ಚನ್ನಪಟ್ಟಣ ಟಿಕೆಟ್‌ ನನಗೇ ಎಂದ ಯೋಗೇಶ್ವರ್‌: ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಿಷ್ಟು

By Girish GoudarFirst Published Oct 17, 2024, 5:09 PM IST
Highlights

ಚನ್ನಪಟ್ಟಣ ಇನ್ನೂ ಏನೂ ಆಗಿಲ್ಲ, ಅಲ್ಲೇ ಇದೆ. ನಾನು ಬಿಜೆಪಿಯ ರಾಜ್ಯ ನಾಯಕರ ಜೊತೆ ಕೂತು ಚರ್ಚೆ ಮಾಡ್ತೀನಿ. ದೆಹಲಿಯಲ್ಲಿ ಕ್ಷೇತ್ರದ ತೀರ್ಮಾನವನ್ನ ನನಗೆ ಬಿಟ್ಟಿದ್ದಾರೆ. ನಮಗೆ ಎನ್‌ಡಿಎ ಸೀಟ್ ಗೆಲ್ಲಬೇಕು ಅನ್ನೋದು ಅಷ್ಟೇ ಇದೆ. ಇದರಲ್ಲಿ ದುಡುಕಲ್ಲ, ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ

ರಾಮನಗರ(ಅ.17):  ಚುನಾವಣೆಯ ರಾಜಕೀಯ ಪ್ರಕ್ರಿಯೆ ಆರಂಭವಾಗಿದೆ. ನಮ್ಮ ಪಕ್ಷದ ಮುಖಂಡರ ಸಭೆ ಕರೆದಿದ್ದೇನೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಪಾತ್ರದ ಬಗ್ಗೆ ಚರ್ಚೆ ಮಾಡ್ತೀವಿ. ಶಿಗ್ಗಾಂವಿ, ಸಂಡೂರಲ್ಲಿ ನಮ್ಮ ಪಾತ್ರ ಕಡಿಮೆ ಇರಬಹುದು. ಆದರೆ ಒಂದೊಂದು ಓಟು ಕೂಡಾ ಮುಖ್ಯ ಆಗುತ್ತೆ. ಎಲ್ಲವನ್ನೂ ಒಳಗೊಂಡಂತೆ ಚರ್ಚೆ ಮಾಡಲು ಕೆಲ ಸೆಲೆಕ್ಟೆಡ್ ನಾಯಕರ ಸಭೆ ಕರೆದಿದ್ದೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. 

ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಜಿಲ್ಲೆಯ ಬಿಡದಿ ತೋಟದ ಮನೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು,  ಚನ್ನಪಟ್ಟಣ ಇನ್ನೂ ಏನೂ ಆಗಿಲ್ಲ, ಅಲ್ಲೇ ಇದೆ. ನಾನು ಬಿಜೆಪಿಯ ರಾಜ್ಯ ನಾಯಕರ ಜೊತೆ ಕೂತು ಚರ್ಚೆ ಮಾಡ್ತೀನಿ. ದೆಹಲಿಯಲ್ಲಿ ಕ್ಷೇತ್ರದ ತೀರ್ಮಾನವನ್ನ ನನಗೆ ಬಿಟ್ಟಿದ್ದಾರೆ. ನಮಗೆ ಎನ್‌ಡಿಎ ಸೀಟ್ ಗೆಲ್ಲಬೇಕು ಅನ್ನೋದು ಅಷ್ಟೇ ಇದೆ. ಇದರಲ್ಲಿ ದುಡುಕಲ್ಲ, ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. 

Latest Videos

ಚನ್ನಪಟ್ಟಣದಲ್ಲಿ ನಾನೇ ಮೈತ್ರಿ ಅಭ್ಯರ್ಥಿ ಎಂದ ಯೋಗಿ: 25 ವರ್ಷಗಳ ಹಿಂದಿನ ಆ ಚರಿತ್ರೆ ಕೆದಕಿದ್ದೇಕೆ ಸೈನಿಕ?

ಯೋಗೇಶ್ವರ್ ನಾನೇ ಎನ್‌ಡಿಎ ಅಭ್ಯರ್ಥಿ ಎಂಬ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಎಚ್‌ಡಿಕೆ, ಯಾರು ಏನು ಬೇಕಾದರೂ ಹೇಳಿಕೊಳ್ಳಬಹುದು. ಅಂತಿಮವಾಗಿ ಪಕ್ಷದ ಹಿರಿಯ ನಾಯಕರು ಕೂತು ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ. 

ರಾಜ್ಯ ಬಿಜೆಪಿ ನಾಯಕರ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಾನೇ ಫೋನ್ ಮಾಡಿ ಮಾತನಾಡಿದ್ದೇನೆ. ಆರ್.ಅಶೋಕ್ ಹಾಗೂ ವಿಜಯೇಂದ್ರ ಜೊತೆ ಮಾತನಾಡಿದ್ದೇನೆ. ಪ್ರಮುಖರು ಕೂತು ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಚರ್ಚೆ ಮಾಡೋಣ ಎಂದಿದ್ದೇನೆ. ನಾಳೆ ಮಂಡ್ಯದಲ್ಲಿ ಉದ್ಯೋಗ ಮೇಳ ಇದೆ. ಹಾಗಾಗಿ‌ ನಾಡಿದ್ದು ಎರಡೂ ಪಕ್ಷದ ನಾಯಕರು ಕೂತು ಚರ್ಚೆ ಮಾಡ್ತೀವಿ. ಇಲ್ಲಿ ಮೂರು ಕ್ಷೇತ್ರ ಸಂಘಟನೆ ಬಗ್ಗೆ ಮಾತ್ರ ಸಭೆ ಮಾಡ್ತಿದ್ದೇನೆ. ಚುನಾವಣಾ ಕೆಲಸ ಯಾವ ರೀತಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡ್ತೀನಿ. ಮೂರು ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು ಎಂಬುದು ನಮ್ಮ ಉದ್ದೇಶ ಎಂದಿದ್ದಾರೆ. 

ಚುನಾವಣಾ ಚಟುವಟಿಕೆಗಳಿಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ದೂರ ಉಳಿಯುತ್ತಿರುವ ವಿಚಾರದ ಬಗ್ಗೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ಆ ರೀತಿ ಏನು ಇಲ್ಲ, ನಾವಿನ್ನೂ ಕೋರ್ ಕಮಿಟಿ ಸಭೆಯನ್ನೇ ಕರೆದಿಲ್ಲ. ಅವರಿಗೆ ಒಂದೊಂದು ಸಲ ಹೀಗೆ ಆಗುತ್ತೆ. ಬಳಿಕ ಅವರೇ ತೀರ್ಮಾನ ಮಾಡಿಕೊಂಡು ಯಾವ ಟೈಂಗೆ ಬರಬೇಕೋ ಬರ್ತಾರೆ ಎಂದು ಹೇಳುವ ಮೂಲಕ ಜಿಟಿಡಿ ನಡೆ ಬಗ್ಗೆ ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ. 

ಚನ್ನಪಟ್ಟಣ ಬೈಎಲೆಕ್ಷನ್‌: ಟಿಕೆಟ್ ಕಗ್ಗಂಟಿನ ಮಧ್ಯೆ ಯೋಗೇಶ್ವ‌ರ್ ಸಭೆ, ಬಂಡಾಯದ ಕಹಳೆ

ಉಪಚುನಾವಣೆ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು, ಈಗ ತೀರ್ಮಾನ ಮಾಡೋಕೆ ಹೋಗ್ತಾ ಇದೀವಲ್ಲ. ಒಂದೆರಡು ಗಂಟೆ ಕಾಯಿರಿ, ಗೊತ್ತಾಗುತ್ತೆ. ನಾವು ಕುಮಾರಸ್ವಾಮಿ ಅವ್ರಿಗೆ ಸಲಹೆ ಕೊಡೋದು ಏನು ಇಲ್ಲ. ಕುಮಾರಸ್ವಾಮಿದೊಡ್ಡೋರು ಏನು ತೀರ್ಮಾನ ಮಾಡ್ತಾರೋ ಅದು ಆಗುತ್ತೆ. ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕುಮಾರಸ್ವಾಮಿ ಹಾಗೂ ದೊಡ್ಡೋರು ತೀರ್ಮಾನ ಮಾಡಬೇಕು. ಸ್ಥಳೀಯವಾಗಿ ಪರಿಸ್ಥಿತಿ ಏನು ಅಂತ ಅವರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ. 

ನನಗೆ ಮೈತ್ರಿ ಟಿಕೆಟ್ ಎಂಬ ಯೋಗೇಶ್ವರ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ನಾಡಗೌಡ ಅವರು, ಅವರು ಹೇಳ್ತಾರೆ. ಆದ್ರೆ ಯಾರು ಮೈತ್ರಿ ಅಭ್ಯರ್ಥಿ ಆಗಬೇಕು ಅಂತ ಕುಮಾರಸ್ವಾಮಿ ಹಾಗೂ ಬಿಜೆಪಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ. 

click me!