ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಕೊಡಿ: ಕೇಂದ್ರ ಸಚಿವ ಸೋಮಣ್ಣ

By Kannadaprabha News  |  First Published Jul 20, 2024, 2:24 PM IST

ಮುಡಾದಲ್ಲಿ ಪಡೆದಿರುವ 14 ಸೈಟ್‌ಗಳನ್ನು ವಾಪಾಸ್ ಕೊಡಲಿ, ಹಗರಣದ ತನಿಖೆಯನ್ನು ಸಿಬಿಐಗೆ ಕೊಡಿ. ಇ.ಡಿ, ಸಿಬಿಐ ಕಾಂಗ್ರೆಸ್ ಅವಧಿಯಲ್ಲೂ ಇತ್ತು, ಈಗಲೂ ಇದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವ್ಯವಸ್ಥೆಯನ್ನು ಪಾರದರ್ಶಕ ಮಾಡಿದೆ. 


ಚಾಮರಾಜನಗರ (ಜು.20): ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆಂದು ಕೆಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ವಿಭಿನ್ನವಾಗಿ ಗುರುತಿಸಿಕೊಂಡಿದ್ದರು. ಮೊದಲ ಅವಧಿಯಲ್ಲಿ ಈ ರೀತಿ ಆರೋಪಗಳು ಅವರ ಮೇಲೆ ಬಂದಿರಲಿಲ್ಲ. ಈಗ ಅವರ ಸ್ಥಿತಿ ಸಹವಾಸದಿಂದ ಸನ್ಯಾಸಿ ಕೆಟ್ಟ ಎಂಬಂತಾಗಿದೆ ಎಂದು ಕಿಡಿಕಾರಿದರು. ಹಗರಣಗಳಿಂದ ಅವರಿಗೆ ಮುಜುಗರ ಉಂಟಾಗಿದೆ. ಅದಕ್ಕೆ ವಿಚಲಿತರಾಗಿ ಕೆಸರು ಎರಚುತ್ತಿದ್ದಾರೆ. 

ನಮ್ಮ ಸರ್ಕಾರದ ಅವಧಿಯ ಆರೋಪಗಳನ್ನು ತನಿಖೆಗೆ ಕೊಡಲಿ ಯಾರಾದರೂ ಅವರಿಗೆ ಬೇಡ ಎಂದಿದ್ದೇವಾ. ಅವರ ಮೇಲೆ ಬಂದಿರುವ ಆರೋಪಕ್ಕೂ ಸಿಬಿಐ ತನಿಖೆಗೆ ಕೊಡಲಿ ಎಂದು ಟಾಂಗ್ ನೀಡಿದರು. ಮುಡಾದಲ್ಲಿ ಪಡೆದಿರುವ 14 ಸೈಟ್‌ಗಳನ್ನು ವಾಪಾಸ್ ಕೊಡಲಿ, ಹಗರಣದ ತನಿಖೆಯನ್ನು ಸಿಬಿಐಗೆ ಕೊಡಿ. ಇ.ಡಿ, ಸಿಬಿಐ ಕಾಂಗ್ರೆಸ್ ಅವಧಿಯಲ್ಲೂ ಇತ್ತು, ಈಗಲೂ ಇದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವ್ಯವಸ್ಥೆಯನ್ನು ಪಾರದರ್ಶಕ ಮಾಡಿದೆ. ಮೊಸರಲ್ಲಿ ಕಲ್ಲು ಹುಡುಕದೇ, ಕೆಸರನ್ನು ಬೇರೆಯವರಿಗೆ ಎರಚಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Tap to resize

Latest Videos

undefined

ಗ್ರಾಮೀಣ ರಸ್ತೆ ಅಭಿವೃದ್ಧಿಗೆ 'ಪ್ರಗತಿಪಥ' ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ಯಾರಾದರೂ ಕೇಳಿದ್ರಾ ಗ್ಯಾರಂಟಿ ಕೊಡಿ ಎಂದು, ಗ್ಯಾರಂಟಿಯಿಂದಾಗಿ ಖಜಾನೆ ಖಾಲಿಯಾಗಿದೆ. ಮೊದಲ ಅವಧಿಯಲ್ಲಿ ವಿಭಿನ್ನ ಸಿಎಂ ಎನಿಸಿಕೊಂಡಿದ್ದೀರಿ, ಈಗಲೂ ಅದೇ ರೀತಿ ಇರಿ. ಸೋಮಣ್ಣನನ್ನು ಮುಗಿಸಿಬಿಟ್ಟರು ಎನ್ನುತ್ತಿದ್ದರು. ಆದರೆ, ಮಲೆ ಮಾದಪ್ಪ ನನ್ನ ಕೈ ಬಿಡಲಿಲ್ಲ, ನಾಯಕರು ನನ್ನ ಕೈ ಬಿಡಲಿಲ್ಲ, ಕೆಲಸಗಾರನಿಗೆ ಭಗವಂತನ ಆಶೀರ್ವಾದ ಯಾವಾಗಲೂ ಇರಲಿದೆ ಎಂದರು.

ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೆ: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮುಂದಿನ ಎರಡು ತಿಂಗಳೊಳಗೆ ನೀಲನಕಾಶೆ ತಯಾರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದರು.

Valimiki Scam: ಸಿದ್ದರಾಮಯ್ಯ ರಾಜೀನಾಮೆ ಸನ್ನಿಹಿತ: ವಿಜಯೇಂದ್ರ ಭವಿಷ್ಯ

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ಆಧುನೀಕರಣ ಮಾಡುವ ಬಗ್ಗೆ ಕಳೆದ ಹಲವು ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಈಗ ಒಂದು ಹಂತಕ್ಕೆ ಬಂದಿದ್ದು ಹಣ ಮೀಸಲಿರಿಸಲಾಗಿದೆ. ಶೀಘ್ರ ಅದರ ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಪಾಲ್ಘಾಟ್‌, ಕೊಂಕಣ ಹಾಗೂ ನೈಋತ್ಯ ರೈಲು ವಿಭಾಗವೆಂಬ ಮೂರರ ಮಧ್ಯೆ ಮಂಗಳೂರು ಭಾಗದಲ್ಲಿ ಕೆಲಸಗಳು ಅಷ್ಟಾಗಿ ನಡೆದಿಲ್ಲ. ಅದಕ್ಕಾಗಿ ಮೂರೂ ವಿಭಾಗದ ಅಧಿಕಾರಿ ಪ್ರಮುಖರ ಜತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

click me!