ಪರಿಷತ್‌ಗೆ ಶೆಟ್ಟರ್‌ ಸೇರಿ ಮೂವರ ಅವಿರೋಧ ಆಯ್ಕೆ ಖಚಿತ

Published : Jun 21, 2023, 01:00 AM IST
ಪರಿಷತ್‌ಗೆ ಶೆಟ್ಟರ್‌ ಸೇರಿ ಮೂವರ ಅವಿರೋಧ ಆಯ್ಕೆ ಖಚಿತ

ಸಾರಾಂಶ

ನಾಮಪತ್ರ ಸಲ್ಲಿಸಲು ನಿನ್ನೆ(ಜೂನ್‌ 20) ಕಡೆಯ ದಿನ. ಹಾಗಾಗಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಾರಣ ಕಾಂಗ್ರೆಸ್‌ನ ಮೂರೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬೆಂಗಳೂರು(ಜೂ.21):  ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್‌ 30 ರಂದು ನಡೆಯಲಿರುವ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವ ಎನ್‌.ಎಸ್‌.ಬೋರಾಜ್‌ ಮತ್ತು ತಿಪ್ಪಣ್ಣಪ್ಪ ಕಮಕನೂರು ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ನಿನ್ನೆ(ಜೂನ್‌ 20) ಕಡೆಯ ದಿನ. ಹಾಗಾಗಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಾರಣ ಕಾಂಗ್ರೆಸ್‌ನ ಮೂರೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಇದೆಯಾ ? ಮಾಜಿ ಸಿಎಂ ಬೊಮ್ಮಾಯಿ, ಅಶೋಕ್ ಬಂಧನಕ್ಕೆ ಕೋಟ ಗರಂ

ಮಂಗಳವಾರ ಬೆಳಗ್ಗೆ ಮೊದಲು ಜಗದೀಶ್‌ ಶೆಟ್ಟರ್‌ ಅವರು ವಿಧಾನಸಭೆಯ ಕಾರ್ಯದರ್ಶಿ ಅವರ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ಬಳಿಕ ಎರಡನೇ ಅಭ್ಯರ್ಥಿಯಾಗಿ ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜ್‌ ಮತ್ತು ಮೂರನೇ ಅಭ್ಯರ್ಥಿಯಾಗಿ ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯೂ ಆದ ಎಂ.ಕೆ.ವಿಶಾಲಾಕ್ಷಿ ಅವರು ಮೂವರೂ ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸಿದರು. ಮೂವರ ನಾಮಪತ್ರ ಸಲ್ಲಿಕೆ ವೇಳೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ್‌, ಮಧು ಬಂಗಾರಪ್ಪ ಮತ್ತಿತರರು ಉಪಸ್ಥಿತರಿದ್ದರು.

ವಿಧಾನಸಭೆಯಿಂದ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದ ಬಾಬುರಾವ್‌ ಚಿಂಚನಸೂರು, ಆರ್‌.ಶಂಕರ್‌ ಹಾಗೂ ಲಕ್ಷ್ಮಣ ಸವದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಮೂರೂ ಸ್ಥಾನಗಳಿಗೆ ಹೊಸ ಸದಸ್ಯರ ಆಯ್ಕೆಗೆ ವಿಧಾನಸಭೆ ಸದಸ್ಯರು ಮೂರು ಪ್ರತ್ಯೇಕ ಮತಗಳನ್ನು ಚಲಾಯಿಸಲು ಅವಕಾಶವಿದೆ. ಹಾಗಾಗಿ ನಿಗದಿಯಂತೆ ಜೂ.30ರಂದು ಚುನಾವಣೆ ನಡೆದರೂ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಸಲೀಸು. ಆದರೆ, ಜೂನ್‌ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್‌ 23ರಂದು ಅಂತಿಮ ದಿನವಾಗಿದೆ. ಪ್ರತಿಪಕ್ಷಗಳಿಂದ ಯಾವುದೇ ಅಭ್ಯರ್ಥಿಗಳು ಕಣದಲ್ಲಿಲ್ಲದ ಕಾರಣ ಕಾಂಗ್ರೆಸ್‌ನ ಮೂರೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಚುನಾವಣಾ ದಿನಕ್ಕೂ ಮೊದಲೇ ಚುನಾವಣಾಧಿಕಾರಿಗಳು ಘೋಷಣೆ ಮಾಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಚಿವೆ ಹೆಬ್ಬಾಳಕರ ಹೇಳಿದ್ದಿಷ್ಟು

ಸ್ಥಾನಮಾನ ಕೇಳಿಲ್ಲ: ಶೆಟ್ಟರ್‌

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್‌ ಶೆಟ್ಟರ್‌ ಅವರು, ಖಾಲಿ ಇರುವ ಮೂರು ಸ್ಥಾನಾಗಳಿಗೆ ನಾವು ಮೂರು ಜನ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಮೂವರೂ ಗೆದ್ದು ಬರುತ್ತೇವೆ ಎಂದರು. ಅವಕಾಶ ಕಲ್ಪಿಸಿದ್ದಕ್ಕಾಗಿ, ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಣದೀಪ್‌ ಸಿಂಗ್‌ ಸುರ್ಜೀವಾಲ ಅವರಿಗೆ ಧನ್ಯವಾದಗಳು ಅರ್ಪಿಸುತ್ತೇನೆ. ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ ಮುಂದೆ ಲೋಕಾಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲೋಕೆ ಶ್ರಮ ಪಡುತ್ತೇವೆ. ನಾನು ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಕೇಳಿಲ್ಲ. ಮುಂದೆ ಸ್ಥಾನಮಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ತೆರವಾದ ಮೂರು ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ ನಾಮಪತ್ರ ಸಲ್ಲಿಸಿರುವ ಜಗದೀಶ್‌ ಶೆಟ್ಟರ್‌, ಎನ್‌.ಎಸ್‌.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ಈ ಮೂವರೂ ಅಭ್ಯರ್ಥಿಗಳು ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ