
ಬೆಂಗಳೂರು, (ಜೂನ್.04): ಮುಂದಿನ ದಿನಗಳಲ್ಲಿ ಎದುರಾಗುವ ಉಪಚುನಾವಣೆ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದಕ್ಕೂ ಮೊದಲು ಪಕ್ಷದ ಇಮೇಜ್ ಹೆಚ್ಚಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಶಾಸಕರ ಜೊತೆ ವೈಯಕ್ತಿಕವಾಗಿ ಚರ್ಚೆ ನಡೆಸಲಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಸಭೆ ಮಾಡಿದ್ದೆವು. ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಮುಂದಿನ ಉಪಚುನಾವಣೆ (ಸಿಂದಗಿ) ಬಗ್ಗೆ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆ ವೇಳೆ ಪ್ರಚಾರದ ರೀತಿಯಲ್ಲಿ ತಾ.ಪಂ ಮತ್ತು ಜಿ.ಪಂ ಚುನಾವಣೆ ಗೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ ಮಾಹಿತಿ ನೀಡಿದರು.
ನಡ್ಡಾ ಭೇಟಿಯಾದ ವಿಜಯೇಂದ್ರ: ರಾಜ್ಯ ಬಿಜೆಪಿಯಲ್ಲಿ ರಂಗೇರಿದ ರಾಜಕೀಯ
ಚುನಾವಣೆ ಬಗ್ಗೆ ಎಲ್ಲಾ ಶಾಸಕರು ಮತ್ತು ಸಚಿವರ ಜೊತೆಗೆ ಚರ್ಚೆ ಮಾಡಲು ತಿರ್ಮಾನ ಮಾಡಿದ್ದೇವೆ. ಪಕ್ಷ ಸಂಘಟನೆಯ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಶಾಸಕಾಂಗ ಸಭೆ ಕರೆಯುವ ಬಗ್ಗೆ ಚರ್ಚೆ ಮಾಡಿಲ್ಲ. ಆದರೆ ಶಾಸಕರ ಜೊತೆಗೆ ವೈಯಕ್ತಿಕವಾಗಿ ಚರ್ಚೆ ಮಾಡುವ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಸ್ಪಷ್ಟಪಡಿಸಿದರು.
ಅನಾಥ ಶವಗಳ ಅಸ್ಥಿ ವಿಸರ್ಜನೆ ಮಾಡಿದ ಬೆನ್ನಲ್ಲೇ ತಿಥಿ ಮಾಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಚರ್ಚೆ ಮುಂದುವರಿದಿದೆ. ಕೊಡಗು – ಕೇರಳ ಗಡಿ ಭಾಗದಲ್ಲಿ ಒಂದು ನಿರ್ದಿಷ್ಟ ಜಾಗ ಗುರುತಿಸಿದ್ದೇವೆ ಶೀಘ್ರದಲ್ಲೇ ಈ ಕುರಿತು ಕ್ರಮ ಕೈಗೊಳ್ಳುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.