Siddaramaiah ಮೊದಲ ಅವಧಿಯಲ್ಲಿ ಟಿಪ್ಪು, ಇವಾಗ ಔರಂಗಜೇಬ್‌ನನ್ನು ಮರೆಸಲಾಗುತ್ತಿದೆ: ಪ್ರಲ್ಹಾದ್‌ ಜೋಶಿ

Published : Oct 02, 2023, 10:42 PM IST
Siddaramaiah ಮೊದಲ ಅವಧಿಯಲ್ಲಿ ಟಿಪ್ಪು, ಇವಾಗ ಔರಂಗಜೇಬ್‌ನನ್ನು ಮರೆಸಲಾಗುತ್ತಿದೆ: ಪ್ರಲ್ಹಾದ್‌ ಜೋಶಿ

ಸಾರಾಂಶ

ಈದ್ ಮಿಲಾದ್ ಮೆರವಣಿಗೆಯ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಂಭವಿಸಿದ ಗಲಭೆಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಘಟನೆ ಬಗ್ಗೆ ಭಾರತದ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್‌ ಜೋಶಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. 

ಬೆಂಗಳೂರು (ಅ.02): ಈದ್ ಮಿಲಾದ್ ಮೆರವಣಿಗೆಯ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಂಭವಿಸಿದ ಗಲಭೆಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಘಟನೆ ಬಗ್ಗೆ ಭಾರತದ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ್‌ ಜೋಶಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ತುಷ್ಠೀಕರಣ ರಾಜಕಾರಣದ ಪರಿಣಾಮ ರಾಜ್ಯದಲ್ಲಿ ಇಸ್ಲಾಮಿಕ್ ಮತಾಂಧರು ತಲೆ ಎತ್ತುತ್ತಿದ್ದಾರೆ. ಮೊನ್ನೆ ಕೋಲಾರದಲ್ಲಿ ಆಯ್ತು ಈಗ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಶಿವಮೊಗ್ಗದಲ್ಲಿ‌ಈ ರೀತಿ ಗಲಾಟೆ ನಡೆಯುವುದು ಮೊದಲಾ ಅಂಥ ರಾಜ್ಯ ಗೃಹ ಸಚಿವರು ಕೇಳ್ತಾರೆ. 

ನಿಮ್ಮ ಕಾಲದಲ್ಲಿ ಗಲಭೆ ನಡೆಯದೇ ಇರಲ್ಲ, ನಿಮಗೆ ಹೊಸದು ಅಲ್ಲದೇ ಇರಬಹುದು ಆದ್ರೆ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಮುಸ್ಲಿಂರಿಗೆ ಕಾರ್ಯಕ್ರಮ ನಡೆಸಲು ಯಾವುದೇ ತೊಂದರೆ ಇಲ್ಲದೇ ಪೊಲೀಸರು ಅನುಮತಿ ನೀಡ್ತಾರೆ. ಆದ್ರೆ ಗಣಪತಿ ಇಡಲು ನಿರ್ಬಂಧಗಳನ್ನು ಹಾಕ್ತಾರೆ. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಟಿಪ್ಪು ಸುಲ್ತಾನ್, ಎರಡನೇ ಅವಧಿಯಲ್ಲಿ ಔರಂಗಜೇಬ್ ನನ್ನು ಮರೆಸಲಾಗುತ್ತಿದೆ. ಇದರ ಹಿಂದೆ ನಿಮ್ಮ ಉದ್ದೇಶ ಏನು? ತುಷ್ಠೀಕರಣದ ಪರಾಕಾಷ್ಠೆ ಅನ್ನೋದು ಗೊತ್ತಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಗಲಭೆಗೆ ಆಗುವ ಮುನ್ನವೇ ನಾವು ಮುಂಜಾಗ್ರತೆ ಕ್ರಮ ತೆಗೆದುಕೊಂಡಿದ್ದೆವು: ಸಚಿವ ಪರಮೇಶ್ವರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ: ರಾಜ್ಯದಲ್ಲಿ ಶಿವಮೊಗ್ಗ ಹಾಗೂ ಕೋಲಾರದಲ್ಲಿ ಧಾರ್ಮಿಕ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಆದರೂ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.  ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರವಾಗಿದೆ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂತ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಶಿವಮೊಗ್ಗದ 3 ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು. 

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡಲ್ಲ: ಮಾಜಿ ಸಚಿವ ಆನಂದ್‌ ಸಿಂಗ್‌

ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ ಎಂದು ಆರೋಪಿಸಿದ್ದಾರೆ. ಶಿವಮೊಗ್ಗ ನಗರಕಗ್ಕೆ ಸಮರ್ಥರಲ್ಲದ ಅಧಿಕಾರಿಯನ್ನು ನೇಮಕ ಮಾಡಿದ್ದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‌ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ಇದನ್ನ ಸಮಗ್ರವಾಗಿ ನಿಭಾಯಿಸಿ, ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು. ಅಧಿಕಾರಿಳನ್ನು ಯಾವುದೇ ಮುಲಾಜಿಲ್ಲದೆ ಟ್ರಾನ್ಸ್‌ಫರ್ ಮಾಡಿದ್ದರೆ, ಇಂತಹ ಘಟನೆ ನಿಲ್ಲುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌