ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಟಾರ್ಗೆಟ್ ತಲುಪಲು ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪಣತೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆ ನೀಡಿದರು.
ಹುಬ್ಬಳ್ಳಿ (ಫೆ.25): ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಟಾರ್ಗೆಟ್ ತಲುಪಲು ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪಣತೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆ ನೀಡಿದರು. ಇಲ್ಲಿಯ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಆರಂಭಿಸಲಾದ ಧಾರವಾಡ ಲೋಕಸಭಾ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಧಾನಿ ಮೋದಿ ಅವರು ಪ್ರತಿ ಬೂತ್‌ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್ ನೀಡಿದ್ದಾರೆ.
ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಇದನ್ನು ಸಾಕಾರಗೊಳಿಸಲು ಅವಿರತವಾಗಿ ಶ್ರಮಿಸಬೇಕು ಎಂದರು. 2024 ಚುನಾವಣೆಯಲ್ಲಿ ತಾವು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಿದ್ದೇನೆ. ಇದನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸುತ್ತೇನೆ. ಈ ವರೆಗೂ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ವಿಶ್ವಾಸಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ. ಇದೇ ವಿಶ್ವಾಸ, ನಂಬಿಕೆಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಈಗಾಗಲೇ ಕ್ಷೇತ್ರದ ಜನರು ನೀಡಿದ ಅಧಿಕಾರದಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ವಿಧಾನಸಭೆ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ತೆರಿಗೆ ಹಣ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕುರಿಸುವ ಕೆಲಸ ಮಾಡುತ್ತಿದೆ.
ಕುವೆಂಪುಗೆ ಕಾಂಗ್ರೆಸ್ ಸರ್ಕಾರ ಅವಮಾನ ಮಾಡಿದೆ: ಪ್ರಲ್ಹಾದ್ ಜೋಶಿ
ಆ ಮೂಲಕ ಜನರ ದಿಕ್ಕು ತಪ್ಪಿಸಲು ರಾಜ್ಯ ಮತ್ತು ಕೇಂದ್ರದ ನಡುವಿನ ಚುನಾವಣೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ದೂರಿದರು. ರಾಜ್ಯ ಸರಕಾರ ಅಧಿಕಾರಿಗಳ ಮೇಲಿನ ಹಿಡಿತ ಕಳೆದುಕೊಂಡಿದೆ. ಇದರಿಂದ ಟ್ಯಾಕ್ಸ್ ಕಲೆಕ್ಷನ್ ಪೂರ್ಣ ಪ್ರಮಾಣದಲ್ಲಿ ಆಗುತ್ತಿಲ್ಲ. ಈ ಮೊದಲು ರಾಜ್ಯದಿಂದ ಸಂಗ್ರಹಗೊಂಡ ತೆರಿಗೆ ಹಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ರಾಜ್ಯದ ಅಭಿವೃದ್ಧಿಗೆ ವಿನಿಯೋಗಿಸಿದೆ. ಆದರೂ ಕೇಂದ್ರದತ್ತ ಬೊಟ್ಟುಮಾಡುವುದನ್ನು ಮಾತ್ರ ಬಿಟ್ಟಿಲ್ಲ. ದೇಶದ ಸಾಲ ₹6 ಲಕ್ಷ ಕೋಟಿ ಇದ್ದರೆ, ರಾಜ್ಯದ ಸಾಲ ₹1.90 ಲಕ್ಷ ಇದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿಗೆ ತಿಳಿವಳಿಕೆ ಬರೋದಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವಲ್ಲಿ ಪ್ರಹ್ಲಾದ ಜೋಶಿ ಪಾತ್ರ ಗಣನೀಯವಾಗಿದೆ. ಈ ಬಾರಿ ಚುನಾವಣೆಯಲ್ಲಿ ಜೋಶಿ ಅವರು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು. ಶಾಸಕ ಎಂ.ಆರ್. ಪಾಟೀಲ, ಹು-ಧಾ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ಮುಖಂಡರಾದ ಎಂ. ನಾಗರಾಜ, ಲಿಂಗರಾಜ ಪಾಟೀಲ, ಮಹೇಂದ್ರ ಕೌತಾಳ, ಬಸವರಾಜ ಕುಂದಗೋಳಮಠ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಇತರರು ಇದ್ದರು.