
ನವದೆಹಲಿ(ಡಿ.23): ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ಐಷಾರಾಮಿ ವಿಮಾನಯಾನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಐಟಿ ಸಚಿವಾಲಯದ ರಾಜ್ಯ ಖಾತೆ ಸಚಿವ ರಾಜೀವ್ ಚಂದ್ರಶೇಖರ್, ‘ಅಧಿಕಾರಕ್ಕಾಗಿ ಹಾತೊರೆಯುತ್ತಿರುವ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳನ್ನು ಸ್ವಂತ ಎಟಿಎಂ ಮಾಡು, ಜನರ ಹಣದಲ್ಲಿ ಮೋಜು ಮಾಡುತ್ತಿದೆ’ ಎಂದು ಕಿಡಿಕಾರಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಅಧಿಕಾರಕ್ಕಾಗಿ ಹಾತೊರೆಯುತ್ತಿರುವ ಕಾಂಗ್ರೆಸ್, ರಾಜ್ಯಗಳನ್ನು ತನ್ನ ಸ್ವಂತ ಎಟಿಎಂ ಮಾಡಿಕೊಳ್ಳುತ್ತಿದೆ. ಸಾರ್ವಜನಿಕ ಹಣವನ್ನು ತಮ್ಮ ಜೀವನಶೈಲಿಗಾಗಿ ಲೂಟಿ ಮಾಡುತ್ತಿದೆ. ಯುದ್ಧವಿಮಾನಗಳನ್ನು ಮೇಲ್ದರ್ಜೆಗೇರಿಸಲು ಹಣವಿಲ್ಲದ ಸಮಯದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಯುಪಿಎ ಸರ್ಕಾರ ಇದ್ದಾಗ ವಿಐಪಿ ಹೆಲಿಕಾಪ್ಟರ್‌ಗಳಿಗೆ ಹಣ ಖರ್ಚು ಮಾಡಿದ್ದರು. ಸೋನಿಯಾ ಅವರೇ ಹೀಗೆ ಮಾಡಿರುವಾಗಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಲು ಸಿದ್ದರಾಮಯ್ಯ, ಕರ್ನಾಟಕ ಸರ್ಕಾರದ ಹಣ ಬಳಸದೇ ಇರುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.
ಮಸ್ಕ್,ಆಲ್ಟ್‌ಮ್ಯಾನ್ ಜೊತಗೆ ಸ್ಪರ್ಧೆಗಲ್ಲ, ದಿನನಿತ್ಯ ಜೀವನಕ್ಕೆ AI ಬಳಕೆ, ರಾಜೀವ್ ಚಂದ್ರಶೇಖರ್!
ಅಲ್ಲದೇ ರಾಹುಲ್ ಅವರ ಕಾಂಗ್ರೆಸ್ ಗ್ಯಾರಂಟಿ ಎಂದರೆ ಅದು ಲೂಟಿ ಮತ್ತು ಭ್ರಷ್ಟಾಚಾರ ಎಂದು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.