ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ರಾಜ್ಯ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಹೋರಾಟಗಾರರ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ದಾವಣಗೆರೆ (ಡಿ.30): ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ರಾಜ್ಯ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಹೋರಾಟಗಾರರ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದ ಜಿಎಂ ಐಟಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ದಾಂಧಲೆ ಮಾಡಿದವರ ಮೇಲಿನ ಪ್ರಕರಣಗಳ ಹಿಂಪಡೆಯಲು ಹೇಳುವ ಕಾಂಗ್ರೆಸ್ ಸರ್ಕಾರವು ಕನ್ನಡಕ್ಕಾಗಿ ಹೋರಾಟ ನಡೆಸಿದವರ ಬಂಧನಕ್ಕೆ ಒಪ್ಪಿಸಿದ್ದು ಸರಿಯಲ್ಲ ಎಂದರು. ಕನ್ನಡ ಪರ ಹೋರಾಟಗಾರರ ಹೋರಾಟ ನ್ಯಾಯಯುತವಾಗಿದೆ. ಭಾಷೆಗಾಗಿ ಹೋರಾಡಿದ ಹೋರಾಟಗಾರರ ಮೇಲೆ ಮತ್ತೆ ಎಂದಿಗೂ ಹೋರಾಟ ಮಾಡಬಾರದೆಂದು ಎಲ್ಲಾ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿ ಕಾಂಗ್ರೆಸ್ ಸರ್ಕಾರ ಏನು ಸಾಧಿಸಲು ಹೊರಟಿದೆ ? ಕನ್ನಡ ಭಾಷೆ ನಾಮಫಲಕದಲ್ಲಿ ಬರೆಸುವಂತೆ ಹೋರಾಡುವುದೂ ತಪ್ಪೇ ಎಂದು ಪ್ರಶ್ನಿಸಿದರು.
ಆರೋಪ ಪಟ್ಟಿಯಲ್ಲೇ ಉಲ್ಲೇಖ: ಬೆಂಗಳೂರಿನ ಡಿಜೆ ಹಳ್ಳಿ , ಕೆಜಿ ಹಳ್ಳಿ ಗಲಭೆಕೋರರು ಪೊಲೀಸರನ್ನೇ ಕೊಲ್ಲಲು, ಸುಡುವುದಕ್ಕೆ ಹೊರಟಿದ್ದರು. ಇಂತಹ ಘೋರ ಅಪರಾಧಗಳ ಬಗ್ಗೆ ತನಿಖಾಧಿಕಾರಿಗಳು, ರಾಷ್ಟ್ರೀಯ ತನಿಖಾ ದಳದ ವರದಿಯಲ್ಲಿ, ಅಧಿಕಾರಿಗಳು ಸಲ್ಲಿಸಿದ ಆರೋಪ ಪಟ್ಟಿಯಲ್ಲೇ ಉಲ್ಲೇಖವಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳ ಗಲಭೆಕೋರರ ಮೇಲಿನ ಕೇಸ್ ಹಿಂಪಡೆಯಲು ಹೊರಟ ಕಾಂಗ್ರೆಸ್ ಸರ್ಕಾರ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ, ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಎಲ್ಲಾ ಬಂಧಿತ ಕನ್ನಡ ಪರ ಹೋರಾಟಗಾರರ ಕಾಂಗ್ರೆಸ್ ಸರ್ಕಾರ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
ನುಡಿದಂತೆ ನಡೆಯುವುದೇ ನಮ್ಮ ಸರ್ಕಾರದ ಸಿದ್ದಾಂತ: ಶಾಸಕ ನರೇಂದ್ರಸ್ವಾಮಿ
ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ, ಶಾಸಕ ಬಿ.ಪಿ.ಹರೀಶ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಯಶವಂತರಾವ್ ಜಾಧವ್, ಬಿ.ಎಸ್.ಜಗದೀಶ, ಟಿ.ಶ್ರೀನಿವಾಸ ದಾಸಕರಿಯಪ್ಪ, ಲೋಕಿಕೆರೆ ನಾಗರಾಜ, ಬಿ.ಎಂ.ಸತೀಶ ಕೊಳೇನಹಳ್ಳಿ, ಬಿ.ಟಿ.ಸಿದ್ದಪ್ಪ, ಪಿ.ಸಿ.ಶ್ರೀನಿವಾಸ ಭಟ್, ಜಿ.ಎಸ್.ಶ್ಯಾಮ ಮಾಯಕೊಂಡ, ರಾಜನಹಳ್ಳಿ ಶಿವಕುಮಾರ, ಧನಂಜಯ ಕಡ್ಲೇಬಾಳು, ಎನ್.ರಾಜಶೇಖರ, ಕರಾಟೆ ತಿಮ್ಮೇಶ, ಸಂಗನಗೌಡ್ರು, ಎಚ್.ಎನ್. ಗುರುನಾಥ, ಬಾತಿ ದೊಗ್ಗಳ್ಳಿ ವೀರೇಶ, ಶಿವನಗೌಡ ಪಾಟೀಲ, ಟಿಂಕರ್ ಮಂಜಣ್ಣ ಇತರರಿದ್ದರು.