ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಕೂಡ ನಡೆಯಲಿದೆ. ಇನ್ನೂ ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡ್ತೇವೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ರಾಮನಗರ(ಅ.12): ಈಗಾಗಲೇ 5 ಜಿ.ಪಂ ಕ್ಷೇತ್ರ ಹಾಗೂ ಟೌನ್ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ದಿನ ಪ್ರತಿ ಹಳ್ಳಿಯಿಂದ ಪ್ರಮುಖ ಕಾರ್ಯಕರ್ತರು, ಮುಖಂಡರು ಬಂದಿದ್ದಾರೆ. ಚುನಾವಣೆಯಲ್ಲಿ ಯಾವ ರೀತಿ ತಯಾರಿಗಳಾಗಬೇಕು ಎಂಬುದನ್ನ ಚರ್ಚಿಸಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇಂದು(ಶನಿವಾರ) ಜಿಲ್ಲೆಯ ಬಿಡದಿಯ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಅಭ್ಯರ್ಥಿ ಯಾರು ಆಗಬೇಕು ಅನ್ನೋದಕ್ಕೆ ಸಭೆ ಕರೆದಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಲ್ಲಿ ಕೆಲಸ ಮಾಡಬೇಕು. ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಕೂಡ ನಡೆಯಲಿದೆ. ಇನ್ನೂ ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡ್ತೇವೆ ಎಂದು ತಿಳಿಸಿದ್ದಾರೆ.
undefined
ಕಾಂಗ್ರೆಸ್ ಸರ್ಕಾರದಿಂದ ಸೇಡಿನ ರಾಜಕಾರಣ ಅಲ್ಲದೆ ಮತ್ತೇನು?: ಕೇಂದ್ರ ಸಚಿವ ಕುಮಾರಸ್ವಾಮಿ
ಚನ್ನಪಟ್ಟಣ ಜೆಡಿಎಸ್‌ನ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ನ ಕ್ಷೇತ್ರ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೇವು. 2013 ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡ್ತೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.