ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಬಿಜೆಪಿ ನಾಯಕಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಮುಜಾಫರ್ ನಗರ, (ಏ.07): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಪ್ರಿಯಂವದಾ ತೋಮರ್ ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನು ಬೆಂಬಲಿಸಿ ಪ್ರಿಯಂವದಾ ತೋಮರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಬೈ ಎಲೆಕ್ಷನ್ ನಡುವೆಯೇ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್ ಜಾರಕಿಹೊಳಿ ಸಹೋದರ
ರಾಜ್ಯದಲ್ಲಿನ ಪಂಚಾಯತ್ ಚುನಾವಣೆಗೆ ಮುನ್ನ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಆಘಾತವಾದಂತಾಗಿದೆ.
ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದು, ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಪ್ರತಿಭಟನೆಯ ಹೊರತಾಗಿಯೂ ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಬಿಜೆಪಿಯ "ರೈತ ವಿರೋಧಿ" ನೀತಿಯಿಂದಾಗಿ ತಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಹಾಗೂ ಬಿಜೆಪಿ ಉತ್ತರ ಪ್ರದೇಶದ ಮಹಿಳೆಯರನ್ನು ನಿರ್ಲಕ್ಷಿಸಿದೆ ಮತ್ತು ಅವರ ಆಶಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ತೋಮರ್ ಹೇಳಿದ್ದಾರೆ.