ದೇಶದ ಜನರು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳಿಗೆ ವ್ಯಾಪಕವಾಗಿ ಬೆಂಬಲಿಸುತ್ತಿದ್ದಾರೆ: ಪ್ರಹ್ಲಾದ ಜೋಶಿ
ರಾಯಚೂರು(ನ.09): ಹಿಂದು ನಮ್ಮ ಪದವೇ ಅಲ್ಲ. ಇದು ಪರ್ಷಿಯನ್‌ನಿಂದ ಬಂದಿರುವ ಪದ. ಹಿಂದು ಪದದ ಅರ್ಥ ಅಶ್ಲೀಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಖಂಡನೀಯವಾಗಿದ್ದು, ಕೂಡಲೇ ಅವರು ಬಹಿರಂವಾಗಿ ಕ್ಷಮೆಯಾಚಿಸಬೇಕು ಎಂದು ಕೇಂದ್ರದ ಸಂಸದೀಯ ವ್ಯವಹಾರ ಹಾಗೂ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು. ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ನಂತರ ಮಂಗಳವಾರ ಮಾತನಾಡಿದರು. ಅಜ್ಞಾನಿಗಳ ಬಾಯಲ್ಲಿಯೇ ಇಂತಹ ಮಾತುಗಳು ಬರುತ್ತವೆ, ಪ್ರಜ್ಞಾವಂತಿಕೆಯಿಲ್ಲದ ಸತೀಶ ಜಾರಕಿಹೊಳಿ ಅವರು ಇಡೀ ನಮ್ಮ ಸಂಸ್ಕೃತಿಗೆಯನ್ನೇ ಹಿಯಾಳಿಸಿ ಮಾತನಾಡಿದ್ದು ಕೂಡಲೇ ಹಿಂದುಗಳಿಗೆ ಕ್ಷಮೆಯನ್ನು ಕೇಳಬೇಕು ಎಂದು ಒತ್ತಾಯಿಸಿದರು.
40 ಮಿಲಿಯನ್ ಟನ್ ಕಲ್ಲಿದ್ದಲು ಸಂಗ್ರಹ:
ಎಲ್ಲೆಡೆ ಉತ್ತಮ ಮಳೆಯಾಗಿದ್ದು ಅನ್ಯ ಮೂಲಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇದರಿಂದಾಗಿ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಬೇಡಿಕೆ ತಗ್ಗಿದೆ. ಮುಂದಿನ ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ಕರೆಂಟ್ ಅಭಾವ ಸೃಷ್ಠಿಯಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ಆ ನಿಟ್ಟಿನಲ್ಲಿ ದೇಶದ ವಿವಿಧ ಗಣಿಗಳಿಂದ ಕಲ್ಲಿದ್ದನ್ನು ತರಿಸಿಕೊಂಡು ಸಂಗ್ರಹಿಸಿ ಬೇಸಿಗೆ ಸಮಯದಲ್ಲಿ ಶಾಖೋತ್ಪನ್ನ ಸ್ಥಾವರಗಳಿಗೆ ಅಗತ್ಯವಾದ ರೀತಿಯಲ್ಲಿ ಕಲ್ಲಿದ್ದಲನ್ನು ಪೂರೈಕೆ ಮಾಡಲಾಗುವುದು ಎಂದು ಹೇಳಿದರು.
ರಾಯಚೂರು: ದೇವದುರ್ಗ ಗೆಲುವಿಗಾಗಿ ಜೆಡಿಎಸ್ ಹರಸಾಹಸ, ಶಾಸಕ ಶಿವನಗೌಡ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಯಾವುದೇ ರೀತಿಯ ಪರಿಣಾಮವಾಗುವುದಿಲ್ಲ, ದೇಶದ ಜನರು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆಗಳಿಗೆ ವ್ಯಾಪಕವಾಗಿ ಬೆಂಬಲಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಯಾತ್ರೆಗೆ ಎಲ್ಲೆಡೆ ಅಭೂತಪೂರ್ವ ಸ್ಪಂದನೆಯು ಲಭಿಸುತ್ತಿದ್ದು, ಇದನ್ನು ಸಹಿಸಿದ ಕಾಂಗ್ರೆಸ್ಸಿಗರು ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು. ಚಂದ್ರಗ್ರಹಣ ವಿರುವ ಕಾರಣಕ್ಕಾಗಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಬಂದು ಶ್ರೀಗುರುಸಾರ್ವಭೌಮರ ದರ್ಶನವನ್ನು ಪಡೆದಿರುವುದಾಗಿ ತಿಳಿಸಿದರು.
ಮಂತ್ರಾಲಯ ರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕೇಂದ್ರದ ಸಂಸದೀಯ ವ್ಯವಹಾರ ಹಾಗೂ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಗಳವಾರ ಭೇಟಿ ನೀಡಿದರು.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಮುಖಾಂತರ ಸುಕ್ಷೇತ್ರ ಮಂತ್ರಾಲಯಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಶ್ರೀಮಠದಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಗ್ರಾಮದೇವತೆ ಮಂಚಾಲಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀರಾಘವೇಂದ್ರ ಸ್ವಾಮಿಗಳ ಮೂಲಬೃಂದಾವನ ದರ್ಶನ ಪಡೆದರು. ಇದೇ ವೇಳೆ ಸಚಿವರು ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ನಂತರ ಶ್ರೀಗಳು ಸಚಿವರಿಗೆ ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಪಂಡಿತರಾದ ರಾಜಾ ಗಿರಿರಾಜಾಚಾರ್,ಅಧಿಕಾರಿ, ಸಿಬ್ಬಂದಿ ಇದ್ದರು.