ರಾಜಕೀಯ ವ್ಯಭಿಚಾರಕ್ಕೆ ಸೋಮಶೇಖರ್ ಸಾಕ್ಷಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

By Govindaraj S  |  First Published Feb 29, 2024, 1:30 AM IST

ರಾಜ್ಯಸಭಾ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ. ರಾಜಕೀಯದಲ್ಲಿ ಯಾವ ರೀತಿಯ ವ್ಯಭಿಚಾರ ಆಗಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 
 


ಉಡುಪಿ (ಫೆ.29): ರಾಜ್ಯಸಭಾ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ. ರಾಜಕೀಯದಲ್ಲಿ ಯಾವ ರೀತಿಯ ವ್ಯಭಿಚಾರ ಆಗಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಮತದಾನ ಮಾಡಿದ ಸೋಮಶೇಖರ್ ಮೇಲೆ ಪಕ್ಷ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತದೆ, ಆದರೆ ಮತದಾರರು ಮಾತ್ರ ಅವರ ಮೇಲೆ ಸರಿಯಾದ ಕ್ರಮ ಕೈಗೊಳ್ಳುತ್ತಾರೆ ಎಂದವರು ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಾಗ ಅವರಿಗೆ ಮಂತ್ರಿ ಮಾಡಿ ಒಳ್ಳೆಯ ಖಾತೆಗಳನ್ನೇ ಅವರಿಗೆ ನೀಡಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಅಧಿಕಾರಕ್ಕೆ ಮತ್ತೆ ಆ ಕಡೆ ತಿರುಗುವ ಅವರ ಮಾನಸಿಕತೆಗೆ ನನ್ನ ಧಿಕ್ಕಾರ ಇದೆ ಎಂದರು. ಅಧಿಕಾರ ಇಲ್ಲದಿದ್ದಾಗ ಬರುವುದು, ಅಧಿಕಾರ ಹೋದಾಗ ವಾಪಾಸ್ ಹೋಗುವುದು, ಇದು ಅವರಿಗೆ ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ. ಅವರು ಬಿಜೆಪಿ ಸೇರಿದಾಗ ಯಶವಂತಪುರದಲ್ಲಿ ನಾನೇ ನಿಂತು ಚುನಾವಣೆ ಮಾಡಿದ್ದೆ, ಕ್ಷೇತ್ರದಲ್ಲಿ ಸೋಮಶೇಖರ್ ಬಗ್ಗೆ ವಿರೋಧವಿದ್ದರೂ ಕಾರ್ಯಕರ್ತರ ಮನವೊಲಿಸಿದ್ದೆವು. ಆದರೆ ಈಗ ಸೋಮಶೇಖರ್ ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ ಎಂದವರು ಬೇಸರಿಸಿದರು.

Tap to resize

Latest Videos

undefined

ಕಾಂಗ್ರೆಸ್ ಸರ್ಕಾರ ಪಾಕಿಸ್ತಾನ ಪರವಾಗಿದ್ಯಾ?: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಕ್ಷೇತ್ರದಲ್ಲಿ ಶೋಭಾ ಮಿಂಚಿನ ಸಂಚಾರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದೆಂದು ಸ್ವಪಕ್ಷೀಯರಿಂದಲೇ ಅಭಿಯಾನ ನಡೆಯತ್ತಿದ್ದರೆ, ಇನ್ನೊಂದೆಡೆ ಸಚಿವೆ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿ ಹಂಗರವಳ್ಳಿಯಲ್ಲಿ ಗ್ರಾಮ ವಾಸ್ತವ್ಯವನ್ನೂ ನಡೆಸಿದರು. ಚಿಕ್ಕಮಗಳೂರು ನಗರಸಭೆಯ ಬಜೆಟ್ ಸಭೆಯಲ್ಲಿ ಹಾಜರಿದ್ದು, ಬಳಿಕ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಕಡೂರು-ಚಿಕ್ಕಮಗಳೂರು ರೈಲ್ವೆ ಮೇಲ್ದರ್ಜೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು

ಕುಮಾರಸ್ವಾಮಿ ರೀಲ್ ಬಿಡ್ತಾವ್ನೆ: ಏಕವಚನದಲ್ಲಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ನಂತರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿ ಪ್ರಕರಣವೊಂದರಲ್ಲಿ ವಿಚಾರಾಣಾಧೀನ ಕೈದಿಯಾಗಿರುವ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಭೇಟಿ ಮಾಡಿ ಜೈಲಿನೊಳಗೆ ಇರುವ ಮೂಲ ಸವಲತ್ತುಗಳನ್ನು ಪರಿಶೀಲಿಸಿದರು. ನಂತರ ಆಲ್ದೂರು ಮಂಡಲದ ಕೂದುವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಯುವ ಜಾಗೃತಿ ಕುರಿತ ಯುವ ಚೌಪಾಲ್ (ಯುವ ಸಂವಾದ) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ ವೇಳೆಗೆ ತಾಲೂಕಿನ ಆಲ್ದೂರು ಸಮೀಪದ ಹಂಗರ ಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ (ಗಾಂವ್ ಚಲೋ ಅಭಿಯಾನ) ಮಾಡಿದರು. ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ನಡೆದ ಕಾಳಗದ ಹಬ್ಬದಲ್ಲಿ ಪಾಲ್ಗೊಂಡಿದ್ದರು. ನೂರಾರು ಜನರ ನಡುವೆ ಶೋಭಾ ಕರಂದ್ಲಾಜೆಯವರು ಉತ್ಸವದ ಮೆರವಣಿಗೆಯಲ್ಲಿ ಸಾಗಿದರು.

click me!