ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ

Published : Nov 01, 2024, 04:32 PM IST
ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ

ಸಾರಾಂಶ

ಉಪ ಚುನಾವಣೆಯ ಮತದಾನಕ್ಕೆ ಇನ್ನೇನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಹಾಗೂ ಮುಖಂಡರು ಜಿದ್ದಿಗೆ ಬಿದ್ದವರಂತೆ ಮತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಶಾಲಾ ಹಂತದ ಮಕ್ಕಳನ್ನು ಚುನಾವಣೆ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಷ್ಟೆಲ್ಲಾ ನಡೆದರೂ ಚುನಾವಣಾಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.  

ಎಂ.ಅಫ್ರೋಜ್ ಖಾನ್

ರಾಮನಗರ(ನ.01):  ಚುನಾವಣೆಯಲ್ಲಿ ಪ್ರಚಾರಕ್ಕೆ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಖಡಕ್‌ ಸೂಚನೆ ನೀಡಿದೆ. ಆದರೂ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಚಿಕ್ಕ ಮಕ್ಕಳನ್ನು ಪ್ರಚಾರದಲ್ಲಿ ವ್ಯಾಪಕವಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಕಂಡುಬರುತ್ತಿದೆ.

ಉಪ ಚುನಾವಣೆಯ ಮತದಾನಕ್ಕೆ ಇನ್ನೇನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಹಾಗೂ ಮುಖಂಡರು ಜಿದ್ದಿಗೆ ಬಿದ್ದವರಂತೆ ಮತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಶಾಲಾ ಹಂತದ ಮಕ್ಕಳನ್ನು ಚುನಾವಣೆ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಷ್ಟೆಲ್ಲಾ ನಡೆದರೂ ಚುನಾವಣಾಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.

ಕುಮಾರಸ್ವಾಮಿಯಿಂದ ನಯಾಪೈಸೆ ಉಪಯೋಗವಾಗಲಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್

ಮಕ್ಕಳನ್ನು ಎತ್ತಿಕೊಳ್ಳುವಂತೆಯೂ ಇಲ್ಲ:

ಚುನಾವಣಾ ಪ್ರಚಾರದ ವೇಳೆ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು ಮಗುವನ್ನು ಎತ್ತಿ ಹಿಡಿಯುವಂತಿಲ್ಲ. ಅಲ್ಲದೆ ಮಗುವನ್ನು ವಾಹನದಲ್ಲಿ ಕುಳ್ಳಿರಿಸಿಕೊಂಡು ಹೋಗುವುದು ಅಥವಾ ರ್‍ಯಾಲಿಗಳಲ್ಲಿ ಕರೆದೊಯ್ಯುವುದು, ಹೀಗೆ ಯಾವುದೇ ರೀತಿಯಲ್ಲಿ ಪ್ರಚಾರ ಕಾರ್ಯಗಳಿಗೆ ಮಕ್ಕಳನ್ನು ಬಳಸಬಾರದು ಎಂದು ಚುನಾವಣಾ ಆಯೋಗವು ಹೇಳಿದೆ.

ಒಂದು ವೇಳೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷ, ಯಾವುದೇ ರೂಪದಲ್ಲಾದರೂ ಮಕ್ಕಳನ್ನು ಬಳಸಿಕೊಂಡರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದೆ. ಆದರೆ, ಇದ್ಯಾವುದನ್ನು ಲೆಕ್ಕಿಸದ ರಾಜಕೀಯ ಮುಖಂಡರು ಮಕ್ಕಳನ್ನು ಕರಪತ್ರ ಹಂಚಿಸಲು ಹಾಗೂ ನಾಯಕರ ಪರ ಘೋಷಣೆ ಕೂಗಿಸಲು ಬಳಸಿಕೊಳ್ಳುತ್ತಿದ್ದಾರೆ.

ಶಾಲಾ, ಕಾಲೇಜುಗಳಿಗೆ ದೀಪಾವಳಿ ರಜೆ:

ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಹಜವಾಗಿ ಮಕ್ಕಳು ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಆಯಾಯ ರಾಜಕೀಯ ಮುಖಂಡರು ಹಾಗೂ ಕಾರ್ಯಕರ್ತರು ಚಿಕ್ಕ ಮಕ್ಕಳು ಎಂಬುದನ್ನು ಮರೆತು, ಪ್ರಚಾರ ಕಾರ್ಯ ಹಾಗೂ ರ್‍ಯಾಲಿಗಳಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಆಯೋಗದ ಸೂಚನೆಯನ್ನು ಉಲ್ಲಂಘಿಸುತ್ತಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಅಭ್ಯರ್ಥಿಯಾಗಿದ್ದು ದೇವರ ನಿರ್ಧಾರ - ಹೆಚ್‌ಡಿಕೆ

ಮಕ್ಕಳ ಬಳಕೆ ಅಪರಾಧ

ಯಾವುದೇ ವಯಸ್ಸಿನ ಮಕ್ಕಳನ್ನು ಚುನಾವಣೆ ಪ್ರಚಾರದಲ್ಲಿ ತೊಡಗಸಿಕೊಳ್ಳುವುದು ಅಪರಾಧ. 18 ವರ್ಷದೊಳಗಿನ ಮಕ್ಕಳನ್ನು ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಮಕ್ಕಳ ಹಕ್ಕುಗಳ ಒಪ್ಪಂದ ಹಾಗೂ ಮಕ್ಕಳ ನ್ಯಾಯ ಕಾಯಿದೆ ಅನ್ವಯ 18 ವರ್ಷದೊಳಗಿನವರನ್ನು ಮಕ್ಕಳು ಎಂದು ಪರಿಗಣಿಸಲಾಗಿದೆ. ಅಪಾಯಕಾರಿ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕು ಉಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ.

ಚುನಾವಣೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಪ್ರಚಾರ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತಿಲ್ಲ. ಚುನಾವಣೆ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳುವಂತಿಲ್ಲ. ಚನ್ನಪಟ್ಟಣ ಉಪಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿ ಕೊಳ್ಳುತ್ತಿರುವ ಕುರಿತು ಯಾವುದೇ ದೂರು ಇಲ್ಲಿವರೆಗೂ ಬಂದಿಲ್ಲ ಎಂದು ರಾಮನಗರ ಜಿಲ್ಲಾಮಕ್ಕಳ ರಕ್ಷಣಾಧಿಕಾರಿ ರಜನಿ ತಿಳಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್