ಲೋಕಸಭಾ ಚುನಾವಣೆ ಸೋಲು ಬೆನ್ನಲ್ಲೇ ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಂಡಾಯ? ಸಿಎಂ ಯೋಗಿ ವಿರುದ್ಧ ಅಸಮಾಧಾನ ಸ್ಫೋಟ!

By Kannadaprabha News  |  First Published Jul 18, 2024, 5:03 AM IST

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ರಾಜ್ಯ ನಾಯಕತ್ವ ಬಂಡಾಯವೆದ್ದಿದೆ ಎಂಬ ವದಂತಿ ಹರಡಿದೆ. ಅದಕ್ಕೆ ಪುಷ್ಟಿ ನೀಡುವಂತೆ ಉಪ ಮುಖ್ಯಮಂತ್ರಿ ಕೇಶವಪ್ರಸಾದ್‌ ಮೌರ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಅವರು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.


ಲಖನೌ/ ನವದೆಹಲಿ (ಜು.18): ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ರಾಜ್ಯ ನಾಯಕತ್ವ ಬಂಡಾಯವೆದ್ದಿದೆ ಎಂಬ ವದಂತಿ ಹರಡಿದೆ. ಅದಕ್ಕೆ ಪುಷ್ಟಿ ನೀಡುವಂತೆ ಉಪ ಮುಖ್ಯಮಂತ್ರಿ ಕೇಶವಪ್ರಸಾದ್‌ ಮೌರ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಅವರು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಆದರೆ, ಪಕ್ಷದ ನಾಯಕತ್ವದ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಉತ್ತರ ಪ್ರದೇಶದ ಎಲ್ಲಾ ನಾಯಕರಿಗೂ ವರಿಷ್ಠರು ತಾಕೀತು ಮಾಡಿದ್ದು, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಶೀಘ್ರ ನಡೆಯಲಿರುವ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಮೇಲೆ ಗಮನ ಹರಿಸಿ ಎಂದೂ ತಿಳಿಸಿದೆ ಎಂದು ಮೂಲಗಳು ಹೇಳಿವೆ.

Tap to resize

Latest Videos

ಮೋದಿ ನನ್ನ ಶತ್ರುವಲ್ಲ, ನಾವು ಅವರ ಹಿತೈಷಿಗಳು' : ಬದರಿ ಶಂಕರಾಚಾರ್ಯ ಸ್ವಾಮೀಜಿ

ಆದರೂ, ಸದ್ಯದಲ್ಲೇ ನಡೆಯಲಿರುವ 10 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಳಿಕ ಉತ್ತರ ಪ್ರದೇಶದ ಬಿಜೆಪಿಯಲ್ಲಿ ‘ದೊಡ್ಡ ಬದಲಾವಣೆ’ ಆಗಲಿದೆ ಎಂದು ಹೇಳಲಾಗುತ್ತಿದೆ. ಪಕ್ಷ ಸಂಘಟನೆಯಲ್ಲಿ ಈ ಬದಲಾವಣೆ ಮಾಡಲು ಖುದ್ದು ಪ್ರಧಾನಿ ನ ರೇಂದ್ರ ಮೋದಿ ಬಯಸಿದ್ದಾರೆ ಎಂದು ವರದಿಗಳು ಹೇಳಿವೆ.

ಯೋಗಿಯಿಂದಾಗಿ ಲೋಕಸಭೆಯಲ್ಲಿ ಹಿನ್ನಡೆ:

ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಕೇವಲ 36 ಸ್ಥಾನಗಳನ್ನು ಗೆದ್ದಿತ್ತು. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 43 ಸ್ಥಾನಗಳನ್ನು ಗೆದ್ದಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 64 ಸ್ಥಾನಗಳನ್ನು ಗೆದ್ದಿತ್ತು. ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಬೆನ್ನಲ್ಲೇ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್‌ ನಾಯಕತ್ವದ ವಿರುದ್ಧ ಅಪಸ್ವರ ಎದ್ದಿದೆ. ಯೋಗಿ ಕಾರ್ಯಶೈಲಿಯೇ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣ ಎಂದು ಸೋತ ನಾಯಕರು ಆರೋಪಿಸಿದ್ದಾರೆ.

ವಿಶ್ವ ನಾಯಕ ಮೋದಿಗೆ 10 ಕೋಟಿ ‘ಎಕ್ಸ್‌’ ಫಾಲೋವರ್ಸ್‌: ಮೈಲಿಗಲ್ಲು!

ಇದರ ನಡುವೆ ಡಿಸಿಎಂ ಮೌರ್ಯ ಕಳೆದ ವಾರ ಹೇಳಿಕೆ ನೀಡಿ, ‘ಸರ್ಕಾರಕ್ಕಿಂತ ಪಕ್ಷ ಸಂಘಟನೆಯೇ ಮುಖ್ಯ’ ಎಂದಿದ್ದರು. ಇದು ಯೋಗಿ ವಿರುದ್ಧದ ಬಂಡಾಯದ ಸುಳಿವು ನೀಡಿತ್ತು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕೂಡ ಸದ್ಯದಲ್ಲೇ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯನ್ನು ಬದಲಿಸಲಾಗುತ್ತದೆ ಎಂದು ಹೇಳಿದ್ದರು. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರೂ ಬುಧವಾರ ಇದೇ ರೀತಿಯ ಹೇಳಿಕೆ ನೀಡಿದ್ದು, ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತದಿಂದ ರಾಜ್ಯದ ಆಡಳಿತ ಹಳ್ಳ ಹಿಡಿದಿದೆ ಎಂದು ಆರೋಪಿಸಿದ್ದಾರೆ.

ಈ ನಡುವೆ, ರಾಜ್ಯದ ಸಚಿವರ ಜೊತೆ ಸಭೆ ನಡೆಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೂಡಲೇ ಉಪ ಚುನಾವಣೆಗೆ ಎಲ್ಲರೂ ಒಗ್ಗಟ್ಟಿನಿಂದ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದಾರೆ.

click me!