ಉಳುವವನಿಗೆ ಹೊಲ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್, ಮೀಸಲಾತಿ ನಿಯಮಗಳ ಜಾರಿ ಮೂಲಕ ದೇವರಾಜ ಅರಸು ಅವರು ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಉಡುಪಿ (ಆ.21): ಉಳುವವನಿಗೆ ಹೊಲ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್, ಮೀಸಲಾತಿ ನಿಯಮಗಳ ಜಾರಿ ಮೂಲಕ ದೇವರಾಜ ಅರಸು ಅವರು ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ, ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅವರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ, ಕರಾವಳಿಯಲ್ಲಿ ಇಂದಿಗೂ ಹೆಚ್ಚಿನ ಸಂಖ್ಯೆಯ ಹಿಂದುಳಿದ ವರ್ಗದವರು ಆರ್ಥಿಕವಾಗಿ ಹಿಂದುಳಿದಿದ್ದು, ಅವರೆಲ್ಲರನ್ನೂ ಒಗ್ಗೂಡಿಸಿ ಶಕ್ತಿ ತುಂಬಬೇಕಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಟೆಲ್‌ಗಳ ನಿರ್ಮಾಣ ನಡೆಯಬೇಕು ಮತ್ತು ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿಯ ಶಾಲೆಯ ಪುನಾರಾರಂಭ ಆಗಬೇಕಿದೆ ಎಂದರು. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ರಾಘವೇಂದ್ರ ಉಪನ್ಯಾಸ ನೀಡಿದರು.
undefined
ಕಾಂಗ್ರೆಸ್‌ಗೆ ಬರುತ್ತೇನೆ ಎಂದು ಶಿವರಾಮ ಹೆಬ್ಬಾರ ಹೇಳಿಲ್ಲ: ಶಾಸಕ ಸತೀಶ್ ಸೈಲ್
ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭೆ ಪೌರಾಯುಕ್ತ ರಾಯಪ್ಪ, ಭಾರತ ಸೇವಾ ದಳದ ಕೇಂದ್ರ ಸಮಿತಿ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಸಾಧನೆ ಮಾಡಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಭಿನಂದನೆ, ದೇವರಾಜ ಅರಸು ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಹಾಗೂ ಹಿಂದುಳಿದ ವರ್ಗದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ನಡೆಯಿತು.
ಎಲ್ಲರೂ ಸೇರಿ ಬಿಜೆಪಿ ಮತ್ತು ದೇಶವನ್ನು ಕಟ್ಟಬೇಕಿದೆ: ಯಾರೆಲ್ಲಾ ಪಕ್ಷ ಬಿಟ್ಟು ಹೋಗಿದ್ದಾರೆ ಅವರೆಲ್ಲರೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಲುವಾಗಿ ವಾಪಸ್ ಬರಬೇಕೆಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅವರಿಗೂ ಇದು ಅನ್ವಯಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೋದಿ ಸಲುವಾಗಿ, ದೇಶ ಹಾಗೂ ಮುಂದಿನ ಪೀಳಿಗೆ ಸಲುವಾಗಿ ಎಲ್ಲರೂ ವಾಪಸ್ ಬರಬೇಕಿದೆ. ವಿಶ್ವದಲ್ಲಿ ಶಾಂತಿ ನೆಲೆಸಲು ಎಲ್ಲರೂ ಸೇರಿ ಬಿಜೆಪಿ ಮತ್ತು ದೇಶವನ್ನು ಕಟ್ಟಬೇಕಿದೆ. ಅದಕ್ಕಾಗಿ ಯಾರೇ ಪಕ್ಷ ಬಿಟ್ಟು ಹೋಗಿದ್ದರೂ ಅವರು ಮರಳಿ ಬರಲು ಸ್ವಾಗತವಿದೆ ಎಂದರು.
ಪುನೀತ್ ಅಭಿಮಾನಿಗಳಲ್ಲಿ ನಾನು ದೊಡ್ಡ ಅಭಿಮಾನಿ: ರಾಜ್ ಬಿ. ಶೆಟ್ಟಿ
ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬೇರೆ ಬೇರೆ ಕಾರಣಕ್ಕೆ ನಾವು ಸೋತಿದ್ದೇವೆ. ಮತ್ತೊಮ್ಮೆ ಬಿಜೆಪಿಯ ನ್ನು ಗಟ್ಟಿಯಾಗಿ ಕಟ್ಟಬೇಕಿದೆ. ನಮ್ಮ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಅವರು ಪಕ್ಷ ಸೇರಿದ್ದರು. ಅವರು ಬಿಜೆಪಿಯಲ್ಲೇ ಮುಂದುವರಿಯುತ್ತಾರೆ ಎನ್ನುವ ವಿಶ್ವಾಸ ಇದೆ. ಅಧಿಕಾರ ಇದ್ದಾಗ ಬಂದರು. ಅಧಿಕಾರ ಇಲ್ಲದಾಗ ಹೋದರು ಎನ್ನುವ ಕೆಟ್ಟಹೆಸರನ್ನು ಇವರಾರೂ ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದರು.