿಸುತ್ತಿದ್ದಾರೆ. ಆರೋಗ್ಯದ ಜೊತೆಗೆ ಕೆರೆ- ಕಟ್ಟಿ, ಸೇತುವೆ ಹಾಳಾಗಿವೆ. ರಾಜ್ಯ ಸರ್ಕಾರ ಮೌನಕ್ಕೆ ಜಾರಿದೆ. ಇವುಗಳಿಗೆ ಯಾವ ಮೂಲದಿಂದ ಆರ್ಥಿಕ ಸಹಾಯ ಮಾಡಬಹುದು ಎಂದು ನಾನು ಯೋಚಿ ಸುತ್ತಿದ್ದೇನೆ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ