* ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನೆಲೆ
* ಫೆಬ್ರವರಿಯಲ್ಲಿ ಬೊಮ್ಮಾಯಿ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎನ್ನುವ ಸುದ್ದಿ
* ಎಲ್ಲಾ ಗಾಳಿ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಕೇಂದ್ರ ಸಚಿವ
ಧಾರವಾಡ, (ಡಿ.22): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಬಸವರಾಜ ಬೊಮ್ಮಾಯಿ(Basavaraj Bommai) ಕುರ್ಚಿ ಅಭದ್ರ ಎನ್ನುವ ವಾತಾವರಣ ಮತ್ತೆ ಸೃಷ್ಟಿಯಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದಲೂ ನಾಯಕತ್ವ ಬದಲಾವಣೆ ವಿಷಯ ಪದೇ ಪದೇ ಚರ್ಚೆಗೆ ಬರುತ್ತಿದೆ. ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತು ಸತತವಾಗಿ ಚರ್ಚೆಗಳು ನಡೆದು ಕಡೆಗೆ 2 ವರ್ಷ ಅಧಿಕಾರ ಪೂರ್ಣಗೊಳಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಡಿಯೂರಪ್ಪ ಜಾಗಕ್ಕೆ ಬೊಮ್ಮಾಯಿ ಬಂದಿದ್ದರೂ ನಾಯಕತ್ವ ಬದಲಾವಣೆ ವಿಷಯದ ಚರ್ಚೆ ಮಾತ್ರ ನಿಂತಿಲ್ಲ. ಬೊಮ್ಮಾಯಿ ಸ್ಥಾನವೂ ಭದ್ರವಿಲ್ಲ ಎನ್ನುವ ವದಂತಿ ನಿರಂತರವಾಗಿ ಹರಿದಾಡುತ್ತಲೇ ಇದೆ.
undefined
Basavaraj Bommai: ಸಿಎಂ ಬದಲಾವಣೆಗೆ ಸ್ವಪಕ್ಷೀಯ ನಾಯಕರ ಹೇಳಿಕೆಗಳು ಪುಷ್ಟಿ
ಇನ್ನು ಈ ಬಗ್ಗೆ ಇಂದು(ಬುಧವಾರ) ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ(Pralhad Joshi) ಪ್ರತಿಕ್ರಿಯಿಸಿದ್ದು, 2023ರ ತನಕ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಮಾಡುವ ಪ್ರಸ್ತಾಪ ಹೈಕಮಾಂಡ್ ಮಟ್ಟದಲ್ಲಿ ಇಲ್ಲ ಎಂದು ಗಾಳಿ ಸುದ್ದಿಗಳಿಗೆ ಸ್ಪಷ್ಟನೆ ನೀಡಿದರು.
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಮಾಡುವ ಪ್ರಸ್ತಾಪ ಹೈಕಮಾಂಡ್ ಮಟ್ಟದಲ್ಲಿ ಇಲ್ಲ. ಸಿಎಂ ಬೊಮ್ಮಾಯಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಈ ರೀತಿಯಾಗಿ ಹತ್ತು ಸಲ ಮಾತನಾಡಿರುವುದನ್ನು ಕೇಳಿದ್ದೇನೆ ಎಂದು ಬೊಮ್ಮಾಯಿ ಅವರ ಅಧಿಕಾರ ಶಾಶ್ವತ ಅಲ್ಲ ಮಾತಗಳಿಗೆ ಸ್ಪಷ್ಟನೆ ನೀಡಿದರು.
ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವೇ ಇಲ್ಲ. ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ. ಅಧಿಕಾರ, ಸ್ಥಾನಮಾನ ಶಾಶ್ವತವಲ್ಲ. ಬಸವರಾಜ ಬೊಮ್ಮಾಯಿ ಎಂಬುದಷ್ಟೇ ಶಾಶ್ವತ. ಹಿಂದಿರುವ ಪದನಾಮವಲ್ಲ. ನನಗೆ ದೊಡ್ಡ ಆಸೆ ಏನಿಲ್ಲ, ನಿಮ್ಮ ಪ್ರೀತಿ ವಿಶ್ವಾಸವನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕು ಎಂಬುದೇ ನನ್ನ ಆಸೆಯಾಗಿದೆ. ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ ಎಂದು ಹೇಳಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಮುಖ್ಯಮಂತ್ರಿಗಳ ಹೇಳಿಕೆ ಬಳಿಕ ರಾಜ್ಯ ರಾಜಕೀಯದಲ್ಲಿ ಚರ್ಚೆಗಳು ಆರಂಭವಾಗಿದ್ದವು. ಹೈಕಮಾಂಡ್‌ನಿಂದ ಸಂದೇಶ ಬಂದಿದೆ. ಮುಖ್ಯಮಂತ್ರಿಗಳು ಬದಲಾವಣೆಯಾಗಲಿದ್ದಾರೆ. 2022ರ ಫೆಬ್ರವರಿಯಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆಯಾಗಲಿದ್ದಾರೆ ಎನ್ನುವ ಮಾತು ರಾಜ್ಯ ಬಿಪಿಪಿ ವಲಯದಲ್ಲಿ ಗುಸು-ಗುಸು ಶುರುವಾಗಿದೆ.
ಸ್ವಪಕ್ಷೀಯರಿಂದಲೇ ನಾಯಕತ್ವ ಬದಲಾವಣೆ ಹೇಳಿಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸ್ವಪಕ್ಷೀಯ ನಾಯಕರಿಂದಲೇ ಹೇಳಿಕೆಗಳು ಕೇಳಿಬರುತ್ತಿವೆ. ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿ ನಾಯಕತ್ವ ಬದಲಾವಣೆ ವದಂತಿಗೆ ತುಪ್ಪ ಸರಿದಿದ್ದರು.