ನೀವು ಅಧಿಕಾರಕ್ಕೆ ಬಂದಾಗಲೆಲ್ಲಾ ಅಲ್ಪಸಂಖ್ಯಾತರನ್ನು ಓಲೈಸುವ, ಎತ್ತಿಕಟ್ಟುವ ಕೆಲಸವನ್ನು ನಿರಂತರ ವಾಗಿ ಮಾಡ್ತಾ ಬಂದ್ರಿ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಚಿಕ್ಕಮಗಳೂರು (ಡಿ.25): ನೀವು ಅಧಿಕಾರಕ್ಕೆ ಬಂದಾಗಲೆಲ್ಲಾ ಅಲ್ಪಸಂಖ್ಯಾತರನ್ನು ಓಲೈಸುವ, ಎತ್ತಿಕಟ್ಟುವ ಕೆಲಸವನ್ನು ನಿರಂತರ ವಾಗಿ ಮಾಡ್ತಾ ಬಂದ್ರಿ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಭಾನುವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಆಡಳಿತದಲ್ಲಿ 2013 ರಲ್ಲಿ ಇಲ್ಲದ ಟಿಪ್ಪು ಜಯಂತಿ ತಂದು ಹಿಂದೂ ಮತ್ತು ಮುಸ್ಲಿಂ ಹೊಡೆದಾಡುವ ರೀತಿ ಮಾಡಿದ್ರಿ, ಕುಟ್ಟಪ್ಪ ಅವರ ಸಾವು ಕೂಡ ಆಯ್ತು, ಇಂದು ಶಾಂತವಾಗಿರುವ ಹಿಜಾಬ್‌ನ್ನು ಮತ್ತೆ ಮುನ್ನೆಲೆಗೆ ತರುವ ಕೆಲಸ ಮಾಡಿದಿರಿ ಎಂದರು.
ಶಾಲಾ- ಕಾಲೇಜುಗಳಲ್ಲಿ ಯೂನಿಫಾರಂ ಇದೆ, ಅದೇ ಯೂನಿಫಾರಂನ್ನು ಕಿತ್ತು ಹಾಕುತ್ತಿದ್ದೀರಾ, ಹಿಜಾಬ್ ಹಾಕಿಕೊಂಡು ಬನ್ನಿ ಎನ್ನುತ್ತಿದ್ದೀರಾ ಎಂದ ಅವರು, ಈ ವಿಷಯದಲ್ಲಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು. ಲೋಕಸಭೆ ಚುನಾವಣೆ ಹತ್ತಿರಕ್ಕೆ ಬಂದಿದೆ. ಅಲ್ಪಸಂಖ್ಯಾತರ ವೋಟ್ ಬ್ಯಾಂಕ್‌ಗೆ ಹಿಜಾಬ್‌ನ್ನು ಮುನ್ನೆಲೆಗೆ ತರುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಕಳೆದ ಬಾರಿ ನಿಮ್ಮ ಮುಖವಾಡ ನೋಡಿದ್ದೇವೆ. ಅದು 2018ರಲ್ಲಿ ಕಳಚಿ ಬಿದ್ದಿದೆ ಎಂದರು. ಯಾವುದೇ ಅಭಿವೃದ್ಧಿಯಾಗಿಲ್ಲ, ನಿಮ್ಮ ವಿರುದ್ಧ ನಿಮ್ಮ ಶಾಸಕರು, ಸಚಿವರು ಬಂಡೆದ್ದಿದ್ದಾರೆ. ಅದನ್ನು ಮುಚ್ಚಿ ಹಾಕಲು ಮತ್ತೆ ಹಿಂದೂ ಮತ್ತು ಮುಸ್ಲಿಮರ ಒಡೆದಾಳುವ ನೀತಿ ಮಾಡುತ್ತಿದ್ದೀರಾ, ಇದನ್ನು ಬಿಡಿ, ಅಭಿವೃದ್ಧಿ ಕೆಲಸ ಮಾಡಿ, ಕ್ಷೇತ್ರಗಳಿಗೆ ದುಡ್ಡು ಕೊಡಿ ಎಂದು ಹೇಳಿದರು.
undefined
ಈ ಬಾರಿಯೂ ಚಿಕ್ಕಮಗಳೂರಿನಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಶೋಭಾ ಕರಂದ್ಲಾಜೆ
ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪ್ರಧಾನಿ ನರೇಂದ್ರ ಮೋದಿ 2047ರ ವೇಳೆ ಭಾರತವನ್ನು ಜಗತ್ತಿನ ದೊಡ್ಡಣ್ಣನಾಗಿ ಮಾಡುವ ಸಂಕಲ್ಪ ಹೊಂದಿದ್ದಾರೆ.
ಅದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಿರ್ವಹಿಸಿದರೆ 2047ರಲ್ಲಿ ಭಾರತ ವಿಕಸಿತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ತೊನ್ಸೆ ಪಂಚಾಯಿತಿ ಅಧ್ಯಕ್ಷೆ ಕುಸುಮ, ಉಪಾಧ್ಯಕ್ಷ ಅರುಣ್, ಕೆನರಾ ಬ್ಯಾಂಕಿನ ಪ್ರಾದೇಶಿಕ ಪ್ರಬಂಧಕಿ ಶೀಲಾ ಸಾಜನ್, ದೂರದರ್ಶನದ ಉಪನಿರ್ದೇಶಕ (ಸುದ್ದಿ) ಯಶವಂತ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ.ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಯುನಿಫಾರಂಗೆ ಹಿಜಾಬ್ ಜೋಡಿಸುತ್ತಾರೋ ಅಥವಾ ಕಡ್ಡಾಯ ಅನ್ನೋದು ತಗೀತಾರೋ?: ಸಿ.ಟಿ.ರವಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಫಲಾನುಭವಿಗಳೊಂದಿಗೆ ನಡೆಸಿದ ಸಂವಾದದ ನೇರಪ್ರಸಾರವನ್ನು ಅತಿಥಿಗಳು ಮತ್ತು ಸಾರ್ವಜನಿಕರು ವೀಕ್ಷಿಸಿದರು. ನಂತರ ವಿಕಸಿತ ಭಾರತ ಸಂಕಲ್ಪ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ಸ್ಥಳದಲ್ಲಿಯೇ ನೀಡಲಾಯಿತು. ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ನವರು ಕೀಟನಾಶಕ ಹಾಗೂ ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆಗೆ ಡ್ರೋನ್ ಬಳಕೆಯ ಕುರಿತ ಪ್ರಾತ್ಯಕ್ಷಿಕೆ ನಡೆಯಿತು.