ಬಿಟ್ಟಿ ಭಾಗ್ಯದ ಮೂಲಕ ಜನತೆಯನ್ನು ವಂಚಿಸಿದ ಕಾಂಗ್ರೆಸ್‌ ಸರ್ಕಾರ: ಸಚಿವ ರಾಜೀವ್‌ ಚಂದ್ರಶೇಖರ್‌

Published : Jun 12, 2023, 07:23 AM IST
ಬಿಟ್ಟಿ ಭಾಗ್ಯದ ಮೂಲಕ ಜನತೆಯನ್ನು ವಂಚಿಸಿದ ಕಾಂಗ್ರೆಸ್‌ ಸರ್ಕಾರ: ಸಚಿವ ರಾಜೀವ್‌ ಚಂದ್ರಶೇಖರ್‌

ಸಾರಾಂಶ

ಕಾಂಗ್ರೆಸ್‌ ಬಿಟ್ಟಿಭಾಗ್ಯ ಯೋಜನೆಗಳ ಮೂಲಕ ಕರ್ನಾಟಕದ ಜನತೆಯನ್ನು ವಂಚಿಸಿದೆ. ಇದು ಧೀರ್ಘಕಾಲ ಉಳಿಯುವುದಿಲ್ಲ ಎಂದು ಕೇಂದ್ರ ಕೌಶಲ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ರಾಜೀವ್‌ ಚಂದ್ರಶೇಖರ್‌ ಭವಿಷ್ಯ ನುಡಿದಿದ್ದಾರೆ.

ಬೊಮ್ಮನಹಳ್ಳಿ (ಜೂ.12): ಕಾಂಗ್ರೆಸ್‌ ಬಿಟ್ಟಿಭಾಗ್ಯ ಯೋಜನೆಗಳ ಮೂಲಕ ಕರ್ನಾಟಕದ ಜನತೆಯನ್ನು ವಂಚಿಸಿದೆ. ಇದು ಧೀರ್ಘಕಾಲ ಉಳಿಯುವುದಿಲ್ಲ ಎಂದು ಕೇಂದ್ರ ಕೌಶಲ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ರಾಜೀವ್‌ ಚಂದ್ರಶೇಖರ್‌ ಭವಿಷ್ಯ ನುಡಿದಿದ್ದಾರೆ. ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್‌ ರೆಡ್ಡಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಂವಾದ, ಉಪಹಾರ ಕೂಟ ಹಾಗೂ ಸಂಘಟನಾತ್ಮಕ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 

ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು, ಮಾತು ತಪ್ಪಿದ ಕಾಂಗ್ರೆಸ್‌ ಎಂಬುದಾಗಿ ಪ್ರತಿಭಟನೆ ನಡೆಸಿ ಜನರನ್ನು ಜಾಗೃತಗೊಳಿಸಬೇಕು. ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡಿಸುವ ಮೂಲ ಬಿಜೆಪಿಯ ಕಾರ್ಯಕರ್ತರು ಬಲಿಷ್ಠವಾದ ಸಂಘಟನಾತ್ಮಕ ಹೋರಾಟಕ್ಕೆ ಮುಂದಾಗಿ ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಮಾತನಾಡಿ, ಕಾಂಗ್ರೆಸ್‌ನವರು 200 ಯೂನಿಟ್‌ ಕರೆಂಟ್‌ ಉಚಿತ ಎಂದು ಹೇಳಿ ಕರೆಂಟ್‌ ಬಿಲ್ಲಿನ ದರ ಏರಿಕೆ ಮಾಡಿ ಜನತೆಗೆ ಕರೆಂಟ್‌ ಶಾಕ್‌ ಕೊಟ್ಟಿದ್ದಾರೆ. ಐದು ಯೋಜನೆಗಳು ಫ್ರೀ ಅಂತ ಹೇಳಿ ಜನರ ಮೂಗಿಗೆ ತುಪ್ಪ ಸವರಿ ಗಿಮಿಕ್‌ ಮಾಡುತ್ತಿದ್ದಾರೆ. ಈ ಸರ್ಕಾರ ಗ್ಯಾರಂಟಿಯೇ ಇಲ್ಲ ಎಂದರು.

ಯಾರಲ್ಲಿ... ಫ್ರೀ ಟಿಕೆಟ್‌ ಟಿಕೆಟ್‌: ರಾಜ್ಯಾದ್ಯಂತ ಏಕಕಾಲಕ್ಕೆ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗೂ ಗೋಕುಲ್‌ ಗ್ರೂಪ್‌ ಮಾಲಿಕ ನ್ಯಾನಪನಹಳ್ಳಿ ಮಂಜುನಾಥ್‌, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ರವಿ, ಮಾಜಿ ಬಿಬಿಎಂಪಿ ಸದಸ್ಯ ಗುರುಮೂರ್ತಿ ರೆಡ್ಡಿ, ಜಗರಗನಹಳ್ಳಿ ಎ.ಟಿ.ಲೋಕೇಶ್‌ ಗೌಡ, ಮುನಿರಾಜ್‌ ಗೌಡ, ಅಗರ ಕೃಷ್ಣಪ್ಪ, ಬೆಂಗಳೂರು ಮಹಿಳಾ ಮೋರ್ಚಾದ ಮುಖಂಡರಾದ ಜಯಲಕ್ಷ್ಮೇಗೌಡ, ರಾಣಿಶ್ರೀ ನಿವಾಸ್‌ ರೆಡ್ಡಿ, ಸಿಂಗಸಂದ್ರ ವಾರ್ಡ್‌ ಅಧ್ಯಕ್ಷ ಪ್ರತೀಶ್‌ ರೆಡ್ಡಿ, ಯುವ ಮುಖಂಡ ಹೊಂಗಸಂದ್ರ ಸೋಮಶೇಖರ್‌, ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಡಿಜಿಟಲ್‌ ಪೌರರ ರಕ್ಷಣೆಗಾಗಿ ಎಐಗೆ ಕಡಿವಾಣ: 85 ಕೋಟಿಯಷ್ಟಿರುವ ದೇಶದ ಇಂಟರ್ನೆಟ್‌ ಬಳಕೆದಾರರ ಹಿತ ರಕ್ಷಣೆಯ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (ಎಐ)ಗೆ ಕಡಿವಾಣ ಹಾಕಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 9 ವರ್ಷದಲ್ಲಿ ದೇಶದಲ್ಲಿ ಡಿಜಿಟಲೀಕರಣದ ಪ್ರಗತಿ ಬಗ್ಗೆ ಇಲ್ಲಿ ಮಾಹಿತಿ ಸಚಿವ ರಾಜೀವ್‌ ಚಂದ್ರಶೇಖರ್‌, ‘ಉಪದ್ರವಕಾರಿ ಮತ್ತು ಅಪರಾಧೀಕರಣವು, ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್‌ನಲ್ಲಿ ವ್ಯಾಪಕವಾಗಿದೆ. 

1ನೇ ಗ್ಯಾರಂಟಿ ಜಾರಿ, ನುಡಿದಂತೆ ನಡೆದಿದ್ದೇವೆ: ಸಚಿವ ಪ್ರಿಯಾಂಕ್‌ ಖರ್ಗೆ

ದೇಶದ ಹಾಲಿ ಇಂಟರ್ನೆಟ್‌ ಬಳಕೆದಾರರ ಸಂಖ್ಯೆ 85 ಕೋಟಿ ತಲುಪಿರುವಾಗ, 2025ರ ವೇಳೆಗೆ 120 ಕೋಟಿ ತಲುಪುವ ನಿರೀಕ್ಷೆ ಇರುವ ಹೊತ್ತಿನಲ್ಲಿ, ಡಿಜಿಟಲ್‌ ಪೌರರಿಗೆ ಹಾನಿ ಉಂಟು ಮಾಡುವ ಯಾವುದೇ ಬೆಳವಣಿಗೆಯನ್ನು ನಾವು ಸಹಿಸುವುದಿಲ್ಲ. ಇವುಗಳಿಗೆ ಕಡಿವಾಣ ಹಾಕಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳ ವಿಷಯವಾದರೂ, ಅವುಗಳ ಸಹಯೋಗದಲ್ಲಿ ಕೇಂದ್ರ ಸರ್ಕಾರ ಕೈಜೋಡಿಸಿ ನಾಗರಿಕರ ಹಿತರಕ್ಷಣೆಗೆ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ