ಬಸನಗೌಡ ಪಾಟೀಲ್ ಯತ್ನಾಳ್ ನಡೆಗೆ ಕೇಂದ್ರದ ನಾಯಕ ಫುಲ್ ಗರಂ

By Suvarna News  |  First Published Dec 25, 2020, 4:39 PM IST

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ಸದಾನಂದಗೌಡ ಕಿಡಿಕಾಡಿದ್ದಾರೆ.


ಬೆಂಗಳೂರು, (ಡಿ.25): ಯಾರು ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದರೆ ಮಾತ್ರ ಅದಕ್ಕೆ ನಿಜವಾದ ಅರ್ಥ ಹಾಗೂ ಗೌರವ ಸಿಗುತ್ತದೆ ಎಂದು ಸ್ವಪಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಹರಿಹಾಯ್ದಿದ್ದಾರೆ.

"

Tap to resize

Latest Videos

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಗರದಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ ಯಾರು? ಅವರೇನು ನಮ್ಮ ಪಕ್ಷದ ರಾಷ್ಟ್ರೀಯ ನಾಯಕ ಅಲ್ಲ, ರಾಜ್ಯ ಘಟಕದ ಯಾವುದೇ ಅಧ್ಯಕ್ಷನೂ ಅಲ್ಲ. ಅಥವಾ ಯಾವುದಾದರೂ ಒಂದು ಹೇಳುವ ಸ್ಥಾನದಲ್ಲೂ ಇಲ್ಲ. ಅವರೊಬ್ಬ ಸಾಮಾನ್ಯ ಶಾಸಕ ಅಷ್ಟೇ ಎಂದು ಗರಂ ಆಗಿ ಹೇಳಿದರು.

ಶಾ ರಾಜ್ಯ ಭೇಟಿಗೂ ಮುನ್ನವೇ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಯತ್ನಾಳ್

 ದಿನ ನಿತ್ಯ ಮಾಧ್ಯಮಕ್ಕೆ ಹಾಗೂ ಹೊರಗೆ ಮಾತಾಡೋದು ಅವರಿಗೆ ಶೋಭೆ ತರುವುದಿಲ್ಲ. ಅವರು ಏನಾದರೂ ಹೇಳೋದು ಇದ್ರೆ ರಾಷ್ಟ್ರೀಯ ನಾಯಕರು ಅಥವಾ ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಬೇಕು. ಆದರೆ ಎಲ್ಲೋ ಬಂದು ಬೀದಿಯಲ್ಲಿ ಮಾತನಾಡಿ ಅವರ ಭವಿಷ್ಯದ ಬಗ್ಗೆ ಒಳ್ಳೆಯ ಪರಿಣಾಮ ಬೀರುವುದಿಲ್ಲ ಎಂದು ಎಚ್ಚರಿಸಿದರು.

ಕೆಲವರನ್ನು ಅವರರವೇ ಅರ್ಥ ಮಾಡಿಕೊಳ್ಳಬೇಕು. ಕೆಲವರಿಗೆ ಕೆಲ ಸಂದರ್ಭ, ಸಮಯ ಬರುತ್ತದೆ. ತನ್ನ ಅಸ್ತಿತ್ವ ಉಳಿಸಿಕೊಳ್ಳೋದಕ್ಕೆ ಕೆಲವರು ಮಾತಾಡ್ತಾರೆ. ಇದು ನಿಜವಾಗಿಯೂ ಅವರಿಗೆ ಸರಿ ಇರೋದಿಲ್ಲ ಎಂದು ಸದಾನಂದಗೌಡ ಕಿಡಿ ಕಾರಿದರು.

click me!